ಮಂಡ್ಯದಲ್ಲಿ ಇಬ್ಬರು ಡಿಸ್ಚಾರ್ಜ್: 14 ಮಂದಿಗೆ ಚಿಕಿತ್ಸೆ ಮುಂದುವರಿಕೆ
ಮೈಸೂರು

ಮಂಡ್ಯದಲ್ಲಿ ಇಬ್ಬರು ಡಿಸ್ಚಾರ್ಜ್: 14 ಮಂದಿಗೆ ಚಿಕಿತ್ಸೆ ಮುಂದುವರಿಕೆ

May 12, 2020

ಮಂಡ್ಯ, ಮೇ 11- ಜಿಲ್ಲೆಯಲ್ಲಿ ಸೋಮವಾರ ಇಬ್ಬರು ಸೋಂಕಿತರು ಡಿಸ್ಚಾರ್ಜ್ ಆಗಿದ್ದು, 14 ಮಂದಿಗೆ ಚಿಕಿತ್ಸೆ ಮುಂದುವರೆದಿದೆ ಎಂದು ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕ ಟೇಶ್ ತಿಳಿಸಿದರು. ಜಿಲ್ಲೆಯಲ್ಲಿ ಒಟ್ಟು 29 ಪ್ರಕರಣಗಳು ದಾಖಲಾಗಿದ್ದು, ಈ ಹಿಂದೆ 14 ಮಂದಿ ಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರು. ಇಂದು ಪಿ.505 ಮತ್ತು ಪಿ.512 ಕೂಡ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಒಟ್ಟು 16ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯ 13 ಮಂದಿ ಹಾಗೂ ಹಾಸನ ಮೂಲದ ಒಬ್ಬರು ಜಿಲ್ಲೆಯ ವಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಮಾಹಿತಿ ನೀಡಿದರು.

Translate »