ಲಾನ್ಸ್‍ಡೌನ್, ದೇವರಾಜ ಮಾರುಕಟ್ಟೆ ಕಟ್ಟಡ  ನೆಲಸಮಕ್ಕೆ ಮೈಸೂರು ರಾಜಮನೆತನದ ಅಸಮಾಧಾನ
ಮೈಸೂರು

ಲಾನ್ಸ್‍ಡೌನ್, ದೇವರಾಜ ಮಾರುಕಟ್ಟೆ ಕಟ್ಟಡ ನೆಲಸಮಕ್ಕೆ ಮೈಸೂರು ರಾಜಮನೆತನದ ಅಸಮಾಧಾನ

February 6, 2019

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಲಾನ್ಸ್ ಡೌನ್ ಕಟ್ಟಡ ಮತ್ತು ದೇವರಾಜ ಮಾರುಕಟ್ಟೆ ನೆಲಸಮ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರು ರಾಜಮನೆತನ ದಿಂದಲೂ ತೀವ್ರ ವಿರೋಧ ವ್ಯಕ್ತವಾಗಿದೆ. ಈಗಾಗಲೇ ಲಾನ್ಸ್ ಡೌನ್ ಬಿಲ್ಡಿಂಗ್ ಹಾಗೂ ದೇವರಾಜ ಮಾರುಕಟ್ಟೆ ನೆಲಸಮ ಮಾಡಲು ಮೈಸೂರು ಮಹಾನಗರ ಪಾಲಿಕೆ ಚಿಂತನೆ ನಡೆಸುತ್ತಿದೆ ಎನ್ನಲಾಗಿದೆ. ಇದಕ್ಕೆ ರಾಜಮನೆತನ ವಿರೋಧ ವ್ಯಕ್ತಪಡಿಸಿದೆ.

ಈ ಸಂಬಂಧ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮ ರಾಜ ಒಡೆಯರ್ ಅವರು, ಪಾರಂಪರಿಕ ಕಟ್ಟಡ ಉಳಿಸುವಂತೆ ಸಾಮಾಜಿಕ ಜಾಲತಾಣದಲ್ಲಿ ಪೆÇೀಸ್ಟ್ ಮಾಡಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಕುರಿತಂತೆ ತಮ್ಮ ಫೇಸ್ ಬುಕ್ ಖಾತೆಯಲ್ಲಿ ವಿಷಯ ಹಂಚಿಕೊಂಡಿರುವ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಮೈಸೂರು ಪರಂಪರೆ ಕಟ್ಟಡಗಳನ್ನು ಉಳಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಎಂದು ತಿಳಿಸಿದ್ದಾರೆ. ಈ ಮೂಲಕ ಕಟ್ಟಡಗಳ ಸಂರಕ್ಷಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರಕ್ಕೆ ಯದುವೀರ್ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ.

Translate »