ಆತ್ಮಹತ್ಯೆಗೆ ಯತ್ನಿಸಿದ್ದ ಆಶಾ ಕಾರ್ಯಕರ್ತೆಗೆ ಡಿಸಿಯಿಂದ ಸಹಾಯಧನದ ಚೆಕ್ ವಿತರಣೆ
ಮಂಡ್ಯ

ಆತ್ಮಹತ್ಯೆಗೆ ಯತ್ನಿಸಿದ್ದ ಆಶಾ ಕಾರ್ಯಕರ್ತೆಗೆ ಡಿಸಿಯಿಂದ ಸಹಾಯಧನದ ಚೆಕ್ ವಿತರಣೆ

April 27, 2020

ಮಂಡ್ಯ, ಏ.26(ನಾಗಯ್ಯ)- ಆತ್ಮಹತ್ಯೆಗೆ ಯತ್ನಿಸಿ ಮೈಸೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆಶಾ ಕಾರ್ಯಕರ್ತೆಯನ್ನು ಭೇಟಿ ಮಾಡಿದ ಜಿಲ್ಲಾಧಿಕಾರಿ ಡಾ.ಎಂ.ವಿ. ವೆಂಕಟೇಶ್ ಸಾಂತ್ವನ ಹೇಳಿ ಸಹಾಯ ಧನದ ಚೆಕ್ ವಿತರಿಸಿದರು.

ಕೊರೊನಾ ಪರೀಕ್ಷೆ ನಡೆಸಲು ಹೋಗಿದ್ದ ಶ್ರೀರಂಗಪಟ್ಟಣ ತಾಲೂಕಿನ ಉರುಳಿಕ್ಯಾತನಹಳ್ಳಿಯ ಆಶಾ ಕಾರ್ಯಕರ್ತೆ ಮೀನಾಕ್ಷಿರವರನ್ನು ಗ್ರಾಪಂ ಅವಿನಾಶ್ ಹಾಗೂ ಹಾಗೂ ಆತನ ತಂದೆ ಹೀಯಾಳಿಸಿದ್ದು, ಇದರಿಂದ ಮನನೊಂದ ಅವರು ಆತ್ಮಹತ್ಯೆಗೆ ಯತ್ನಿಸಿದ್ದರು. ಬಳಿಕ ಅವರನ್ನು ವಿದ್ಯಾರಣ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲಾಧಿಕಾರಿ ಆಸ್ಪತ್ರೆಗೆ ಭೇಟಿ ನೀಡಿ “ನಿಮಗೆ ಎಲ್ಲ ರೀತಿಯ ಸಹಕಾರ, ಬೆಂಬಲ ನೀಡುತ್ತೇವೆ. ನೀವು ಧೈರ್ಯವಾಗಿರಿ. ಎದೆಗುಂದ ಬೇಡಿ, ಸರ್ಕಾರ ಹಾಗೂ ಜಿಲ್ಲಾಡಳಿತ ನಿಮ್ಮ ಜೊತೆ ಇದೆ ಎಂದು ಭರವಸೆ ನೀಡಿದ ಅವರು ಪೆÇಲೀಸ್ ಇಲಾಖೆಯಿಂದ ಸಂಪೂರ್ಣ ರಕ್ಷಣೆ ನೀಡಲಾಗುವುದು ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಅವರಿಗೆ ನೀಡುತ್ತಿರುವ ಚಿಕಿತ್ಸೆಯ ಬಗ್ಗೆ ವೈದ್ಯರೊಂದಿಗೆ ಚರ್ಚಿಸಿ ಆಸ್ಪತ್ರೆಯ ಚಿಕಿತ್ಸೆಯ ವೆಚ್ಚವನ್ನು ಸಂಪೂರ್ಣವಾಗಿ ಭರಿಸುವುದಾಗಿ ತಿಳಿಸಿದರು. ಇದೇ ಸಂದರ್ಭದಲ್ಲಿ ಅವರಿಗೆ 12 ಸಾವಿರದ ಚೆಕ್ ಅನ್ನು ವಿತರಣೆ ಮಾಡಲಾಯಿತು. ಪಾಂಡವಪುರ ಉಪ ವಿಭಾಗಾಧಿಕಾರಿ ಶೈಲಜಾ, ಶ್ರೀರಂಗಪಟ್ಟಣ ತಹಶೀಲ್ದಾರ್ ರೂಪಾ ಈ ವೇಳೆ ಇದ್ದರು.

Translate »