ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸುವ ಶಿಕ್ಷಕರ ವಿರುದ್ಧ ಶಿಸ್ತು ಕ್ರಮ
ಚಾಮರಾಜನಗರ

ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸುವ ಶಿಕ್ಷಕರ ವಿರುದ್ಧ ಶಿಸ್ತು ಕ್ರಮ

June 5, 2018

ಚಾಮರಾಜನಗರ:  ಜಿಲ್ಲೆಯಲ್ಲಿ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸುವ ಶಿಕ್ಷಕರ ವಿರುದ್ಧ ನಿಯಮಾನುಸಾರ ಶಿಸ್ತು ಕ್ರಮ ಜರುಗಿಸಲಾಗುತ್ತದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಮಹದೇವಪ್ಪ ಅವರು ಎಚ್ಚರಿಕೆ ನೀಡಿದ್ದಾರೆ. ರಾಮಸಮುದ್ರದ ಸಿಆರ್ ಬಾಲಪಟ್ಟಣ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಮೇಲೆ ಶಿಕ್ಷಕರೊಬ್ಬರು ಹಲ್ಲೆ ನಡೆಸಿರುವುದು ಇಲಾಖೆ ಮಟ್ಟದಲ್ಲಿ ತಲೆತಗ್ಗಿಸುವಂತಾಗಿದೆ. ಹಲ್ಲೆ ಮಾಡಿದ ಶಿಕ್ಷಕರ ವಿರುದ್ಧ ಶಿಸ್ತುಕ್ರಮ ಜರುಗಿಸಲಾಗಿದೆ. ಇಂಥಹ ಪ್ರಕರಣಗಳು ಪುನರಾವರ್ತನೆಯಾಗಬಾರದು. ವಿದ್ಯಾರ್ಥಿಗಳ ಮೇಲೆ ದೈಹಿಕ ಅಥವಾ ಮಾನಸಿಕ ಹಿಂಸೆ, ಹಲ್ಲೆ ಮಾಡುವುದು ಮಕ್ಕಳ ರಕ್ಷಣಾ ಹಕ್ಕು ನಿಯಮ ಉಲ್ಲಂಘನೆ ಮಾಡಿದಂತಾಗುತ್ತದೆ ಎಂದು ತಿಳಿಸಿದ್ದಾರೆ.

ಜಿಲ್ಲೆಯ ಎಲ್ಲ ಶಾಲೆಗಳಲ್ಲಿ ಯಾವುದೇ ವಿದ್ಯಾರ್ಥಿಯ ಮೇಲೆ ದೈಹಿಕ ಹಲ್ಲೆ ನಡೆಸಬಾರದು. ಹೆಚ್ಚು ಹೋಂವರ್ಕ್ ನೀಡಬಾರದು. ಪುಸ್ತಕ ಹೊರೆಯಾಗದಂತೆ ಅಗತ್ಯ ಕ್ರಮಗಳನ್ನು ಶಿಕ್ಷಕರು ವಹಿಸಬೇಕು. ಈ ಎಲ್ಲ ವಿಷಯಗಳ ಸಂಬಂಧ ತುರ್ತಾಗಿ ವರದಿ ಮಾಡುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಮಹದೇವಪ್ಪ ಅವರು ಜಿಲ್ಲೆಯ ಐದೂ ವಲಯಗಳ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಕಟ್ಟುನಿಟ್ಟಾಗಿ ಸೂಚಿಸಿದ್ದಾರೆ.

Translate »