ಚುನಾವಣಾ ಕರ್ತವ್ಯಕ್ಕೆ ಅಡ್ಡಿ: ಸಾರಿಗೆ ಇಲಾಖಾ ಪ್ರಭಾರ ಅಧಿಕಾರಿ ಅಮಾನತು
ಕೊಡಗು

ಚುನಾವಣಾ ಕರ್ತವ್ಯಕ್ಕೆ ಅಡ್ಡಿ: ಸಾರಿಗೆ ಇಲಾಖಾ ಪ್ರಭಾರ ಅಧಿಕಾರಿ ಅಮಾನತು

April 10, 2019

ಮಡಿಕೇರಿ: ವಿರಾಜಪೇಟೆ ಸಮೀಪದ ಪೆರುಂ ಬಾಡಿ ಚೆಕ್‍ಪೋಸ್ಟ್‍ನಲ್ಲಿ ಮಾ.28ರಂದು ರಾತ್ರಿ 10 ಗಂಟೆಯ ಸಮಯದಲ್ಲಿ ಚುನಾವಣಾ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪದಲ್ಲಿ ಕೊಡಗು ಜಿಲ್ಲಾ ಸಾರಿಗೆ ಇಲಾ ಖೆಯ ಪ್ರಭಾರ ಅಧಿಕಾರಿ ಜೆ.ಪಿ.ಗಂಗಾಧರ ಎಂಬು ವರನ್ನು ಕರ್ತವ್ಯದಿಂದ ಅಮಾನತು ಮಾಡಲಾಗಿದೆ.

ಕೊಡಗು ಜಿಲ್ಲಾಧಿಕಾರಿಗಳು ಪ್ರಭಾರ ಸಾರಿಗೆ ಅಧಿಕಾರಿಯ ವಿರುದ್ದ ಕ್ರಮ ಕೈಗೊಳ್ಳುವಂತೆ ರಾಜ್ಯ ಸಾರಿಗೆ ಆಯುಕ್ತರಿಗೆ ಶಿಫಾರಸ್ಸು ಮಾಡಿದ ಹಿನ್ನಲೆಯಲ್ಲಿ ಸಾರಿಗೆ ಆಯುಕ್ತರು ಮತ್ತು ಶಿಸ್ತು ಸಮಿತಿಯು ಅಧಿಕಾರಿಯನ್ನು ಅಮಾನತು ಮಾಡಿದ್ದಾರೆ. ಚುನಾವಣಾ ಕರ್ತವ್ಯದಲ್ಲಿದ್ದ ಎಸ್.ಎಸ್.ಟಿ. ತಂಡದ ಅಧಿಕಾರಿ ಹಾಗೂ ಪೆರುಂಬಾಡಿ ಚೆಕ್‍ಪೋಸ್ಟ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಹಾತೂರು ಗ್ರಾಪಂ ಪಿಡಿಓ ಕೆ.ಎಂ.ತಿಮ್ಮಯ್ಯ ಅವರ ವಿರುದ್ಧ ಶಿಸ್ತು ಕ್ರಮ ಜರುಗಿಸುವಂತೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವ ಹಣಾ ಅಧಿಕಾರಿಗೆ ಸೂಚನೆ ನೀಡಿದ್ದಾರೆ.

ಪ್ರಕರಣ ಹಿನ್ನಲೆ: ಸಾರಿಗೆ ಇಲಾಖೆಯ ಪ್ರಭಾರ ಅಧಿಕಾರಿ ಗಂಗಾಧರ ಅವರನ್ನು ಜಿಲ್ಲಾ ಚುನಾವಣಾ ನೋಡಲ್ ಅಧಿಕಾರಿಯನ್ನಾಗಿ ನೇಮಿಸಲಾಗಿತ್ತು. ಆದರೆ ಚೆಕ್‍ಪೋಸ್ಟ್ ನಲ್ಲಿ ತಪಾಸಣೆ ಮಾಡುವಂತೆ ಯಾವುದೇ ಸೂಚನೆ ನೀಡಿ ರಲಿಲ್ಲ. ಹೀಗಿದ್ದರೂ, ಮಾ.28ರಂದು ರಾತ್ರಿ 10ಗಂಟೆಗೆ ಪೆರುಂಬಾಡಿ ಚೆಕ್‍ಪೋಸ್ಟ್‍ಗೆ ತೆರಳಿ ಕೇರಳ-ಕೊಡಗು ಮಾರ್ಗವಾಗಿ ಸಂಚರಿಸುತ್ತಿದ್ದ ವಾಹನಗಳನ್ನು ಪ್ರಭಾರ ಸಾರಿಗೆ ಅಧಿಕಾರಿ ಗಂಗಾಧರ ತಪಾಸಣೆ ನಡೆಸಿದ್ದರ ಬಗ್ಗೆ ದೂರು ದಾಖಲಾಗಿತ್ತು. ಈ ಬಗ್ಗೆ ವಿಚಾರಣೆ ನಡೆಸಿದ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾ ಅಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಕರ್ತವ್ಯದಲ್ಲಿದ್ದ ಇಬ್ಬರೂ ಅಧಿಕಾರಿಗಳು ಸರಕಾರಿ ನೌಕರರು ತರವಲ್ಲದ ರೀತಿಯಲ್ಲಿ ನಡೆದುಕೊಂಡಿದ್ದಾರೆ ಎಂದು ವರದಿ ನೀಡಿದ್ದರು. ಈ ಹಿನ್ನಲೆ ಯಲ್ಲಿ ಪ್ರಕರಣದ ವಿಚಾರಣೆಯನ್ನು ಕಾಯ್ದಿರಿಸಿ ಪ್ರಭಾರ ಸಾರಿಗೆ ಅಧಿಕಾರಿಯನ್ನು ಅಮಾನತು ಮಾಡಲಾಗಿದೆ. ಎಸ್.ಎಸ್.ಟಿ. ಅಧಿಕಾರಿ ಕೆ.ಎಂ. ತಿಮ್ಮಯ್ಯ ಅವರ ವಿರುದ್ಧವೂ ಶಿಸ್ತು ಕ್ರಮ ಕೈಗೊಳ್ಳುವಂತೆ ಜಿಪಂ ಸಿಇಓ ಅವರಿಗೆ ಸೂಚಿಸಿರುವು ದಾಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾ ಅಧಿಕಾರಿ ಅನೀಸ್ ಕಣ್ಮಣಿ ಜಾಯ್ಸ್ ತಿಳಿಸಿದ್ದಾರೆ.

Translate »