ಚಾಮರಾಜನಗರದಲ್ಲಿ ಕಾರ್ಮಿಕರಿಗೆ ಸ್ಮಾರ್ಟ್‍ಕಾರ್ಡ್ ವಿತರಣೆ
ಚಾಮರಾಜನಗರ

ಚಾಮರಾಜನಗರದಲ್ಲಿ ಕಾರ್ಮಿಕರಿಗೆ ಸ್ಮಾರ್ಟ್‍ಕಾರ್ಡ್ ವಿತರಣೆ

January 29, 2019

ಚಾಮರಾಜನಗರ: ಕಾರ್ಮಿಕರ ಕುಟುಂಬಗಳಿಗೆ ವಿವಿಧ ಸೌಲಭ್ಯಗಳನ್ನು ಕಲ್ಪಿಸಲು ನೆರವಾಗುವ ಸ್ಮಾರ್ಟ್ ಕಾರ್ಡ್‍ನ್ನು ಪಡೆಯಲು ಜಿಲ್ಲೆಯಲ್ಲಿ ಹೆಚ್ಚು ಕಾರ್ಮಿಕರು ನೋಂದಣಿ ಮಾಡಿಸುವಂತೆ ಶಾಸಕ ಎನ್. ಮಹೇಶ್ ಸಲಹೆ ನೀಡಿದರು.

ನಗರದ ಜೆ.ಎಚ್. ಪಟೇಲ್ ಸಭಾಂಗಣ ದಲ್ಲಿ ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾ ಯತ್ ಹಾಗೂ ಕಾರ್ಮಿಕ ಇಲಾಖೆ ಆಶ್ರಯ ದಲ್ಲಿ ನರೇಗಾ ಯೋಜನೆಯಡಿ ಕೆಲಸ ನಿರ್ವಹಿಸುವ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ನೀಡುವ ಸ್ಮಾರ್ಟ್ ಕಾರ್ಡ್ ವಿತರಣಾ ಚಾಲನಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಕಾರ್ಮಿಕ ಇಲಾಖೆ ವತಿಯಿಂದ ಕಾರ್ಮಿಕರ ಆರೋಗ್ಯ, ಮಕ್ಕಳ ಶೈಕ್ಷಣಿಕ ಚಟುವಟಿಕೆಗಳಿಗೆ, ಅಪಘಾತ ಮತ್ತಿತರ ಸಂದರ್ಭದಲ್ಲಿ ಸರ್ಕಾರ ನೆರವಾಗಲಿದೆ. ಇದಕ್ಕಾಗಿಯೇ ಕಾರ್ಮಿಕರು ಸ್ಮಾರ್ಟ್ ಕಾರ್ಡ್‍ಗೆ ನೊಂದಾಯಿಸಿ, ಕಾರ್ಮಿಕರ ಕಲ್ಯಾಣಕ್ಕಾಗಿ ಅನುಷ್ಠಾನಗೊಳಿಸುತ್ತಿರುವ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು ಎಂದು ಮಹೇಶ್ ತಿಳಿಸಿದರು.

ಅಸಂಘಟಿತ ವಲಯದಲ್ಲಿರುವ ಕಟ್ಟಡ ನಿರ್ಮಾಣ ಕಾರ್ಮಿಕರು, ಉದ್ಯೋಗ ಖಾತರಿ ಯೋಜನೆಯಡಿ ಕೆಲಸ ನಿರ್ವಹಿ ಸುವ ಕಾರ್ಮಿಕರನ್ನು ಗುರುತಿಸಿ ಸ್ಮಾರ್ಟ್ ಕಾರ್ಡ್ ವಿತರಿಸುವ ಉತ್ತಮ ಕೆಲಸವನ್ನು ಜಿಲ್ಲಾಡಳಿತ ಮಾಡುತ್ತಿದೆ. ಜಿಲ್ಲೆಯಲ್ಲಿ ನೋಂದಣಿ ಸಂಖ್ಯೆಯೂ ಹೆಚ್ಚಳವಾಗ ಬೇಕಿದೆ ಎಂದು ಅವರು ತಿಳಿಸಿದರು.

ಕಾರ್ಮಿಕರಿಗೆ ಭವಿಷ್ಯ ನಿಧಿ, ಭತ್ಯೆ, ವೇತನ, ರಜೆ ಸೇರಿದಂತೆ ಹಲವಾರು ಸೌಲಭ್ಯಗಳಿಗೆ ಡಾ. ಬಿ.ಆರ್. ಅಂಬೇಡ್ಕರ್ ಅವರು ಕಾರ್ಮಿಕ ಸಚಿವರಾಗಿದ್ದ ಸಮಯದಲ್ಲಿಯೇ ಬುನಾದಿ ಹಾಕಿಕೊಟ್ಟಿದ್ದಾರೆ. ಅಂದೇ ಕಾರ್ಮಿಕರ ಕಲ್ಯಾಣಕ್ಕೆ ಸಂಬಂಧಿಸಿ ದಂತೆ ಹಲವಾರು ಕಾರ್ಯಕ್ರಮಗಳನ್ನು ಜಾರಿಗೆ ತರಲಾಯಿತು ಎಂದು ಮಹೇಶ್ ತಿಳಿಸಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿ ಕಾರಿ ಬಿ.ಬಿ. ಕಾವೇರಿ, ಕಾರ್ಮಿಕರ ಹಿತರಕ್ಷಣೆಗೆ ಸಾಕಷ್ಟು ಸೌಲಭ್ಯಗಳು ಇವೆ. ಆದರೆ ಈ ಬಗ್ಗೆ ವ್ಯಾಪಕವಾಗಿ ಅರಿವು ಮೂಡಿಸಬೇ ಕಿದೆ. ಎಲ್ಲ ಕಾರ್ಮಿಕರಿಗೆ ಇಲಾಖೆಯ ಸವಲತ್ತು ಗಳು ತಲುಪಬೇಕು. ಹೀಗಾಗಿ ಅಧಿಕಾರಿಗಳು ಆಯಾ ಇಲಾಖೆಯ ಕಾಮಗಾರಿ ನಿರ್ವ ಹಿಸುವ ಕಾರ್ಮಿಕರಿಗೂ ಕಡ್ಡಾಯವಾಗಿ ನೋಂದಣಿ ಮಾಡಿಸಿ ಸ್ಮಾರ್ಟ್ ಕಾರ್ಡ್ ಪಡೆಯಲು ನೆರವಾಗ ಬೇಕು ಎಂದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಡಾ. ಕೆ. ಹರೀಶ್ ಕುಮಾರ್ ಮಾತನಾಡಿ, ಅಸಂಘಟಿತ ವಲಯದ ಕಾರ್ಮಿಕರ ಬಗ್ಗೆ ಸರ್ಕಾರ ಕಾಳಜಿ ವಹಿಸಿದೆ. ಕಾರ್ಮಿಕರಲ್ಲೂ ಜಾಗೃತಿ ಮೂಡುತ್ತಿದೆ. ಉದ್ಯೋಗ ಖಾತರಿ ಯೋಜನೆ ಯಡಿ ಕೆಲಸ ನಿರ್ವಹಿಸುವ ಕಾರ್ಮಿಕ ರಿಗೂ ಸ್ಮಾರ್ಟ್ ಕಾರ್ಡ್ ನೀಡುವ ಮೂಲಕ ಸೌಲಭ್ಯಗಳ ನೆರವು ಪಡೆಯಲು ಅವಕಾಶ ಕಲ್ಪಿಸಲಾಗಿದೆ ಎಂದರು.

ತಾಲೂಕು ಪಂಚಾಯತ್ ಉಪಾಧ್ಯಕ್ಷ ಬಿ. ಬಸವಣ್ಣ ಮಾತನಾಡಿ, ಕೃಷಿ ಕೆಲಸ ನಿರ್ವಹಿಸುವ ಕಾರ್ಮಿಕರನ್ನೂ ಕಾರ್ಮಿಕ ಇಲಾಖೆ ಸೌಲಭ್ಯಕ್ಕೆ ಒಳಪಡಿಸಬೇಕಿದೆ. ಕೃಷಿ ಕಾರ್ಮಿಕರೂ ಸಹ ಸಂಕಷ್ಟಕ್ಕೆ ಸಿಲುಕಿ ದ್ದಾರೆ. ಹೀಗಾಗಿ ಕೃಷಿ ಕೆಲಸ ಮಾಡುವ ಕಾರ್ಮಿಕರನ್ನೂ ನೊಂದಾಯಿಸಿ ಕಾರ್ಡ್ ನೀಡುವ ಸೌಲಭ್ಯ ಪಡೆಯುವಂತಾ ಗಬೇಕು ಎಂದರು. ರಾಜ್ಯ ಕಟ್ಟಡ ಕಾರ್ಮಿಕರ ಮಂಡಳಿಯ ಸದಸ್ಯ ಪ್ರಕಾಶ್ ಮಾತನಾಡಿ ದರು. ಇದೇ ವೇಳೆ ಕಾರ್ಮಿಕ ಇಲಾಖೆಯ ಸವಲತ್ತುಗಳನ್ನು ವಿತರಿಸಲಾಯಿತು.

ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ಯೋಗೀಶ್, ತಾಲೂಕು ಪಂಚಾಯತ್ ಅಧ್ಯಕ್ಷೆ ದೊಡ್ಡಮ್ಮ, ಸದಸ್ಯರಾದ ಮಹದೇವ ಶೆಟ್ಟಿ, ಮೈಸೂರು ವಿಭಾಗದ ಸಹಾಯಕ ಕಾರ್ಮಿಕ ಆಯುಕ್ತ ಎ.ಸಿ. ತಮ್ಮಣ್ಣ, ಕಟ್ಟಡ ಕಾರ್ಮಿಕ ಸಂಘದ ಜಿಲ್ಲಾ ಅಧ್ಯಕ್ಷ ವಿಷಕಂಠ ಮೂರ್ತಿ, ಕಾರ್ಯಾಧ್ಯಕ್ಷ ಮೋಹನ್ ರಾಜ್, ರಾಜ್ಯ ಕಟ್ಟಡ ಕಾರ್ಮಿಕರ ಮಂಡಳಿಯ ಹರಿಣಿಗೌಡ, ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Translate »