ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆ
ಚಾಮರಾಜನಗರ

ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆ

July 8, 2018

ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಬಗ್ಗೆ ವ್ಯಾಪಕ ಚರ್ಚೆ

  • ರಸ್ತೆ ಅಭಿವೃದ್ಧಿ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ತಾಕೀತು
  • ಅಧಿಕಾರಿಗಳನ್ನು ತೀವ್ರ ತರಾಟೆ ತೆಗೆದುಕೊಂಡ ಸಂಸದ ಧ್ರುವನಾರಾಯಣ

ಚಾಮರಾಜನಗರ: ಚಾಮರಾಜನಗರದಿಂದ ಸಂತೇಮರಹಳ್ಳಿ ವರೆಗೆ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿ ಮಂದಗತಿಯಲ್ಲಿ ಸಾಗುತ್ತಿದ್ದು, ಈ ಮಾರ್ಗದಲ್ಲಿ ಸೃಷ್ಟಿಯಾ ಗಿದ್ದ ಹಳ್ಳಕ್ಕೆ ಬಿದ್ದು ಇಬ್ಬರು ಪ್ರಾಣ ಕಳೆದು ಕೊಂಡಿದ್ದಾರೆ. ಇದಕ್ಕೆ ಹೊಣೆ ಯಾರು? ಮನುಷ್ಯನ ಪ್ರಾಣಕ್ಕೆ ಬೆಲೆ ಇಲ್ಲವೇ? ಎಂದು ಸಂಸದ ಆರ್.ಧ್ರುವನಾರಾಯಣ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡರು.

ನಗರದ ಜಿಲ್ಲಾ ಪಂಚಾಯಿತಿಯ ನೂತನ ಕೆಡಿಪಿ ಸಭಾಂಗಣದಲ್ಲಿ ಶನಿವಾರ ನಡೆದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ರಾಷ್ಟ್ರೀಯ ಹೆದ್ದಾರಿ 209 ಕನಕ ಪುರದಿಂದ ಚಾಮರಾಜನಗರ ಮಾರ್ಗ ವಾಗಿ ಪುಣಜನೂರು ಗ್ರಾಮದವರೆಗೆ ಅಭಿವೃದ್ಧಿ ಕಾಮಗಾರಿ ಪ್ರಗತಿಯಲ್ಲಿದೆ. ಜಿಲ್ಲೆಯಲ್ಲಿ 3 ಪಟ್ಟಣಗಳಲ್ಲಿ ಬೈಪಾಸ್ ರಸ್ತೆ ನಿರ್ಮಾಣ ಆಗಲಿದೆ. ಹೊಸದಾಗಿ 67.04 ಕಿ.ಮೀ. ರಸ್ತೆ ನಿರ್ಮಾಣ ಆಗಲಿದೆ. 3 ದೊಡ್ಡ ಸೇತುವೆ ನಿರ್ಮಾಣವಾಗಲಿದೆ. ಆದರೆ, ಕಾಮಗಾರಿ ಮಂದ ಗತಿಯಲ್ಲಿ ಸಾಗುತ್ತಿರುವುದರಿಂದ ಸಾರ್ವ ಜನಿಕರ ಸುಗಮ ಸಂಚಾರಕ್ಕೆ ಅಡ್ಡಿ ಯುಂಟಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಚಾಮರಾಜನಗರದಿಂದ ಸಂತೇಮರ ಹಳ್ಳಿವರೆಗೆ ನಡೆಯುತ್ತಿರುವ ಕಾಮಗಾರಿ ತುಂಬಾ ವಿಳಂಬವಾಗಿದೆ. ನಗರದ ಸಮೀ ಪದ ಕಾಡಹಳ್ಳಿ ಗೇಟ್ ಮುಂಭಾಗದಲ್ಲಿ ಇದ್ದ ಹಳ್ಳಕ್ಕೆ ಬಿದ್ದು, ಇಬ್ಬರು ಪ್ರಾಣ ಕಳೆದು ಕೊಂಡಿದ್ದಾರೆ. ಇದಕ್ಕೆ ಅಧಿಕಾರಿಗಳೇ ಕಾರಣ, ಆ ಅಮಾಯಕರ ಜೀವ ಹೋಗಲು ಹೊಣೆ ಯಾರು? ಎಂದು ಪ್ರಶ್ನಿಸಿದರು.

ಕಾಮಗಾರಿಯನ್ನು ಚುರುಕುಗೊಳಿಸಿ ಗುಣಮಟ್ಟದ ಕಾಮಗಾರಿಯನ್ನು ನಡೆಸಿ ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಿ ಇನ್ನೂ ಮುಂದೆ ಕಾಮಗಾರಿ ಮಂದಗತಿ ಯಲ್ಲಿ ಸಾಗಿ ಏನಾದರೂ ಅನಾಹುತ ಸಂಭ ವಿಸಿದರೆ, ರಾಷ್ಟ್ರೀಯ ಹೆದ್ದಾರಿ ಪ್ರಾಧಿ ಕಾರದ ಅಧಿಕಾರಿಗಳು ಹಾಗೂ ಗುತ್ತಿಗೆ ದಾರರ ಮೇಲೆ ಪ್ರಕರಣ ದಾಖಲಿಸಬೇಕಾ ಗುತ್ತದೆ. ಇದಕ್ಕೆ ಅವಕಾಶ ಮಾಡಿ ಕೊಡದಂತೆ ಕರ್ತವ್ಯ ನಿರ್ವಹಿಸಿ ಎಂದು ಸೂಚಿಸಿದರು.

ಕೊಳ್ಳೇಗಾಲದಿಂದ ಮಹದೇಶ್ವರ ಬೆಟ್ಟದ ರಸ್ತೆ ಹಾಗೂ ಸಂತೇಮರಹಳ್ಳಿ ಯಿಂದ ಮೂಗೂರು ಕ್ರಾಸ್‍ವರೆಗಿನ ರಸ್ತೆಗಳು ತೀರ ಹದಗೆಟ್ಟಿದೆ. ಈ ಬಗ್ಗೆ ಏಕೆ ಗಮನಹರಿಸಿಲ್ಲ. ಅಧಿಕಾರಿಗಳು ಏನು ಮಾಡುತ್ತಿದ್ದೀರಿ? ಜನಪ್ರತಿನಿಧಿಗಳು ಸಾರ್ವಜನಿಕರ ಮುಂದೆ ಹೋಗಬೇಕಾ ದರೆ. ಅಧಿಕಾರಿಗಳ ಪ್ರಾಮಾಣ ಕವಾಗಿ ಕರ್ತವ್ಯ ನಿರ್ವಹಿಸಬೇಕು. ರಸ್ತೆಗಳನ್ನು ಅಭಿವೃದ್ಧಿಪಡಿಸಬೇಕು ಎಂದು ಅವರು ತಿಳಿಸಿದರು.

ಜಿಲ್ಲೆಯಲ್ಲಿ ಪ್ರಗತಿಯಲ್ಲಿ ಇರುವ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮ ಗಾರಿ ಶೇ. 25ರಷ್ಟು ಮುಗಿದಿದೆ. ಇನ್ನೂ 14 ತಿಂಗಳೊಳಗೆ ಉಳಿದ ಕಾಮ ಗಾರಿಯನ್ನು ಪೂರ್ಣಗೊಳಿಸಬೇಕು ಎಂದು ತಿಳಿಸಿದರು.

ನಗರದ ಬಿ.ರಾಚಯ್ಯ ಜೋಡಿ ರಸ್ತೆ ಕಾಮಗಾರಿ ವಿಳಂಬವಾಗಿದೆ. ಮಳೆ ಬಂದರೆ ಇಡೀ ರಸ್ತೆಯೇ ಕೆಸರಿನಿಂದ ಕೂಡಿರುತ್ತದೆ. ಕಾಮಗಾರಿಯನ್ನು ಬೇಗನೇ ಮುಕ್ತಾಯಗೊಳಿಸಬೇಕು ಎಂದು ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಕಾಂತರಾಜು ಅವರಿಗೆ ಸೂಚಿಸಿದರು.
ರಾಷ್ಟ್ರೀಯ ಹೆದ್ದಾರಿ 209 ಯೋಜ ನೆಯ ವ್ಯವಸ್ಥಾಪಕ ಶ್ರೀಧರ್ ಮಾತನಾಡಿ, ಕಾಮಗಾರಿಯನ್ನು ಚುರುಕುಗೊಳಿಸಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ಸಭೆಯಲ್ಲಿ ಶಾಸಕ ಸಿ.ಎಸ್.ನಿರಂಜನ್ ಕುಮಾರ್, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶಿವಮ್ಮ, ಉಪಾಧ್ಯಕ್ಷ ಜೆ.ಯೋಗೇಶ್, ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ಹರೀಶ್‍ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದ್ರಕುಮಾರ್ ಮೀನಾ, ಉಪ ವಿಭಾಗಾಧಿಕಾರಿ ಬಿ.ಫೌಜಿಯಾ ತರ ನ್ನಮ್ ಹಾಜರಿದ್ದರು.

ವಿನೂತನ ವಿದ್ಯುತ್ ಕಂಬ ಅಳವಡಿಸಲು ಸೂಚನೆ
ಚಾಮರಾಜನಗರ ಹಾಗೂ ಕೊಳ್ಳೇಗಾಲದಲ್ಲಿ ಪ್ರಗತಿಯಲ್ಲಿ ಇರುವ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿಯನ್ನು ಶೀಘ್ರವೇ ಪೂರ್ಣಗೊಳಿಸಿ ಮೈಸೂರು ಹಾಲಿನ ಡೈರಿ ರಸ್ತೆಯಲ್ಲಿ ಹಾಕಿರುವಂತೆ ವಿದ್ಯುತ್ ಕಂಬಗಳನ್ನು ಅಳವಡಿಸಿ. ಆಗ ರಸ್ತೆಯ ಅಂದ ಹೆಚ್ಚಾಗುತ್ತದೆ. ಇದನ್ನು ಸ್ಥಳೀಯ ನಗರಸಭೆಯ ನಿಧಿಯಿಂದ ನಿರ್ವಹಿಸುವಂತೆ ಸಂಸದ ಧ್ರುವನಾರಾಯಣ ಸೂಚಿಸಿದರು.

ನಗರಸಭೆ ಪೌರಾಯುಕ್ತ ಎಂ.ರಾಜಣ್ಣ ಮಾತನಾಡಿ, ವಿನೂತನ ಮಾದರಿಯ ವಿದ್ಯುತ್ ಕಂಬಗಳನ್ನು ಹಾಕಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಸಭೆಯಲ್ಲಿ ಸಂಸದರಿಂದ ಕೇಳಿಬಂದ ಸಲಹೆ, ಸೂಚನೆ

  • ರಸ್ತೆಗಾಗಿ ಜಮೀನು ಕಳೆದುಕೊಳ್ಳುವ ರೈತರಿಗೆ ಸೂಕ್ತ ಪರಿಹಾರ ನೀಡಿ.
  • ಕೆಲಸ ಸರಿ ಮಾಡಿದರೆ ಬೆನ್ನು ತಟ್ಟುತ್ತೇವೆ, ಇಲ್ಲದಿದ್ದರೆ ಛೀಮಾರಿ ಹಾಕುತ್ತೇವೆ.
  • 3 ತಿಂಗಳೊಳಗೆ ಮಂಜೂರಾಗಿರುವ 17 ಟವರ್‍ಗಳನ್ನು ಅಳವಡಿಸಿ.
  • ಬದನಗುಪ್ಪೆ ಕೈಗಾರಿಕಾ ವಸಾಹತು ಪ್ರದೇಶದಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಕ್ರಮ ಕೈಗೊಳ್ಳಿ.
  • ನರೇಗಾ ಯೋಜನೆಯ ಪ್ರಗತಿ ಜಿಲ್ಲೆಯಲ್ಲಿ ಕಡಿಮೆ ಈ ಯೋಜನೆಯನ್ನು ಸದ್ಬಳಕೆ ಮಾಡಿಕೊಂಡು ಅಭಿವೃದ್ಧಿ ಕಾರ್ಯ ಕೈಗೊಳ್ಳಿ.
  • ಜಿಲ್ಲೆಗೆ ರೇಷ್ಮೆನಾಡು ಎನ್ನಲಾಗುತ್ತದೆ. ಆದರೆ, ಇಲ್ಲಿ ರೇಷ್ಮೆನೇ ಇಲ್ಲದಂತೆ ಮಾಡುತ್ತಿದ್ದೀರಲ್ಲ?
  • ಮಾದಾಪುರ ಮುಖ್ಯರಸ್ತೆಯಿಂದ ಕೇಂದ್ರಿಯ ವಿದ್ಯಾಲಯದವರೆಗೆ ರಸ್ತೆ ನಿರ್ಮಾಣ ಆಗಿದ್ದು, ಎರಡೂ ಬದಿಯಲ್ಲಿ ಗಿಡಗಳನ್ನು ನೆಡಬೇಕು.
  • ನಂಜನಗೂಡು – ಗುಂಡ್ಲುಪೇಟೆ ರಸ್ತೆ ಬದಿಯಲ್ಲಿ ಗಿಡ ನೆಟ್ಟು ಪೋಷಿಸಲು ಕ್ರಮ ಕೈಗೊಳ್ಳಿ.

Translate »