ವಿಕಲಚೇತನರಿಗೆ ಸಹಕಾರ ಅಗತ್ಯ
ಕೊಡಗು

ವಿಕಲಚೇತನರಿಗೆ ಸಹಕಾರ ಅಗತ್ಯ

December 12, 2018

ಸೋಮವಾರಪೇಟೆ: ವಿಕಲ ಚೇತನರ ಬಗ್ಗೆ ಅನುಕಂಪ ತೋರದೆ ಅವರಿಗೆ ಅವಕಾಶ ನೀಡುವ ಮೂಲಕ ಮುಖ್ಯ ವಾಹಿನಿಗೆ ತರುವಂತಾಗಬೇಕು ಎಂದು ತಾಲೂಕು ಪಂಚಾಯ್ತಿ ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷೆ ತಂಗಮ್ಮ ಹೇಳಿದರು.

ಸಾರ್ವಜನಿಕ ಶಿಕ್ಷಣ ಇಲಾಖೆ, ಸರ್ವ ಶಿಕ್ಷಣ ಅಭಿಯಾನ ಆಶ್ರಯದಲ್ಲಿ ವಿಶ್ವ ವಿಕಲ ಚೇತನರ ದಿನಾಚರಣೆ ಅಂಗವಾಗಿ ಪಟ್ಟಣದ ಜಿಎಂಪಿ ಶಾಲಾ ಮೈದಾನದಲ್ಲಿ ಆಯೋಜಿಸ ಲಾಗಿದ್ದ ಕ್ರೀಡಾಕೂಟ ಹಾಗೂ ಸಾಂಸ್ಕøತಿಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ವಿಕಲಚೇತನರ ಅಭ್ಯುದಯಕ್ಕಾಗಿ ಎಲ್ಲರೂ ಶ್ರಮಿಸಬೇಕಾಗಿದೆ. ಆಕಸ್ಮಿಕವಾಗಿ ವಿಕಲಚೇತ ನರಾಗಿ ಜನಿಸಿದ ಇಂತಹ ಮಕ್ಕಳ ಬಗ್ಗೆ ಅನುಕಂಪಕ್ಕಿಂತ ಹೆಚ್ಚಾಗಿ ಅವಕಾಶಗಳು ನೀಡ ಬೇಕಾಗಿದೆ. ಗ್ರಾಮೀಣ ಭಾಗದಲ್ಲಿರುವ ವಿಕಲಚೇತನರನ್ನು ಗುರುತಿಸಿ ಅವರಿಗೆ ಸೌಲಭ್ಯ ದೊರಕುವಂತೆ ಮಾಡಬೇಕೆಂದು ಮನವಿ ಮಾಡಿದರು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಹೆಚ್.ಎಸ್. ಮಂಜುನಾಥ್ ಮಾತ ನಾಡಿ, ಶಿಕ್ಷಣ ಇಲಾಖೆ ವಿಕಲಚೇತನರ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು. ಕೇವಲ ಕಾಟಾಚಾರಕ್ಕೆ ಕ್ರೀಡಾಕೂಟ ಆಯೋಜಿಸುವುದು ಸರಿಯಲ್ಲ. ಮುಂದಿನ ದಿನಗಳಲ್ಲಿ ಇಂತಹ ಕಾರ್ಯಕ್ರಮ ಆಯೋಜಿಸುವಾಗ ಶಿಕ್ಷಕರ ಸಂಘವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕೆಂದು ಸಲಹೆ ನೀಡಿದರು. ಸ್ವಸ್ಥ ಸಂಸ್ಥೆಯ ಸಮುದಾಯ ಆಧಾರಿತ ಪುನರ್ವಸತಿ ಯೋಜನೆಯ ಸಂಯೋ ಜಕ ಎಸ್.ಮುರುಗೇಶ್ ಮಾತನಾಡಿ, ಜಿಲ್ಲೆಯಲ್ಲಿ ಈಗಾಗಲೇ 9 ಸಾವಿರ ಮಂದಿ ವಿಕಲ ಚೇತನರು ತಮ್ಮ ಹೆಸರನ್ನು ನೊಂದಾಯಿಸಿಕೊಂಡಿದ್ದಾರೆ. ಇನ್ನು ಬಹಳಷ್ಟು ಮಂದಿ ನೊಂದಾಯಿಸಿಕೊಳ್ಳಲು ಬಾಕಿ ಇರಬಹುದು. ಅಂತಹವರನ್ನು ಗುರುತಿಸಬೇಕಾಗಿದೆ ಹಾಗೂ ಸರ್ಕಾರ ವಿಕಲಚೇತನರಿಗೆ ನೀಡುವ ಸೌಲಭ್ಯಗಳನ್ನು ತಲುಪಬೇಕಾಗಿದೆ ಎಂದರು.

ವೇದಿಕೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ನಾಗರಾಜಯ್ಯ, ತಾಲೂಕು ವಿಕಲಚೇತನರ ಸಂಘದ ಅಧ್ಯಕ್ಷ ಸಂಗಮೇಶ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕಾರ್ಯದರ್ಶಿ ಟಿ.ಕೆ.ಬಸವರಾಜ್, ವಿಭಾಗೀಯ ಉಪಾಧ್ಯಕ್ಷ ಸಿ.ಕೆ.ಶಿವಕುಮಾರ್, ಪ್ರಮುಖರುಗಳಾದ ಹರೀಶ್, ಶಾಂತಕುಮಾರ್, ಶಶಿಧರ್, ವೆಂಕಟೇಶ್ ಹಾಗೂ ಇತರರು ಉಪಸ್ಥಿತರಿದ್ದರು.

Translate »