ಅತೃಪ್ತ ಶಾಸಕರು ಪಕ್ಷ ಬಿಡದ ವಿಶ್ವಾಸವಿದೆ

ಬೆಂಗಳೂರು: ಅತೃಪ್ತ ಶಾಸಕರು ಪಕ್ಷ ಬಿಡಲ್ಲ, ಎಲ್ಲವೂ ಸರಿಯಾಗಲಿದೆ ಎಂಬ ವಿಶ್ವಾಸ ಇರುವುದಾಗಿ ಕಾಂಗ್ರೆಸ್ ಹಿರಿಯ ಮುಖಂಡ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ವಿಧಾನಸೌಧದ ಬಳಿ ಸುದ್ದಿಗಾರರೊಂದಿಗೆ ಮಾತ ನಾಡಿದ ಅವರು, ಸುಪ್ರೀಂಕೋರ್ಟ್ ಆದೇಶದಂತೆ ಅತೃಪ್ತ ಶಾಸಕರು ಸ್ಪೀಕರ್ ಮುಂದೆ ಹಾಜರಾಗುತ್ತಿದ್ದು, ಈ ವಿಚಾರವನ್ನು ಸ್ಪೀಕರ್ ರಮೇಶ್‍ಕುಮಾರ್ ಬಗೆಹರಿಸಲಿದ್ದಾರೆ ಎಂದರು. ಸಂವಿಧಾನದ 190ನೇ ವಿಧಿ ಪ್ರಕಾರ, ಯಾವುದೇ ಶಾಸಕರು ರಾಜೀನಾಮೆ ನೀಡಿದಾಗ ಸ್ಪೀಕರ್ ವಿಚಾರಣೆ ಮಾಡಿ ನಿರ್ಧಾರ ಕೈಗೊಳ್ಳುವ ಅಧಿಕಾರವಿದೆ. ಸ್ವಇಚ್ಛೆಯಿಂದ ರಾಜೀನಾಮೆ ನೀಡಬೇಕಾಗುತ್ತದೆ ಎಂದು ವಿ.ಎಸ್.ಉಗ್ರಪ್ಪ ಹೇಳಿದರು. ಮುಂಬೈಯಿಂದ ಬೆಂಗಳೂರಿಗೆ ಆಗಮಿಸಿರುವ ಎಲ್ಲಾ ಅತೃಪ್ತ ಶಾಸಕರು ಸ್ಪೀಕರ್ ರಮೇಶ್ ಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ. ಸ್ಪೀಕರ್ ಕೈಗೊಳ್ಳುವ ನಿರ್ಧಾರ ತೀವ್ರ ಕುತೂಹಲ ಕೆರಳಿಸಿದೆ.