ಪೌರಕಾರ್ಮಿಕರಿಗೆ ಸುರಕ್ಷಾ ಆರೋಗ್ಯ ಕಿಟ್ ವಿತರಿಸಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಕೋಟೆ ಎಂ.ಶಿವಣ್ಣ ಸೂಚನೆ

ಚಾಮರಾಜನಗರ, ಜು.7- ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರ ಕಾರ್ಮಿಕರಿಗೆ ವೈಜ್ಞಾನಿಕ ಆರೋಗ್ಯ ಪರಿ ಕರಗಳ ಸುರಕ್ಷಾ ಕಿಟ್‍ಗಳನ್ನು ಸಂಬಂಧ ಪಟ್ಟ ಅಧಿಕಾರಿಗಳು ವಿತರಿಸಬೇಕು ಎಂದು ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಕೋಟೆ ಎಂ.ಶಿವಣ್ಣ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಬುಧವಾರ ಕೋವಿಡ್-19 2ನೇ ಅಲೆ ಹಿನ್ನೆಲೆಯಲ್ಲಿ ಜಿಲ್ಲೆಯ ಪೌರಕಾರ್ಮಿಕರಿಗೆ ನಗರ, ಸ್ಥಳೀಯ ಸಂಸ್ಥೆಗಳು ಒದಗಿಸುತ್ತಿ ರುವ ವಿವಿಧ ಸೌಲಭ್ಯಗಳ ಕುರಿತು ನಡೆದ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕೋವಿಡ್ ತಡೆಯುವ ಸಂದರ್ಭದಲ್ಲಿ ಪ್ರಮುಖವಾಗಿ ಪೌರಕಾರ್ಮಿಕರ ಹಿತ ಕಾಯುವುದು ನಗರ ಸ್ಥಳೀಯ ಸಂಸ್ಥೆಗಳ ಆದ್ಯತಾ ಕೆಲಸವಾಗಿದೆ. ಕೋವಿಡ್ ಸಂದರ್ಭದಲ್ಲಿ ಪೌರಕಾರ್ಮಿಕರಿಗೆ ನೀಡುವ ಸುರಕ್ಷಾ ಕಿಟ್‍ಗಳು ಉತ್ಕøಷ್ಟ ಗುಣಮಟ್ಟದ್ದಾಗಿರಬೇಕು ಎಂದರು.
ಚಾಮರಾಜನಗರ ನಗರಸಭಾ ವ್ಯಾಪ್ತಿಯಲ್ಲಿ 31 ವಾರ್ಡ್‍ಗಳಿದ್ದು, 3 ಮಸ್ಟರಿಂಗ್ ವಿಶ್ರಾಂತಿ ಕೊಠಡಿ ಕೇಂದ್ರ ಗಳನ್ನು ತೆರೆಯಲಾಗಿದ್ದು, ವಿಶ್ರಾಂತಿ ಕೊಠಡಿ ಗಳನ್ನು ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ತೆರೆಯಬೇಕು. ವಿಶ್ರಾಂತಿ ಕೊಠಡಿಗಳಲ್ಲಿ ಕುಡಿಯುವ ನೀರು ಸೇರಿದಂತೆ ಎಲ್ಲಾ ಮೂಲ ಸೌಲಭ್ಯಗಳಿರುವಂತೆ ನೋಡಿ ಕೊಳ್ಳಬೇಕು. ಅಲ್ಲದೆ ಪೌರಕಾರ್ಮಿಕರಿಗೆ ಅಗತ್ಯವಾದ ಮಾಸ್ಟರ್ ಚೆಕಪ್ ಅನ್ನು ನಿಯಮಿತವಾಗಿ ಮಾಡಿಸುವ ಕೆಲಸ ಆಗಬೇಕಿದೆ ಎಂದು ತಿಳಿಸಿದರು.

ಪೌರಕಾರ್ಮಿಕರಿಗೆ ಕೋವಿಡ್ ಲಸಿಕಾ ಕರಣ ಕಾರ್ಯದಲ್ಲಿ ಮೊದಲ ಡೋಸ್ ನೀಡಿಕೆಯಲ್ಲಿ ಶೇ. 80ರಷ್ಟು ಗುರಿ ಸಾಧಿಸ ಲಾಗಿದ್ದು, ಎರಡನೇ ಡೋಸ್ ನೀಡಿಕೆ ಯಲ್ಲೂ ಪ್ರಗತಿ ಕಾಣಬೇಕಿದೆ. ಯಾವುದೇ ಪೌರಕಾರ್ಮಿಕರು ಲಸಿಕೆಯಿಂದ ವಂಚಿತ ರಾಗದಂತೆ ಅಧಿಕಾರಿಗಳು ಗಮನಹರಿಸ ಬೇಕು. ಪೌರಕಾರ್ಮಿಕರ ಸಮಸ್ಯೆಗಳನ್ನು ಲಘುವಾಗಿ ಪರಿಗಣಿಸದೇ ಪರಿಹರಿಸಿ ಕೊಳ್ಳಲು ವಿಶೇಷ ಕ್ರಮವಹಿಸಬೇಕು ಎಂದು ಕಟ್ಟುನಿಟ್ಟಾಗಿ ನಿರ್ದೇಶನ ನೀಡಿದರು.

ಜಿಲ್ಲೆಯ ನಗರ, ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಪೌರಕಾರ್ಮಿಕರನ್ನು ಹೊರತು ಪಡಿಸಿ ಬಸ್ ನಿಲ್ದಾಣ, ಇತರೆ ಕಚೇರಿ ಗಳು, ವಿದ್ಯಾರ್ಥಿ ನಿಲಯಗಳಲ್ಲಿ ಸ್ವಚ್ಛತಾ ಕೆಲಸ ಮಾಡುವ ಪೌರಕಾರ್ಮಿಕರಿಗೆ ಕನಿಷ್ಠ ವೇತನ ನಿಯಮದಡಿ ಕ್ರಮ ಬದ್ಧವಾದ ವೇತನ ಪಾವತಿಸಬೇಕು. ಇಂತಹ ಪೌರಕಾರ್ಮಿಕರಿಗೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳು ಪೌರಕಾರ್ಮಿಕರ ದೃಢೀಕರಣ ಪತ್ರ ನೀಡುವಲ್ಲಿ ಮುಂದಾಗಬೇಕು. ಇದರಿಂದ ಸರ್ಕಾರದ ವಿವಿಧ ಸೌಲಭ್ಯ ಪಡೆಯಲು ಅನುಕೂಲವಾಗಲಿದೆ ಎಂದು ತಿಳಿಸಿದರು.

ಇದೇ ವೇಳೆ ಮಲೆ ಮಹದೇಶ್ವರ ಬೆಟ್ಟ ವ್ಯಾಪ್ತಿಯಲ್ಲಿ ಕೆಲಸ ನಿರ್ವಹಿಸುತ್ತಿರುವ ಪೌರಕಾರ್ಮಿಕರು ಹಾಗೂ ಇತರೆ ಪೌರಕಾರ್ಮಿಕರ ಸಮಸ್ಯೆಗಳನ್ನು ಆಲಿಸಿದ ಶಿವಣ್ಣ ಅವರು ಸಂಬಂಧಪಟ್ಟ ಅಧಿಕಾರಿ ಗಳ ಸಭೆ ನಡೆಸಿ ಸಮಸ್ಯೆ ಇತ್ಯರ್ಥ ಪಡಿಸುತ್ತೇನೆ ಎಂದು ಭರವಸೆ ನೀಡಿದರು.
ರಾಜ್ಯದಲ್ಲಿನ ಎಲ್ಲಾ ಪೌರಕಾರ್ಮಿಕರ ಮಕ್ಕಳಿಗೂ 1ನೇ ತರಗತಿಯಿಂದ ಪದವಿ ವರೆಗೂ ಉಚಿತ ಶಿಕ್ಷಣ ಕೊಡಿಸುವುದು ಸೇರಿದಂತೆ ಉನ್ನತ ಶಿಕ್ಷಣ ಪಡೆದ ವಿದ್ಯಾರ್ಥಿ ಗಳಿಗೆ ಉಚಿತ ಲ್ಯಾಪ್‍ಟಾಪ್ ನೀಡುವ ಬಗ್ಗೆ ಆಯೋಗ ಚಿಂತನೆ ನಡೆಸಿದೆ. ಅಲ್ಲದೆ ಕೆಎಸ್‍ಎಸ್ ಹಾಗೂ ಎಎಸ್‍ಎಸ್ ಪರೀಕ್ಷೆ ಗಳಿಗೆ ಕೋಚಿಂಗ್ ನೀಡಲು ಯೋಜಿಸ ಲಾಗಿದೆ. ಈ ನಿಟ್ಟಿನಲ್ಲಿ ಪೌರಕಾರ್ಮಿಕರು ತಮ್ಮ ಮಕ್ಕಳಿಗೆ ಶಿಕ್ಷಣ ಕೊಡಿಸಲು ಮುಂದಾಗಬೇಕು ಎಂದು ತಿಳಿಸಿದರು.

ಸಭೆಯಲ್ಲಿ ನಗರಸಭೆ ಅಧ್ಯಕ್ಷೆ ಆಶಾ ನಟರಾಜು, ಉಪಾಧ್ಯಕ್ಷೆ ಸುಧಾ, ಸದಸ್ಯರಾದ ನೀಲಮ್ಮ, ಜಿಲ್ಲಾ ಪಂಚಾ ಯತ್ ಮುಖ್ಯ ಕಾರ್ಯನಿರ್ವಹಣಾ ಧಿಕಾರಿ ಹರ್ಷಲ್ ಬೋಯರ್ ನಾರಾ ಯಣರಾವ್, ಉಪವಿಭಾಗಾಧಿಕಾರಿ ಡಾ.ಗಿರೀಶ್ ದಿಲೀಪ್ ಬಡೋಲೆ, ಪೌರಾ ಯುಕ್ತ ಕರಿಬಸವಯ್ಯ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಭಾಗೀರಥಿ, ಹಿರಿಯ ಆರೋಗ್ಯ ನಿರೀಕ್ಷಕ ಶರವಣ, ಸಮುದಾಯ ಸಂಘಟಕ ವೆಂಕಟ ನಾಯಕ್, ಪರಿಸರ ಅಧಿಕಾರಿ ಗಿರಿಜ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿ ಅಧಿಕಾರಿಗಳು ಹಾಜರಿದ್ದರು.