ಓಆರ್‍ಎಸ್, ಜಿಂಕ್ ಮಾತ್ರೆಗಳನ್ನು ಉಚಿತವಾಗಿ ವಿತರಿಸಿ: ಜಿಲ್ಲಾಧಿಕಾರಿ

ಹಾಸನ: ಜಿಲ್ಲೆಯಾದ್ಯಂತ ಅತಿ ಸಾರ ಬೇಧಿಯಿಂದ ಸಾವಿಗೀಡಾಗುವ ಮಕ್ಕಳ ಸಂಖ್ಯೆಯನ್ನು ಶೂನ್ಯಕ್ಕಿಳಿಸಲು ಪರಿಣಾಮ ಕಾರಿ ಕ್ರಮ ಕೈಗೊಂಡು ಸೂಕ್ತ ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಹೇಳಿದರು.
ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ಅತಿಸಾರ ಬೇಧಿಯ ತೀವ್ರತರ ನಿಯಂತ್ರಣ ಪಾಕ್ಷಿಕ ಸಭೆಯಲ್ಲಿ ಮಾತ ನಾಡಿದ ಅವರು, ಜಿಲ್ಲೆಯಲ್ಲಿ 5 ವರ್ಷದ 1,28,096 ಮಕ್ಕಳನ್ನು ಗುರುತಿಸಲಾಗಿದ್ದು, ಆಶಾ ಕಾರ್ಯಕರ್ತೆಯರು ಪ್ರತಿ ಮನೆ-ಮನೆಗಳಿಗೆ ಭೇಟಿ ನೀಡಿ ಮಕ್ಕಳಿಗೆ ಓಆರ್ ಎಸ್ ವಿತರಿಸಬೇಕು. ಜೊತೆಗೆ, ಸಾರ್ವ ಜನಿಕರಿಗೆ ಸ್ವಚ್ಛತೆಯ ಬಗ್ಗೆ ಅರಿವು ಮೂಡಿ ಸುವುದು, ಎಲ್ಲಾ ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಸರಿಯಾದ ರೀತಿಯಲ್ಲಿ ಹೇಗೆ ಕೈಯನ್ನು ಸ್ವಚ್ಛಗೊಳಿಸಬೇಕು ಎಂಬ ಪ್ರಾತ್ಯಕ್ಷಿಕೆ ಮೂಲಕ ತಿಳಿಸಬೇಕು ಎಂದರು.

ಎಲ್ಲಾ ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳಲ್ಲಿ, ಓಆರ್‍ಎಸ್ ಜೊತೆಗೆ ಜಿಂಕ್ ಮಾತ್ರೆಗಳನ್ನು ಉಚಿತವಾಗಿ ವಿತರಿ ಸಲು ಹಾಗೂ ಇದರ ಬಗ್ಗೆ ಅರಿವು ಮೂಡಿ ಸಲು ಜಿಂಕ್ ಕಾರ್ನರ್ ಸ್ಥಾಪಿಸಿ ಸೂಕ್ತ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಆರೋಗ್ಯ ಇಲಾಖೆ ಸಿಬ್ಬಂದಿಗಳು ಮುಂದಿನ 15 ದಿನಗಳ ಕಾಲ ಸಾರ್ವ ಜನಿಕ ಕುಡಿಯುವ ನೀರಿನ ಸಂಗ್ರಹಗಳ ಸ್ವಚ್ಛತೆಗೊಳಿಸಿರುವ ಬಗ್ಗೆ ಪರಿಶೀಲಿಸ ಬೇಕು. ಶಾಲೆಗಳಲ್ಲಿರುವಂತಹ ಕುಡಿ ಯುವ ನೀರಿನ ತೊಟ್ಟಿಗಳನ್ನು ಆಗಿಂ ದಾಗ್ಗೆ ಸ್ವಚ್ಛಗೊಳಿಸಲು ಕ್ರಮವಹಿಸಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಿಗೆ ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್, ಆರ್‍ಸಿಹೆಚ್ ಅಧಿಕಾರಿ ಡಾ.ಜನಾರ್ಧನ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಮಂಜುನಾಥ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಪಾಪಬೋವಿ ಹಾಜರಿದ್ದರು.