ಸರ್ಕಾರಿ ಶಾಲೆಗಳಲ್ಲೂ ಎಲ್‍ಕೆಜಿ, ಯುಕೆಜಿ  ಆರಂಭಿಸಲು ಚಿಂತನೆ
ಮೈಸೂರು

ಸರ್ಕಾರಿ ಶಾಲೆಗಳಲ್ಲೂ ಎಲ್‍ಕೆಜಿ, ಯುಕೆಜಿ  ಆರಂಭಿಸಲು ಚಿಂತನೆ

June 19, 2018

ಮೈಸೂರು:  ಸರ್ಕಾರಿ ಶಾಲೆಗಳ ಉನ್ನತೀಕರಣಕ್ಕೆ ಕ್ರಮ ಕೈಗೊಂಡು ಸಮಗ್ರ ಬದಲಾವಣೆ ತರುವ ಸಂಬಂಧ ಕಾರ್ಯಕ್ರಮಗಳನ್ನು ರೂಪಿಸುವುದಾಗಿ ಈಗಾಗಲೇ ಮುಖ್ಯಮಂತ್ರಿ ಹೆಚ್.ಡಿ. ಕುಮಾರ ಸ್ವಾಮಿ ಅವರು ಘೋಷಣೆ ಮಾಡಿದ್ದಾರೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎನ್.ಮಹೇಶ್ ಪ್ರತಿಕ್ರಿಯಿಸಿದರು.

ಮಹಾರಾಜ ಪ್ರೌಢ ಶಾಲೆಗೆ ಭೇಟಿ ನೀಡಿದ್ದ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸರ್ಕಾರಿ ಶಾಲೆ ಗಳಲ್ಲಿ ಗುಣಮಟ್ಟದ ಶಿಕ್ಷಣ ಖಾತರಿಪಡಿಸುವಂತಹ ಕಾರ್ಯಕ್ರಮ ನೀಡಲು ಸಿಎಂ ಕ್ರಮ ಕೈಗೊಳ್ಳಲಿದ್ದಾರೆ. ಖಾಸಗಿ ಶಾಲೆಗಳ ಮಾದರಿಯಲ್ಲಿ ಎಲ್‍ಕೆಜಿ, ಯುಕೆಜಿ ತರಗತಿಗಳನ್ನು ಸರ್ಕಾರಿ ಶಾಲೆಗಳಲ್ಲೂ ಆರಂಭಿಸಿ, ಇಂಗ್ಲಿಷನ್ನು ಒಂದು ಭಾಷೆಯಾಗಿ ಕಲಿಸುವ ವಿಧಾನಗಳನ್ನು ಅಳವಡಿಸಿ ಕೊಂಡು ಉತ್ತೇಜನ ನೀಡುವ ಉದ್ದೇಶ ಸರ್ಕಾರದ ಮುಂದಿದೆ ಎಂದು ತಿಳಿಸಿದರು.

ಮಂತ್ರಿ-ಅಧಿಕಾರಿ ಮಕ್ಕಳು ಸರ್ಕಾರಿ ಶಾಲೆಗೆ: ಮುಖ್ಯಮಂತ್ರಿಗಳು, ಸಚಿವರು, ಉನ್ನತ ಅಧಿಕಾರಿಗಳು ಸೇರಿದಂತೆ ಸರ್ಕಾರಿ ಅಧಿಕಾರಿಗಳು ಹಾಗೂ ಶಿಕ್ಷಕರ ಮಕ್ಕಳನ್ನು ಸರ್ಕಾರಿ ಶಿಕ್ಷಣ ಸಂಸ್ಥೆಗಳಿಗೆ ದಾಖಲು ಮಾಡಲು ಕಾರ್ಯಕ್ರಮ ರೂಪಿಸಲಾಗುತ್ತಿದೆ.

ಇದನ್ನು ಕಡ್ಡಾಯ ಮಾಡಲು ಸಾಧ್ಯವಿಲ್ಲ. ಅವರಿಗೆ ಒಂದು `ಆಯ್ಕೆ’ಯಾಗಿ ನೀಡಲಾಗುವುದು. ನನಗೆ ಬಂದಿರುವ ಮಾಹಿತಿ ಪ್ರಕಾರ ಸರ್ಕಾರಿ ಶಾಲಾ-ಕಾಲೇಜು ಶಿಕ್ಷಕರು ಖಾಸಗಿ ಸಂಸ್ಥೆಗಳ ಶಿಕ್ಷಕರಿಗಿಂತ ಉನ್ನತ ಅರ್ಹತೆ ಹಾಗೂ ಪರಿಣಿತಿ ಹೊಂದಿದ್ದಾರೆ. ಇದನ್ನು ಸಮರ್ಪಕವಾಗಿ ಬಳಸು ವಲ್ಲಿ ನಾವು ವಿಫಲರಾಗಿದ್ದೇವೆ. ಶಿಕ್ಷಕರಿಗೆ ಬೋಧನೆಯಲ್ಲಿ ತೊಡಗಿಸಿಕೊಳ್ಳಲು ಇನ್ನಿತರ ಕಾರ್ಯದೊತ್ತಡದಿಂದ ಮುಕ್ತ ಗೊಳಿಸಲು ಕ್ರಮ ವಹಿಸಲಾಗುವುದು ಎಂದರು.

ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕರಲ್ಲಿ ಹಲವರು ಖಾಸಗಿ ಶಾಲೆಗಳೊಂದಿಗೆ ಶಾಮೀಲಾಗಿ ವಿದ್ಯಾರ್ಥಿಗಳು ಖಾಸಗಿ ಶಾಲೆಗಳಿಗೆ ಸೇರುವಂತೆ ನೋಡಿಕೊಳ್ಳುತ್ತಿ ದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿ ದಂತೆ ಪ್ರತಿಕ್ರಿಯಿಸಿದ ಅವರು, ಪರಿಶೀಲಿಸಿ ಹಾಗೇನಾದರೂ ನಡೆದಿರುವುದು ಕಂಡು ಬಂದರೆ, ತಪ್ಪಿತಸ್ಥರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದ ಅವರು, ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳ ಸಮ ವಸ್ತ್ರ ಪೂರೈಸುವ ಟೆಂಡರ್ ಸಂಬಂಧ ಕಳೆದ ಸಿದ್ದರಾಮಯ್ಯ ನೇತೃತ್ವದ ಸರ್ಕಾ ರದಲ್ಲಿ ಭಾರೀ ಅಕ್ರಮ ನಡೆದಿದೆ ಎಂಬ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಆರೋಪ ಸಂಬಂಧ ಪರಿಶೀಲಿಸಲಾ ಗುವುದು ಎಂದು ಪ್ರತಿಕ್ರಿಯಿಸಿದರು.

Translate »