ಇಂದು ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜು ಸೇರಿ ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳಿಗೆ ಜಂತು ಹುಳು ನಿವಾರಣಾ ಮಾತ್ರೆ ವಿತರಣೆ
ಮೈಸೂರು

ಇಂದು ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜು ಸೇರಿ ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳಿಗೆ ಜಂತು ಹುಳು ನಿವಾರಣಾ ಮಾತ್ರೆ ವಿತರಣೆ

February 8, 2019

ಮೈಸೂರು: ರಾಷ್ಟ್ರೀಯ ಜಂತು ಹುಳು ನಿವಾರಣಾ ದಿನಾಚರಣೆ ಅಂಗವಾಗಿ ಜಿಲ್ಲೆಯಾದ್ಯಂತ 7 ಲಕ್ಷ ಮಕ್ಕ ಳಿಗೆ ಜಂತು ಹುಳು ನಿವಾರಣೆ ಮಾತ್ರೆ ಗಳನ್ನು ವಿತರಣೆ ಮಾಡುವ ಗುರಿ ಹೊಂದ ಲಾಗಿದ್ದು, ಈ ಮಾತ್ರೆಗಳ ಸೇವೆನೆಯಿಂದ ಯಾವುದೇ ಅಡ್ಡ ಪರಿಣಾಮದ ಆತಂಕ ವಿಲ್ಲ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಬಸವರಾಜು ತಿಳಿಸಿದರು.

ಮೈಸೂರಿನ ಕುಂಬಾರಕೊಪ್ಪಲಿನ ಉನ್ನ ತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೇರಿ ದಂತೆ ವಿವಿಧ ಇಲಾಖೆಗಳ ಸಂಯುಕ್ತಾ ಶ್ರಯದಲ್ಲಿ ಗುರುವಾರ ಹಮ್ಮಿಕೊಂಡಿದ್ದ `ರಾಷ್ಟ್ರೀಯ ಜಂತು ಹುಳು ನಿವಾರಣಾ ದಿನಾಚರಣೆ’ ಉದ್ಘಾಟನಾ ಸಮಾರಂಭ ದಲ್ಲಿ ಅವರು ಮಾತನಾಡಿದರು.

ಫೆ.8ರಂದು 1ರಿಂದ 19 ವರ್ಷದೊಳ ಗಿನ ಎಲ್ಲಾ ಮಕ್ಕಳಿಗೆ ಜಂತು ಹುಳು ನಿವಾರಣಾ ಮಾತ್ರೆಗಳನ್ನು ವಿತರಣೆ ಮಾಡಲಾಗುವುದು. 1ರಿಂದ 2 ವರ್ಷ ದೊಳಗಿನ ಮಕ್ಕಳು ಅರ್ಧ ಮಾತ್ರೆ ಸೇವನೆ ಮಾಡಬೇಕು. ಅದೇ ರೀತಿ 2ರಿಂದ 19 ವರ್ಷದೊಳಗಿನ ಮಕ್ಕಳು ಒಂದು ಮಾತ್ರೆ ಸೇವನೆ ಮಾಡಬೇಕಿರುತ್ತದೆ. ಇವು ಚೀಪುವ ಮಾತ್ರೆಗಳಾಗಿದ್ದು, ಈ ಮಾತ್ರೆ ಗಳು ಯಾವುದೇ ಅಡ್ಡ ಪರಿಣಾಮ ಇಲ್ಲದೇ ಸುರಕ್ಷಿತವಾಗಿವೆ. ಹೀಗಾಗಿ ಮಕ್ಕಳಿ ಗಾಗಲೀ ಅಥವಾ ಪೋಷಕರಿಗಾಗಲೀ ಯಾವುದೇ ಆತಂಕ ಬೇಡ ಎಂದರು.

ಫೆ.8ರಂದು ಮಾತ್ರೆ ಸೇವನೆಯಿಂದ ವಂಚಿತವಾದ ಮಕ್ಕಳಿಗಾಗಿ ಮತ್ತೆ ಫೆ.14ರಂದು ಮಾತ್ರೆ ವಿತರಣೆ ಮಾಡ ಲಾಗುವುದು. ಮಕ್ಕಳು ಮಾತ್ರೆಯಿಂದ ವಂಚಿತರಾಗದಂತೆ ನೋಡಿಕೊಳ್ಳಲು ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ಹಾಗೂ ಶಿಕ್ಷಕರಿಗೆ ನಿರ್ದೇಶನ ನೀಡಲಾಗಿದೆ ಎಂದರು.

ಉದ್ಘಾಟನೆ ನೆರವೇರಿಸಿ ಮಾತನಾ ಡಿದ ಮೈಸೂರು ಮೇಯರ್ ಪುಷ್ಪಲತಾ ಜಗನ್ನಾಥ್, ಜಂತು ಹುಳು ನಿವಾರಣೆ ಯಿಂದ ಮಕ್ಕಳಲ್ಲಿ ಪೌಷ್ಟಿಕತೆ ಹೆಚ್ಚುತ್ತದೆ. ಈ ಹಿನ್ನೆಲೆಯಲ್ಲಿ ಜಂತು ಹುಳು ನಿವಾರಣಾ ಮಾತ್ರೆಗಳನ್ನು ಮಕ್ಕಳಿಗೆ ನೀಡುವಲ್ಲಿ ಎಲ್ಲಾ ಇಲಾಖೆಗಳು ಸಮನ್ವ ಯವಾಗಿ ಕಾರ್ಯ ನಿರ್ವಹಿಸಬೇಕು. ಜೊತೆಗೆ ಪೋಷಕರ ಸಹಕಾರವೂ ಅತ್ಯಂತ ಮುಖ್ಯ ಎಂದು ಹೇಳಿದರು.

ಜಿಲ್ಲಾ ರೋಗವಾಹಕ ಆಶ್ರಿತ ರೋಗ ಗಳ ನಿಯಂತ್ರಣಾಧಿಕಾರಿ ಡಾ.ಎಸ್. ಚಿದಂಬರ, ಜಿಲ್ಲಾ ಆರ್‍ಸಿಹೆಚ್ ಅಧಿಕಾರಿ ಡಾ.ಎಲ್.ರವಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕಿ ಪದ್ಮಾ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ದಯಾನಂದ, ಉತ್ತರ ವಲಯ ಬಿಇಓ ಉದಯಕುಮಾರ್, ಅಕ್ಷರ ದಾಸೋಹ ಯೋಜನೆ ಸಹ ನಿರ್ದೇಶಕ ನಾಗೇಂದ್ರ ಸಿಂಗ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಪ್ರಕಾಶ್, ಡಿಡಿಪಿಐ ಕಚೇರಿ ವಿಷಯ ಪರಿವೀಕ್ಷಕಿ ಪುಷ್ಪ, ಜಿಲ್ಲಾ ಆರೋಗ್ಯ ಮೇಲ್ವಿಚಾರಕ ಪಿ.ಶಿವರಾಮ್ ಮತ್ತಿತರರು ಹಾಜರಿದ್ದರು.

 

Translate »