ಹಾಲು, ಪಡಿತರ ಸಮರ್ಪಕವಾಗಿ ವಿತರಿಸಿ ಜಿಲ್ಲಾ ಉಸ್ತುವಾರಿ ಸಚಿವ ಸುರೇಶ್ ಕುಮಾರ್ ಸೂಚನೆ 

ಚಾಮರಾಜನಗರ, ಏ.5- ಜಿಲ್ಲೆಯಲ್ಲಿ ಕೋವಿಡ್-19 ತಡೆಗೆ ಜಾರಿಯಲ್ಲಿರುವ ಲಾಕ್ ಡೌನ್ ಹಿನ್ನೆಲೆಯಲ್ಲಿ ಹಾಲು, ಪಡಿತರವನ್ನು ಸಮರ್ಪಕವಾಗಿ ವಿತರಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಸುರೇಶ್‍ಕುಮಾರ್ ಸೂಚಿಸಿದರು.

ಕೋವಿಡ್-19ರ ತಡೆಗಾಗಿ ಜಿಲ್ಲಾಡಳಿತ ಕೈಗೊಂಡಿರುವ ಮುನ್ನೆಚ್ಚರಿಕೆ ಕ್ರಮಗಳ ಹಿನ್ನೆಲೆಯಲ್ಲಿ ವಿವಿಧ ಸ್ಥಳಗಳಿಗೆ ಭೇಟಿ ನೀಡಿದÀ ಉಸ್ತುವಾರಿ ಸಚಿವರು, ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಅಧಿಕಾರಿ ಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕೊಳಚೆ ಪ್ರದೇಶದ ವಾಸಿಗಳು, ವಲಸೆ ಕಾರ್ಮಿಕರು, ಕಟ್ಟಡ ಕಾರ್ಮಿಕರಿಗೆ ಹಾಲು ವಿತರಣೆ ಯಾಗುತ್ತಿದೆ. ಇದನ್ನು ಅತ್ಯಂತ ಹೊಣೆಗಾರಿಕೆ ಯಿಂದ ಅರ್ಹರಿಗೆ ಅವರು ಇರುವ ಕಡೆಗೆ ನೇರ ವಾಗಿ ತಲುಪಿಸಬೇಕು. ಯಾವುದೇ ಪ್ರದೇಶದಲ್ಲಿ ಒಂದೆಡೆ ಇರಿಸದೇ ಅರ್ಹರಿಗೆ ಖುದ್ದಾಗಿ ತಲುಪಿ ದೆಯೇ ಎಂಬ ಬಗ್ಗೆ ಪರಿಶೀಲಿಸಬೇಕು ಎಂದರು.

ಪಡಿತರದಾರರಿಗೆ 2 ತಿಂಗಳ ಪಡಿತರವನ್ನು ಮುಂಗಡವಾಗಿ ನೀಡಲಾಗುತ್ತಿದೆ. ಇದನ್ನು ಪಡೆಯು ವಾಗ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಸೂಚಿಸಬೇಕು. ಪಡಿತರದಾರರಿಗೆ ಯಾವುದೇ ತೊಂದರೆಯಾಗಬಾರದು. ಹೆಚ್ಚು ಜನಜಂಗುಳಿಯಾಗ ದಂತೆ ಸುಗಮವಾಗಿ ಪಡಿತರ ವಿತರಿಸಬೇಕು ಎಂದರು.

ಕೃಷಿ ಚಟುವಟಿಕೆಗಳಿಗೆ ಪೂರಕವಾಗಿರುವ ಬಿತ್ತನೆ ಬೀಜ, ರಸಗೊಬ್ಬರ, ಕೃಷಿ ಪರಿಕರಗಳಿಗೆ ಕೊರತೆಯಾಗಬಾರದು. ತೋಟಗಾರಿಕೆ, ಕೃಷಿ ಉತ್ಪನ್ನಗಳ ಮಾರಾಟ ಸಾಗಣೆಗೆ ಯಾವುದೇ ಅಡಚಣೆಯಾಗದಂತೆ ನೋಡಿಕೊಳ್ಳಬೇಕು, ರಸ ಗೊಬ್ಬರ ಕೃಷಿ ಪರಿಕರಗಳ ಅಂಗಡಿ ತೆರೆದು ಅನುಕೂಲ ಕಲ್ಪಿಸಿಕೊಡಬೇಕು ಎಂದರು.

ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಮಾತನಾಡಿ, ಕೃಷಿ ಪರಿಕರಗಳ ಅಂಗಡಿ ತೆರೆಯಲು ಪ್ರಸ್ತುತ ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೆ ಕಾಲಾವಕಾಶ ನೀಡಲಾಗಿದೆ. ಅಗತ್ಯ ಬೇಡಿಕೆ ಇದ್ದರೆ ಸಮಯ ವಿಸ್ತರಿ ಸಲು ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದರು.

ಶಾಸಕ ಎನ್.ಮಹೇಶ್, ಸಿ.ಎಸ್.ನಿರಂಜನ್ ಕುಮಾರ್ ಮಾತನಾಡಿ, ಹಾಲು ವಿತರಣೆ ಕಾರ್ಯ ಸಮರ್ಪಕವಾಗಿ ನಡೆಯಬೇಕು, ಅಕ್ರಮ ಮದ್ಯ ಮಾರಾಟವಾಗದಂತೆ ನಿಗಾ ವಹಿಸಬೇಕು ಎಂದರು. ಹೆಚ್ಚುವರಿ ಜಿಲ್ಲಾಧಿಕಾರಿ ಸಿ.ಎಲ್. ಆನಂದ್, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿ ಕಾರಿ ಅನಿತಾ ಹದ್ದಣ್ಣನವರು, ಮೆಡಿಕಲ್ ಕಾಲೇಜ್ ಡೀನ್ ಡಾ.ಸಂಜೀವ್, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಎಂ.ಸಿ.ರವಿ ಇತರೆ ಅಧಿಕಾರಿಗಳು ಹಾಜರಿದ್ದರು.

ಸಭೆ ಆರಂಭಕ್ಕೂ ಮೊದಲು ಉಸ್ತುವಾರಿ ಸಚಿವರು, ಶಾಸಕರು, ಜಿಲ್ಲಾಧಿಕಾರಿ ಸೇರಿದಂತೆ ಇತರರು ಡಾ.ಬಾಬುಜಗಜೀವನ್‍ರಾಂ  ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು.