ಪಲ್ಸ್ ಪೋಲಿಯೋ ಯಶಸ್ಸಿಗೆ ಶ್ರಮಿಸಲು ಜಿಲ್ಲಾಧಿಕಾರಿ ಸೂಚನೆ
ಹಾಸನ

ಪಲ್ಸ್ ಪೋಲಿಯೋ ಯಶಸ್ಸಿಗೆ ಶ್ರಮಿಸಲು ಜಿಲ್ಲಾಧಿಕಾರಿ ಸೂಚನೆ

March 6, 2019

ಮಾ.10ರಿಂದ 13ರವರೆಗೆ ಎರಡನೇ ಹಂತದ ಪಲ್ಸ್ ಪೋಲಿಯೋ ಕಾರ್ಯಕ್ರಮ
ಹಾಸನ: ‘ಪಲ್ಸ್ ಪೋಲಿಯೋ ಕಾರ್ಯಕ್ರಮವು ಒಂದು ರಾಷ್ಟ್ರೀಯ ಅಭಿ ಯಾನವಾಗಿದ್ದು, ಇದರ ಯಶಸ್ವಿಗೆ ಎಲ್ಲಾ ಇಲಾಖೆ ಅಧಿಕಾರಿ, ಸಿಬ್ಬಂದಿ ಶ್ರಮಿಸ ಬೇಕು’ ಎಂದು ಜಿಲ್ಲಾಧಿಕಾರಿ ಅಕ್ರಂ ಪಾಷ ಸೂಚನೆ ನೀಡಿದರು.ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣ ದಲ್ಲಿ ಮಂಗಳವಾರ ನಡೆದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

ಮಾ. 10 ರಿಂದ 13ರ ವರೆಗೆ ಎರಡನೇ ಹಂತದ ಪಲ್ಸ್ ಪೋಲಿಯೋ ಕಾರ್ಯ ಕ್ರಮ ನಡೆಯಲಿದೆ. ಇದೊಂದು ದೇಶದ ಮಹತ್ವದ ಆರೋಗ್ಯ ಕಾರ್ಯಕ್ರಮವಾ ಗಿದ್ದು ಇದರ ಯಶಸ್ವಿಗೆ ಎಲ್ಲರೂ ಸಹ ಕರಿಸಬೇಕು ಎಂದು ಸಲಹೆ ನೀಡಿದರು.

ಐದು ವರ್ಷದೊಳಗಿನ ಯಾವುದೇ ಮಗುವೂ ಈ ಕಾರ್ಯಕ್ರಮದಿಂದ ಹೊರ ಗುಳಿಯಬಾರದು. ಈ ಬಗ್ಗೆ ವ್ಯವಸ್ಥಿತವಾಗಿ ಕ್ರಿಯಾ ಯೋಜನೆ ರೂಪಿಸಿ ವ್ಯಾಪಕ ಪ್ರಚಾರ ನೀಡಿ ಅನುಷ್ಠಾನಗೊಳಿಸಬೇಕು ಎಂದು ಹೇಳಿದರು. ಪಲ್ಸ್ ಪೋಲಿಯೋ ಕಾರ್ಯಕ್ಕೆ ನಿಯೋಜಿತ ಅಧಿಕಾರಿ, ಸಿಬ್ಬಂದಿಗಳಿಗೆ ಸಕಾಲಕ್ಕೆ ಅಗತ್ಯ ವಾಹನಗಳನ್ನು ಒದಗಿ ಸಲು ಸಾರಿಗೆ ಇಲಾಖೆಯ ಅಧಿಕಾರಿಗಳು ಕ್ರಮಕೈಗೊಳ್ಳಬೇಕು ಎಂದು ಸೂಚಿಸಿದರು.

ಶಾಲಾ ಮಕ್ಕಳು ಮತ್ತು ಕಾಲೇಜು ವಿದ್ಯಾರ್ಥಿಗಳಿಂದ ಜಾಗೃತಿ ಜಾಥಾ ಮಾಡಿಸಬೇಕು. ಶಾಲಾ ಮಕ್ಕಳ ಮನೆಯ ಅಕ್ಕಪಕ್ಕದಲ್ಲಿರುವ 5 ವರ್ಷದೊಳಗಿನ ಮಕ್ಕಳನ್ನು ಗುರುತಿಸಿ ಲಸಿಕಾ ಕೇಂದ್ರಕ್ಕೆ ಕರೆತರಲು ಶಾಲಾ ಮಕ್ಕಳ ತಂಡವನ್ನು ರಚಿಸಿ ಅವರನ್ನು ಸಕ್ರಿಯವಾಗಿ ಈ ಕಾರ್ಯಕ್ರಮದಲ್ಲಿ ಬಳಸಿಕೊಳ್ಳುವತ್ತ ಶಿಕ್ಷಣ ಇಲಾಖೆ ಗಮನಹರಿಸಬೇಕು ಎಂದು ಹೇಳಿದರು.

ತಹಶೀಲ್ದಾರರ ಅಧÀ್ಯಕ್ಷತೆಯಲ್ಲಿ ತಾಲೂಕು ಮಟ್ಟದಲ್ಲಿ ಪಲ್ಸ್ ಪೋಲಿಯೋ ಚಾಲನಾ ಸಮಿತಿಗಳ ಸಭೆ ನಡೆಸಬೇಕು ರೈಲ್ವೆ ಪ್ಲಾಟ್‍ಫಾರಂ, ಬಸ್ ನಿಲ್ದಾಣ ಹಾಗೂ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಲಸಿಕಾ ಕೇಂದ್ರಗಳನ್ನು ತೆರೆಯಲು ಅನುಕೂಲ ವಾಗುವಂತೆ ವ್ಯವಸ್ಥೆ ಮಾಡಿಕೊಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಲಸಿಕಾ ಕಾರ್ಯದಲ್ಲಿ ತೊಡಗುವ ಅಧಿಕಾರಿ ಸಿಬ್ಬಂದಿಗಳಿಗೆ ನಗರದ ಸ್ಥಳೀಯ ಸಂಸ್ಥೆಗಳು ಗ್ರಾಮ ಪಂಚಾಯಿತಿ ಮೂಲಕ ಉತ್ತಮ ಗುಣಮಟ್ಟದ ಊಟೋಪಚಾರ ಒದಗಿಸಬೇಕು ಎಂದು ನಿರ್ದೇಶನ ನೀಡಿದರು.

ಸಭೆಯಲ್ಲಿ ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಶಂಕರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್, ಜಿಲ್ಲಾ ಆರ್.ಸಿ.ಎಚ್ ಅಧಿಕಾರಿ ಡಾ. ಜನಾಧರ್Àನ್, ನಗರಾಭಿವೃದ್ಧಿ ಆಯುಕ್ತ ಪರಮೇಶ್ ಹಾಜರಿದ್ದರು.

Translate »