ಗುಡ್ಡೆಹೊಸೂರಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಣೆ
ಕೊಡಗು

ಗುಡ್ಡೆಹೊಸೂರಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಣೆ

April 25, 2021

ಗುಡ್ಡೆಹೊಸೂರು, ಏ.24- ಗುಡ್ಡೆ ಹೊಸೂರು ಗ್ರಾಮ ಪಂಚಾಯತಿ ವ್ಯಾಪ್ತಿ ಯಲ್ಲಿ ಕೊರೊನಾ ಪಾಸಿಟಿವ್ ಪ್ರಕರಣ ಗಳು ಕಂಡು ಬಂದಿರುವ ಹಿನ್ನೆಲೆಯಲ್ಲಿ ಪಂಚಾಯಿತಿ ವತಿಯಿಂದ ಶನಿವಾರ ಇಡೀ ಗ್ರಾಮಕ್ಕೆ ಸೋಡಿಯಂ ಹೈಪೆÇೀಕ್ಲೋರೈಡ್ ಸಿಂಪಡಣೆ ಮಾಡಲಾಯಿತು.

ಗ್ರಾಮದ ಶಿವಕುಮಾರ ವೃತ್ತ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಿಗೆ ಹಾಗೂ ಸಾರ್ವಜನಿಕ ಸ್ಥಳಗಳಿಗೆ ಪಂಚಾಯಿತಿ ಪೌರಕಾರ್ಮಿಕರು ಸ್ಯಾನಿಟೈಜರ್ ಸಿಂಪಡಣೆ ಮಾಡಿದರು. ಗ್ರಾಮದ ವಸತಿ ಗೃಹವೊಂದರ 9 ಮಂದಿಗೆ ಕೊರೊನಾ ಪಾಸಿಟಿವ್ ಕಂಡು ಬಂದಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಗ್ರಾಮ ಪಂಚಾಯಿತಿ ಅಧ್ಯಕ್ಷೆ ನಂದಿನಿ ನೇತೃತ್ವದಲ್ಲಿ ಔಷಧಿ ಸಿಂಪಡಣೆ ಕಾರ್ಯ ನಡೆಯಿತು. ಈ ಸಂದರ್ಭ ಗ್ರಾ.ಪಂ.ಸದಸ್ಯರು ಹಾಗೂ ಅಭಿವೃದ್ಧಿ ಅಧಿಕಾರಿ ಶ್ಯಾಮ್ ಹಾಜರಿದ್ದರು.

ಸಂಪೂರ್ಣ ಬಂದ್ : ವೀಕೆಂಡ್ ಕರ್ಫ್ಯೂಗೆ ಗುಡ್ಡೆಹೊಸೂರು ಗ್ರಾ.ಪಂ. ಸಂಪೂರ್ಣ ಬಂದ್ ಆಗಿತ್ತು. ಎಲ್ಲ ಅಂಗಡಿ ಮುಂಗಟ್ಟುಗಳು ಮುಚ್ಚಿದ್ದವು.

Translate »