ವಿಕಲಚೇತನರಿಗೆ ಸಾಧನ ಸಲಕರಣೆ ವಿತರಣೆ
ಮೈಸೂರು

ವಿಕಲಚೇತನರಿಗೆ ಸಾಧನ ಸಲಕರಣೆ ವಿತರಣೆ

September 24, 2020

ಮೈಸೂರು, ಸೆ.23-ಜಿಲ್ಲಾ ಅಂಗವಿಕಲರ ಪುನರ್ವಸತಿ ಕೇಂದ್ರ ಭಾರತೀಯ ರೆಡ್‍ಕ್ರಾಸ್ ಸಂಸ್ಥೆ ಹಾಗೂ ಜಿಲ್ಲಾ ಅಂಗವಿಕಲರ ಕಲ್ಯಾಣ ಇಲಾಖೆಯಲ್ಲಿ ವಿಕಲಚೇತನರಿಗೆ ಸಾಧನ ಸಲಕರಣೆ ಗಳನ್ನು ಗುರುತಿಸಿ ಮತ್ತು ಸಾಧನ ಸಲಕರಣೆಗಳನ್ನು ವಿತರಿಸ ಲಾಯಿತು. ಜಿಲ್ಲಾ ಅಂಗವಿಕಲರ ಪುನರ್ವಸತಿ ಕೇಂದ್ರ ಯೋಜನೆ ಯಡಿಯಲ್ಲಿ ಜಿಲ್ಲಾ ಅಂಗವಿಕಲರ ಪುನರ್ವಸತಿ ಕೇಂದ್ರವನ್ನು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಂಪೂರ್ಣ ಅನುದಾನದೊಂದಿಗೆ ಭಾರತೀಯ ರೆಡ್‍ಕ್ರಾಸ್ ಸೊಸೈಟಿ, ಮೈಸೂರು ಶಾಖೆ ಇವರು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ರಚನೆ ಯಾಗಿರುವ ಜಿಲ್ಲಾ ನಿರ್ವಹಣಾ ಸಮಿತಿಯ ಮೇಲ್ವಿಚಾರಣೆ ಯಲ್ಲಿ ನವೆಂಬರ್ 2011ರಿಂದ ಅನುಷ್ಠಾನಗೊಳಿಸುತ್ತಿದೆ. ಈ ಕೇಂದ್ರ ದಿಂದ ವಿವಿಧ ವಿಕಲಚೇತನರಿಗೆ ಸಮಗ್ರ ಪುನರ್ವಸತಿ ಸೇವೆಗಳಾದ ವೈದ್ಯಕೀಯ, ಶೈಕ್ಷಣಿಕ ಮತ್ತು ಸಾಮಾಜಿಕ ಪುನರ್ವಸತಿ ಸೇವೆ ಗಳನ್ನು ಒದಗಿಸುತ್ತಾ ವಿಕಲಚೇತನರನ್ನು ಸಮಾಜದ ಮುಖ್ಯವಾಹಿಗೆ ತರುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಕೇಂದ್ರವು ನವೆಂ ಬರ್-2011ರಿಂದ ಇದುವರೆವಿಗೂ ವಿವಿಧ ವಿಕಲಚೇತನರನ್ನು ಗುರುತಿಸಿ, ವಿವಿಧ ಸಾಧನ ಸಲಕರಣೆಗಳನ್ನು ಮತ್ತು ವೈದ್ಯಕೀಯ ಸೇವೆಗಳನ್ನು ಒದಗಿಸಲಾಗುತ್ತದೆ. ಸಾಧನ ಸಲಕರಣೆಗಳನ್ನು ವಿತರಿ ಸುವ ಕಾರ್ಯಕ್ರಮದಲ್ಲಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಮಾಲಿನಿ ಹಾಗೂ ಅಂಗವಿಕಲ ಪುನರ್ವಸತಿ ಕೇಂದ್ರದ ನೋಡೆಲ್ ಅಧಿಕಾರಿ ಅರ್ಜುನ್ ಹಾಗೂ ಹಾಗೂ ಕೇಂದ್ರದ ತಜ್ಞರು ಮತ್ತು ಮೈಸೂರು ತಾಲೂಕಿನ ಗ್ರಾಮೀಣ ಪುನರ್ವಸತಿ ಕಾರ್ಯ ಕರ್ತರು ಹಾಜರಿದ್ದರು ಎಂದು ಭಾರತೀಯ ರೆಡ್‍ಕ್ರಾಸ್ ಸೊಸೈಟಿಯ ನೋಡಲ್ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Translate »