ಮತ ಎಣಿಕೆಯನ್ನು ಜಾಗ್ರತೆಯಿಂದ ನಿರ್ವಹಿಸಲು ಜಿಲ್ಲಾಧಿಕಾರಿ ಸೂಚನೆ
ಹಾಸನ

ಮತ ಎಣಿಕೆಯನ್ನು ಜಾಗ್ರತೆಯಿಂದ ನಿರ್ವಹಿಸಲು ಜಿಲ್ಲಾಧಿಕಾರಿ ಸೂಚನೆ

May 21, 2019

ಹಾಸನ: ಮತ ಎಣಿಕೆ ವೇಳೆ ಅಧಿಕಾರಿ ಗಳು ಯಾವುದೇ ಗೊಂದಲ, ಆತುರಗಳಿಲ್ಲದೆ ಸಮಾ ಧಾನದಿಂದ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಸೂಚನೆ ನೀಡಿದರು.

ನಗರದ ಹಾಸನಾಂಬ ವೈದ್ಯಕೀಯ ಕಾಲೇಜು ಸಭಾಂಗಣದಲ್ಲಿ ಲೋಕಸಭಾ ಚುನಾವಣೆ ಮತ ಎಣಿಕೆಗೆ ನಿಯೋಜನೆಗೊಂಡಿರುವ ಎಲ್ಲಾ ಸಹಾ ಯಕ ಚುನಾವಣಾಧಿಕಾರಿಗಳು, ತಹಸೀಲ್ದಾರರು, ಮತ ಎಣಿಕೆ ಮೇಲ್ವಿಚಾರಕರು ಹಾಗೂ ಎಣಿಕೆ ಸಿಬ್ಬಂದಿಗಳಿಗೆ ಏರ್ಪಡಿಸಿದ್ದ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಚುನಾ ವಣಾ ಆಯೋಗದ ಮಾರ್ಗಸೂಚಿಗಳನ್ನು ಸರಿಯಾಗಿ ಅರಿತು ಮತ ಎಣಿಕೆ ಮಾಡಬೇಕು ಎಂದು ಸೂಚಿಸಿದರು.

ಹಾಸನ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆ ಮತ ಎಣಿಕೆ ಕಾರ್ಯವು ಮೇ 23ರಂದು ನಗರದ ಡೈರಿ ವೃತ್ತದ ಬಳಿ ಇರುವ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆಯ ಲಿದೆ. ಎಣಿಕೆ ಸಿಬ್ಬಂದಿಗಳು ಅಗತ್ಯ ಸಲಹೆಗಳನ್ನು ಪಡೆದುಕೊಂಡು ಎಣಿಕೆ ಕಾರ್ಯ ಮಾಡಬೇಕು. ಎಣಿಕೆಯ ಸಂದರ್ಭದಲ್ಲಿ ಯಾವುದೇ ವ್ಯತ್ಯಾಸ ಕಂಡು ಬಂದಲ್ಲಿ ಕೂಡಲೇ ಸಹಾಯಕ ಚುನಾವಣಾಧಿಕಾರಿ ಗಳನ್ನು ಸಂಪರ್ಕಿಸಬೇಕು ಎಂದು ತಿಳಿಸಿದರು.

ಈ ಬಾರಿ ಮತ ಎಣಿಕೆ ದತ್ತಾಂಶ ನಿರ್ವಹಣೆಗೆ ಸುವಿಧ ತಂತ್ರಾಂಶ ಬಳಕೆ ಮಾಡಲಾಗುತ್ತಿದೆ. ಅದರ ಬಳಕೆ ಬಗ್ಗೆ ತಾಂತ್ರಿಕ ನಿರ್ವಾ ಹಕರು ಗಮನಹರಿಸಬೇಕು, ಚುನಾವಣಾಧಿಕಾರಿ ಅನುಮೋದನೆ ನಂತರ ಪ್ರತಿ ಸುತ್ತಿನ ಮತಗಳನ್ನು ಅಪ್‍ಲೋಡ್ ಮಾಡಬೇಕು ಎಂದು ನಿರ್ದೇಶನ ನೀಡಿದರು.

ಮೇ 21ರಂದು ಎಲ್ಲಾ ಮತ ಎಣಿಕೆ ಸಿಬ್ಬಂದಿ ಗಳಿಗೆ ಬೆಳಿಗ್ಗೆ 8 ಗಂಟೆಯಿಂದ ಎಣಿಕೆ ಪೂರ್ವ ತಾಲೀಮು ಕುರಿತು ತರಬೇತಿ ನೀಡಲಾಗುವುದು. ಈ ಸಂದರ್ಭ ಮತ ಎಣಿಕೆ ಕುರಿತು ಯಾವುದೇ ಗೊಂದಲಗಳಿದ್ದರೂ ಮಾಹಿತಿ ಕೇಳಿ ತಿಳಿದುಕೊಳ್ಳ ಬೇಕು. ಡಾಟಾ ಎಂಟ್ರಿ ಮಾಡುವ ಸಿಬ್ಬಂದಿಗಳು ತುಂಬಾ ಜಾಗರೂಕತೆಯಿಂದ, ಸಮಾಧಾನಕರವಾಗಿ ಅಂಕಿ ಅಂಶ ನೋಂದಣಿ ಮಾಡಬೇಕು ಎಂದು ಹೇಳಿದರು.

ಈಗಾಗಲೇ ಎಲ್ಲಾ ಕೊಠಡಿಗೆ ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ ಹಾಗೂ ಎಣಿಕೆಯ ಪ್ರತಿಯೊಂದು ಹಂತದ ಚಿತ್ರೀಕರಣಕ್ಕಾಗಿ ವಿಡಿಯೋಗ್ರಾಫರ್ ಗಳನ್ನು ನೇಮಕ ಮಾಡಲಾಗಿದೆ. ಪ್ರತಿ ಸುತ್ತು ಮುಗಿದ ನಂತರ ಫಲಿತಾಂಶದ ಮಾಹಿತಿಯನ್ನು ಎ.ಆರ್.ಓ. ಅನುಮತಿ ಪಡೆದು ಅಭ್ಯರ್ಥಿಗಳಿಗೆ ಫಲಿತಾಂಶದ ಮಾಹಿತಿ ನೀಡಬೇಕು ಎಂದರು. ಎಣಿಕೆ ಸಿಬ್ಬಂದಿಗಳು ವಿದ್ಯುನ್ಮಾನ ಮತಯಂತ್ರಗಳಲ್ಲಿ ಫಲಿತಾಂಶ ಬಟನ್ ಒತ್ತಿ ಫಲಿ ತಾಂಶದ ವಿವರಗಳನ್ನು 17ಸಿ ನಮೂನೆಯ ಭಾಗ-2ರಲ್ಲಿ ನಮೂ ದಿಸಿ ಹಾಜರಿರುವ ಎಣಿಕೆ ಏಜೆಂಟರ ಸಹಿ ಪಡೆದು ಚುನಾವಣಾ ಧಿಕಾರಿಗಳಿಗೆ ಸಲ್ಲಿಸಬೇಕು ಎಂದು ಮಾಹಿತಿ ನೀಡಿದರು.

ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಎಂ.ಎಲ್.ವೈಶಾಲಿ, ಸಹಾಯಕ ಚುನಾವಣಾಧಿಕಾರಿಗಳು ತಹಸೀಲ್ದಾರರು, ಮತ ಎಣಿಕೆ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.

Translate »