ರಸ್ತೆ ಸುರಕ್ಷತಾ ಕ್ರಮ ಪಾಲನೆಗೆ ಜಿಲ್ಲಾಧಿಕಾರಿ ಸೂಚನೆಜಿಲ್ಲಾ ಮಟ್ಟದ ರಸ್ತೆ ಸುರಕ್ಷತಾ ಸಮಿತಿ ಸಭೆ
ಹಾಸನ

ರಸ್ತೆ ಸುರಕ್ಷತಾ ಕ್ರಮ ಪಾಲನೆಗೆ ಜಿಲ್ಲಾಧಿಕಾರಿ ಸೂಚನೆಜಿಲ್ಲಾ ಮಟ್ಟದ ರಸ್ತೆ ಸುರಕ್ಷತಾ ಸಮಿತಿ ಸಭೆ

May 6, 2019

ಹಾಸನ: ರಸ್ತೆ ಸುರಕ್ಷತಾ ಕ್ರಮಗಳ ಜಾರಿಗೆ ಸುಪ್ರೀಂ ಕೋರ್ಟ್ ಹಲವು ನಿರ್ದೇಶನ ನೀಡಿದ್ದು ಅವುಗಳ ಪಾಲನೆಗೆ ಸಂಬಂಧಪಟ್ಟ ಎಲ್ಲಾ ಇಲಾಖೆ ಕ್ರಮ ಜರುಗಿಸಬೇಕು ಎಂದು ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂ ಗಣದಲ್ಲಿ ನಡೆದ ಜಿಲ್ಲಾ ಮಟ್ಟದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಾ ದ್ಯಂತ ರಸ್ತೆ ಸುರಕ್ಷತಾ ಕ್ರಮಗಳು ಹಾಗೂ ಸಾರ್ವಜನಿಕ ಮಾಹಿತಿ, ಜಾಗೃತಿ ಚಟುವಟಿಕೆಗಳು ಪರಿಣಾಮಕಾರಿಯಾಗಿ ನಡೆಯಬೇಕಿದೆ ಎಂದರು.

ಎಲ್ಲಾ ಪ್ರಮುಖ ರಸ್ತೆಗಳಲ್ಲಿ ಸುರಕ್ಷತಾ ನಿಯಮಗಳ ಬಗ್ಗೆ ಮಾಹಿತಿ ನೀಡುವ ಪ್ರದರ್ಶನ ಫಲಕಗಳನ್ನು ಹಾಗೂ ಅಗತ್ಯ ವಿರುವ ಕಡೆಗಳಲ್ಲಿ ಸೂಚನಾ ಫಲಕ, ಸಂಜ್ಞೆಗಳ ಅಳವಡಿಕೆ ಮಾಡಬೇಕು. ನಿರಂ ತರ ಅರಿವಿನ ಚಟುವಟಿಕೆಗಳು ನಡೆಯ ಬೇಕು ಎಂದು ನಿರ್ದೇಶನ ನೀಡಿದರು.

ರಸ್ತೆ ಸುರಕ್ಷತಾ ನಿಯಮಗಳ ಜಾಗೃತಿ ಯಲ್ಲಿ ಸಾರಿಗೆ, ಪೊಲೀಸ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ, ಸಾರ್ವಜನಿಕ ಶಿಕ್ಷಣ, ಲೋಕೋಪಯೋಗಿ, ರಾಷ್ಟ್ರೀಯ ಹೆದ್ದಾರಿ ಇಲಾಖೆಗಳು ಹೆಚ್ಚಿನ ಜವಾ ಬ್ದಾರಿ ವಹಿಸಬೇಕು ಎಂದು ಹೇಳಿದರು.

ಅನಗತ್ಯ ರಸ್ತೆ ಉಬ್ಬುಗಳನ್ನು ತೆಗೆಯು ವುದು, ಅಪಾಯಕಾರಿಯಾಗಿರುವ ಹಾಗೂ ಹೆಚ್ಚು ಅಪಘಾತಗಳು ನಡೆದಿರುವ ಸ್ಥಳ ಗಳಲ್ಲಿ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳ ಬೇಕು. ಸೈನೇಜ್‍ಗಳ ಅಳವಡಿಕೆ ಹಾಗೂ ರಸ್ತೆ ಸುರಕ್ಷತಾ ಕ್ರಮಗಳಿಗೆ ಅಗತ್ಯವಿರುವ ಅನುದಾನದ ಬಗ್ಗೆ ಪ್ರಸ್ತಾವನೆಗಳನ್ನು ಸಲ್ಲಿಸಬೇಕು ಎಂದು ತಿಳಿಸಿದರು.

ಮಕ್ಕಳನ್ನು ಸುರಕ್ಷಿತವಾಗಿ ಕರೆತರಲು ಜವಾಬ್ದಾರಿ ಶಾಲೆಗಳ ಆಡಳಿತ ಮಂಡಳಿ ಯದ್ದಾಗಿದೆ. ಇದಕ್ಕೆ ಅಗತ್ಯ ಬಸ್, ಕ್ಯಾಬ್ ಗಳನ್ನು ನಿಯೋಜಿಸಬೇಕು ಹಾಗೂ ಖಾಸಗಿ ವಾಹನಗಳಲ್ಲಿ ಬರುವ ಮಕ್ಕಳಿಗೆ, ಪೋಷಕರಿಗೆ ಅರಿವು ಮೂಡಿಸಿ ಸುರಕ್ಷತಾ ಕ್ರಮಗಳ ಬಗ್ಗೆ ಕ್ರಮ ವಹಿಸಿಬೇಕು. ಈ ಬಗ್ಗೆ ಶಿಕ್ಷಣ ಇಲಾಖೆ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಶಾಲೆಗಳ ಮುಖ್ಯಸ್ಥರ ಸಭೆ ಕರೆದು ಅರಿವು ಮೂಡಿಸಬೇಕು ತಾವು ಕೂಡ ಅದರಲ್ಲಿ ಭಾಗವಹಿಸಿ ಸೂಚನೆ ಗಳನ್ನು ನೀಡುತ್ತೇನೆ ಎಂದರು.

ಯಾವುದೇ ಶಾಲಾ ಮಕ್ಕಳು ಗೂಡ್ಸ್ ವಾಹನದಲ್ಲಿ ಬಾರದಂತೆ ಗಮನ ವಹಿಸ ಬೇಕು. ಮಾರುತಿ ವ್ಯಾನ್‍ಗಳ ನಿಯಮ ಬಾಹಿರವಾಗಿ ಹೆಚ್ಚಿನ ಮಕ್ಕಳನ್ನು ತುಂಬಿ ಕೊಂಡು ಬರುವುದನ್ನು ಕಡಿವಾಣ ಹಾಕ ಬೇಕು ಎಂದು ಹೇಳಿದರು.

ಜಿಲ್ಲೆಯಲ್ಲಿ ಗಾರ್ಮೆಂಟ್ಸ್ ಹಾಗೂ ಇತರ ಕಾರ್ಖಾನೆಗಳಿಗೆ ಬರುವ ಕಾರ್ಮಿಕ ರಿಗೆ ಸೂಕ್ತ ಸುರಕ್ಷತೆ ಸಾರಿಗೆ ವ್ಯವಸ್ಥೆಗಳು ದೊರೆಯಬೇಕು. ಈ ಬಗ್ಗೆ ಸಾರಿಗೆ ಇಲಾಖೆ, ಕಾರ್ಮಿಕ ಇಲಾಖೆ ಮತ್ತು ಕೈಗಾರಿಕಾ ಇಲಾಖೆಗಳು ಜಂಟಿಯಾಗಿ ಕಾರ್ಖಾನೆ ಮುಖ್ಯಸ್ಥರು ಹಾಗೂ ಕಾರ್ಮಿಕ ಮುಖ್ಯ ಸ್ಥರ ಸಭೆ ನಡೆಸಿ ಅರಿವು ಮೂಡಿಸಬೇಕು ಎಂದು ಸೂಚನೆ ನೀಡಿದರು.
ಅಸಂಘಟಿತ ಕಾರ್ಮಿಕರ ಸಾಗಾಟ ಬಗ್ಗೆಯೂ ವ್ಯವಸ್ಥಿತ ಅರಿವು ಮತ್ತು ಸೂಕ್ತ ಸಾರಿಗೆ ಸಂಪರ್ಕ ಯೋಜನೆ ರೂಪಿಸ ಬೇಕು. ಅಲ್ಲದೆ ಶಾಲಾ ಅವಧಿಯಲ್ಲಿ ಅಗತ್ಯವಿರುವ ಕಡೆಗಳಲ್ಲಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್‍ಗಳನ್ನು ಹೆಚ್ಚುವರಿ ಯಾಗಿ ಒಡಿಸುವ ಬಗ್ಗೆಯೂ ಪರಿಶೀಲಿಸಿ ಕ್ರಮ ವಹಿಸಬೇಕು ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚೇತನ್ ಸಿಂಗ್ ರಾಥೋಡ್, ಕೈಗೊಳ್ಳಬಹುದಾದ ರಸ್ತೆ ಸುರಕ್ಷತಾ ಕ್ರಮಗಳ ಹಾಗೂ ಅರಿವಿನ ಕಾರ್ಯ ಕ್ರಮಗಳ ಬಗ್ಗೆ ವಿವರಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಪರಪ್ಪಸ್ವಾಮಿ, ಪ್ರಾದೇಶಿಕ ಸಾರಿಗೆ ಅಧಿಕಾರಿ ಅಶೋಕ್ ಕುಮಾರ್, ಲೋಕೋಪಯೋಗಿ ಇಲಾಖೆಯ ಕಾರ್ಯ ಪಾಲಕ ಅಭಿಯಂತರ ಮಂಜು, ಕಾರ್ಮಿಕ ಅಧಿಕಾರಿ ರಮೇಶ್, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಮಂಜುನಾಥ್ ವಿವಿಧ ಇಲಾಖಾ ಅಧಿಕಾರಿಗಳು ಹಾಜರಿದ್ದರು.

Translate »