ಮೈಸೂರು: ಶ್ರೀರಾಮನ ಕುರಿತು ವಿವಾದಿತ ಹೇಳಿಕೆಗಳ ಬೆನ್ನಲ್ಲೇ ಸೀತೆಯ ಆಹಾರ ಕ್ರಮದ ಬಗ್ಗೆ ವಿವಾದಿತ ಹೇಳಿಕೆ ನೀಡಿದ್ದ ಪೆರಿಯಾರ್ ಚಿಂತಕಿ ಕಲೈ ಸೆಲ್ವಿ ವಿರುದ್ಧ ಜಯಲಕ್ಷ್ಮೀಪುರಂ ಠಾಣೆಯಲ್ಲಿ ದೂರು ಸಲ್ಲಿಕೆಯಾಗಿದೆ.
ಸೀತೆ ಬಗ್ಗೆ ನಿಂಧನಾತ್ಮಕ ಹೇಳಿಕೆ ನೀಡುವ ಮೂಲಕ ಬಹುಜನರ ಧಾರ್ಮಿಕ ಭಾವನೆಗೆ ಧಕ್ಕೆ ತಂದಿದ್ದಾರೆ ಎಂದು ಶ್ರೀರಾಮಸೇನೆ ಮೈಸೂರು ನಗರ ಘಟಕದ ಅಧ್ಯಕ್ಷ ಎಂ. ಸಂಜಯ್ ದೂರಿನಲ್ಲಿ ಆರೋಪಿಸಿದ್ದಾರೆ.
ನಗರದ ಕಲಾಮಂದಿದರ ಕಿರು ರಂಗಮಂದಿರದಲ್ಲಿ ಶುಕ್ರವಾರ ಸಂಜೆ ನಡೆದ ಕಾರ್ಯಕ್ರಮದಲ್ಲಿ ಲೇಖಕಿ ಕಲೈ ಸೆಲ್ವಿ ಭಾಗವಹಿಸಿ, ಸೀತೆ, ಮಾಂಸ ಸೇವಿಸುತ್ತಿದ್ದರು ಎಂದು ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿರುವ ಬಗ್ಗೆ ಸಾಕ್ಷಿ ಸಮೇತ ಜಯಲಕ್ಷ್ಮೀಪುರಂ ಠಾಣೆಗೆ ದೂರು ನೀಡಿದ್ದು, ಪೆÇಲೀಸರು ದೂರು ಸ್ವೀಕರಿಸಿದ್ದಾರೆ.