ಆಲೂಗಡ್ಡೆ ಬಿತ್ತನೆ ಬೀಜ ವಿತರಣೆಗೆ ಜಿಲ್ಲಾಧಿಕಾರಿ ಚಾಲನೆ

ಹಾಸನ: ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಆವರಣದಲ್ಲಿ ಗುರು ವಾರ ಬೆಳಿಗ್ಗೆಯಿಂದ ಆಲೂಗಡ್ಡೆ ಬಿತ್ತನೆ ಬೀಜ ವಿತರಣೆ ಪ್ರಾರಂಭವಾಗಿದೆ.

ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಬಿತ್ತನೆ ಬೀಜ ವಿತರಣೆಗೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಜಿಲ್ಲೆಯಲ್ಲಿನ ಆಲೂಗಡ್ಡೆ ಬೆಳೆಯುವ 15,000 ಎಕರೆ ಭೂಮಿಗೆ ಅವಶ್ಯಕವಿರುವ 20 ಸಾವಿರ ಮೆಟ್ರಿಕ್ ಟನ್ ಬಿತ್ತನೆ ಬೀಜವನ್ನು ಶೀತಲಗೃಹದಲ್ಲಿ ಈಗಾಗಲೇ ಶೇಖರಿಸಲಾಗಿದೆ. ಬೇರೆ ಜಿಲ್ಲೆಯಿಂದ ಆಗಮಿಸುವ ರೈತರಿಗೂ ಬಿತ್ತನೆ ಬೀಜ ವಿತರಿಸಲು ಪೂರ್ವ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.

ವರ್ತಕರು ಈಗಾಗಲೇ 8,200 ಚೀಲ ಆಲೂಗಡ್ಡೆಯನ್ನು ಪ್ರಾರಂಭಿಕವಾಗಿ ಮಾರುಕಟ್ಟೆಗೆ ತಂದಿದ್ದು, ಬೇಡಿಕೆಗೆ ಅನುಗುಣವಾಗಿ ವರ್ತಕರು ಬಿತ್ತನೆ ಬೀಜ ಗಳನ್ನು ಪೂರೈಸಲಿದ್ದಾರೆ. ರೈತರು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ರೈತರು ಖರೀದಿಸಿದ ಬಿತ್ತನೆ ಬೀಜಕ್ಕೆ ಕಡ್ಡಾಯವಾಗಿ ರಶೀದಿಯನ್ನು ಪಡೆ ಯಬೇಕು. ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಎಪಿಎಂಸಿ ಆವರಣದಲ್ಲೇ ನೋಂದಣಿ ಕಾರ್ಯ ಕೈಗೊಳ್ಳಲಿದ್ದು, ರೈತರು ಬಿಲ್ಲಿನೊಂದಿಗೆ ಆಧಾರ್ ಕಾರ್ಡ್, ಪಹಣಿ, ಪಾಸ್‍ಬುಕ್, ಜಾತಿ ಪ್ರಮಾಣ ಪತ್ರ ಹಾಗೂ ಭಾವಚಿತ್ರಗಳೊಂದಿಗೆ ನೋಂದಣಿ ಮಾಡಿಸಿದಲ್ಲಿ ಶೇ. 50ರಷ್ಟು ಸಬ್ಸಿಡಿ ಹಣ ಹಾಗೂ ಔಷಧಿ ನೀಡ ಲಾಗುವುದು ಎಂದರು.

ಇಂದು ಪ್ರಾರಂಭದ ದಿನವಾಗಿರುವುದ ರಿಂದ ಹಾಗೂ ಮಳೆಯ ಪ್ರಮಾಣ ಕಡಿಮೆ ಇರುವುದರಿಂದ ರೈತರು ಹೆಚ್ಚಿನ ಸಂಖ್ಯೆ ಯಲ್ಲಿ ಆಗಮಿಸುವ ನಿರೀಕ್ಷೆ ಇಲ್ಲ. ಮುಂಬ ರುವ ದಿನಗಳಲ್ಲಿ ಮಳೆಯ ಪ್ರಮಾಣ ವನ್ನಾಧÀರಿಸಿ ಹೆಚ್ಚು ಬೇಡಿಕೆಯ ನಿರೀಕ್ಷೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬಿತ್ತನೆ ಬೀಜ ವಿತರಣೆ ಸಂದರ್ಭದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ಗಳಾಗದಂತೆ ಹಾಗೂ ಸಂಚಾರ ದಟ್ಟಣೆ ಯಾಗದಂತೆ ಪೊಲೀಸ್ ಇಲಾಖೆಯು ಮುಂಜಾಗ್ರತಾ ಕ್ರಮ ಕೈಗೊಂಡಿದೆ ಎಂದು ತಿಳಿಸಿದರು.

ಈ ವೇಳೆ ಜಿಲ್ಲಾ ಪೊಲೀಸ್ ವರಿಷ್ಠಾ ಧಿಕಾರಿ ಡಾ.ಚೇತನ್‍ಸಿಂಗ್ ರಾಥೋಡ್, ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕ ಮಂಜುನಾಥ್, ಕೃಷಿ ಉತ್ಪನ್ನ ಮಾರುಕಟ್ಟೆ ಇಲಾಖೆಯ ಶ್ರೀಹರಿ ಮತ್ತಿತರರು ಹಾಜರಿದ್ದರು.