ಆರೋಗ್ಯ ಕಾಳಜಿಗೆ ಜಿಲ್ಲಾ ನ್ಯಾಯಾಧೀಶರ ಸಲಹೆ
ಚಾಮರಾಜನಗರ

ಆರೋಗ್ಯ ಕಾಳಜಿಗೆ ಜಿಲ್ಲಾ ನ್ಯಾಯಾಧೀಶರ ಸಲಹೆ

July 13, 2018

ಚಾಮರಾಜನಗರ: ಜೀವನದಲ್ಲಿ ಆರೋಗ್ಯವೇ ಸಂಪತ್ತಾಗಿದ್ದು, ಇದನ್ನು ಕಾಪಾಡಿಕೊಳ್ಳಲು ಪ್ರತಿಯೊಬ್ಬರೂ ಕಾಳಜಿ ವಹಿಸಬೇಕೆಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಜಿ.ಬಸವ ರಾಜ ಸಲಹೆ ಮಾಡಿದರು.

ನಗರದ ಜಿಲ್ಲಾ ಕಾರಾಗೃಹದಲ್ಲಿ ಇಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ವೈದ್ಯಕೀಯ ವಿಜ್ಞಾನ ಸಂಸ್ಥೆ, ಭಾರತೀಯ ರೆಡ್ ಕ್ರಾಸ್ ಸೊಸೈಟಿ ಸಂಯುಕ್ತಾಶ್ರಯದಲ್ಲಿ ವಿಚಾರಣಾಧೀನ ಕೈದಿಗಳಿಗೆ ಹಮ್ಮಿಕೊಳ್ಳಲಾಗಿದ್ದ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.

ಮನುಷ್ಯನಿಗೆ ಆರೋಗ್ಯಕ್ಕೆ ಮಿಗಿಲಾದ ಭಾಗ್ಯವಿಲ್ಲ. ಉತ್ತಮ ಆರೋಗ್ಯ ಹೊಂದಿ ದ್ದರೆ ನೆಮ್ಮದಿ ಜೀವನ ಸಾಗಿಸಬಹುದು. ಪ್ರತಿಯೊಬ್ಬರೂ ಕನಿಷ್ಟ 6 ತಿಂಗಳಿಗೊಮ್ಮೆ ಯಾದರೂ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು. ವೈಯಕ್ತಿಕವಾಗಿ ಆರೋಗ್ಯದ ಬಗ್ಗೆ ಹೆಚ್ಚು ಗಮನ ನೀಡಬೇಕೆಂದು ಜಿಲ್ಲಾ ನ್ಯಾಯಾಧೀಶರು ತಿಳಿಸಿದರು.

ಎಲ್ಲ ನಾಗರಿಕರಂತೆ ವಿಚಾರಣಾಧೀನ ಕೈದಿಗಳು ಸಹ ಆರೋಗ್ಯ ಸೌಲಭ್ಯ ಪಡೆ ಯಬೇಕಿದೆ. ಅವರ ಆರೋಗ್ಯದ ಬಗ್ಗೆಯೂ ಮುತುವರ್ಜಿ ವಹಿಸಬೇಕಿದೆ. ಈ ನಿಟ್ಟಿನಲ್ಲಿ ವಿಚಾರಣಾಧೀನ ಕೈದಿ ಗಳಿಗಾಗಿಯೇ ಕಾರಾಗೃಹ ಆವರಣ ದಲ್ಲಿಯೇ ಆರೋಗ್ಯ ತಪಾಸಣಾಯಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳ ಲಾಗುತ್ತಿದೆ. ಇದಕ್ಕಾಗಿ ಕೈಜೋಡಿಸಿರುವ ವೈದ್ಯಕೀಯ ವಿಜ್ಞಾನ ಸಂಸ್ಥೆ, ವಕೀಲರ ಸಂಘ, ರೆಡ್ ಕ್ರಾಸ್ ಸೊಸೈಟಿಯನ್ನು ಅಭಿನಂದಿಸುವುದಾಗಿ ನ್ಯಾಯಾಧೀಶರು ನುಡಿದರು.

ಆರೋಗ್ಯ ತಪಾಸಣಾ ಶಿಬಿರದಲ್ಲಿ ಎಲ್ಲ ರನ್ನು ಪರೀಕ್ಷಿಸಲಾಗುತ್ತದೆ. ಹೃದ್ರೋಗ, ರಕ್ತ ದೊತ್ತಡ, ಮಧುಮೇಹದಿಂದ ಬಳಲುವ ವರಿಗೆ ಚಿಕಿತ್ಸೆಯನ್ನು ನೀಡುವ ವ್ಯವಸ್ಥೆ ಮಾಡಲಾಗುತ್ತದೆ. ಮಾನಸಿಕ ಖಿನ್ನತೆ ಯಿಂದ ನರಳುವವರಿಗೆ ಸಹ ಮಾನಸಿಕ ತಜ್ಞರಿಂದ ಸಮಾಲೋಚನೆ, ಸಲಹೆಯಂ ತಹ ಚಿಕಿತ್ಸೆ ಸೌಲಭ್ಯ ಸಿಗಲಿದೆ. ಈ ಎಲ್ಲಾ ಆರೋಗ್ಯಪೂರಕ ಸೌಲಭ್ಯಗಳನ್ನು ಸದುಪಯೋಗ ಮಾಡಿಕೊಳ್ಳಬೇಕೆಂದು ಜಿಲ್ಲಾ ನ್ಯಾಯಾಧೀಶರು ತಿಳಿಸಿದರು.

ಚಾಮರಾಜನಗರದ ವೈದ್ಯಕೀಯ ಸಂಸ್ಥೆಯ ಮನೋವೈದ್ಯರಾದ ಡಾ. ಸುಷ್ಮಾ ಮಾತನಾಡಿ, ಮಾನಸಿಕ ಒತ್ತಡ, ಖಿನ್ನತೆ, ಆತಂಕ, ಭಯ ಭೀತಿಗೊಳಗಾಗುವವರಿಗೆ ಜಿಲ್ಲಾ ಆಸ್ಪತ್ರೆ ಯಲ್ಲಿ ವಿಶೇಷವಾಗಿ ಚಿಕಿತ್ಸೆ ನೀಡಲಾಗು ತ್ತದೆ. ಹೀಗಾಗಿ ಮಾನಸಿಕ ಕಾಯಿಲೆಯಿಂದ ಬಳಲುತ್ತಿರುವವರು ಕಾರಾಗೃಹದ ಹಿರಿಯ ಅಧಿಕಾರಿಗಳ ಗಮನಕ್ಕೆ ತಂದು ಚಿಕಿತ್ಸೆ ಸೌಲಭ್ಯವನ್ನು ಪಡೆದುಕೊಳ್ಳಬೇಕು ಎಂದು ಸಲಹೆ ಮಾಡಿದರು.

ಉತ್ತಮ ಆಲೋಚನೆ, ಚಿಂತನೆಯತ್ತ ಮನಸ್ಸನ್ನು ಹರಿಯಬಿಡಬೇಕು. ಸಮಾಜ ದಲ್ಲಿ ಭವಿಷ್ಯದಲ್ಲಿ ನಿಮ್ಮ ನಡವಳಿಕೆಯನ್ನು ಸಕಾರಾತ್ಮವಾಗಿ ಬದಲಾಯಿಸಿಕೊಂಡರೆ ಎಲ್ಲರೂ ನಿಮ್ಮನ್ನು ಒಪ್ಪಿಕೊಳ್ಳುತ್ತಾರೆ. ಒಳ್ಳೆ ಯತನ ತೋರಿ ಎಲ್ಲರ ಮನಸ್ಸನ್ನು ಗೆದ್ದು ಹೊಸ ಜೀವನ ರೂಪಿಸಿಕೊಳ್ಳುವತ್ತ ನಿಮ್ಮ ಯೋಚನಾ ಲಹರಿ ಇರಲಿ ಎಂದು ಸುಷ್ಮಾ ಕಿವಿಮಾತು ಹೇಳಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾ ಕಾರಾಗೃಹದ ಅಧೀಕ್ಷಕರಾದ ಶಾಂತಶ್ರೀ ಅವರು ಆರೋಗ್ಯವು ಮನುಷ್ಯನಿಗೆ ಅತಿ ಮುಖ್ಯ ಎಂಬುದನ್ನು ಅರಿತು ಕಾರಾಗೃಹ ದಲ್ಲಿ ಕೈದಿಗಳಿಗೆ ಆಗಿಂದಾಗ್ಗೆ ಆರೋಗ್ಯ ಪೂರಕ ಶಿಬಿರಗಳನ್ನು ಆಯೋಜಿಸಲಾಗು ತ್ತಿದೆ. ಕಾರಾಗೃಹ ಅಧಿಕಾರಿ ಸಿಬ್ಬಂದಿಯವ ರಿಗೂ ಸಂಪೂರ್ಣ ಆರೋಗ್ಯ ತಪಾಸಣೆ ಮಾಡುವ ಕಾರ್ಯಕ್ರಮ ಏರ್ಪಡಿಸಲಾಗು ತ್ತದೆ. ಪ್ರತಿಯೊಬ್ಬರೂ ಶುಚಿತ್ವಕ್ಕೆ ಮಹತ್ವ ನೀಡಬೇಕು. ಆರೋಗ್ಯಪಾಲನೆಗೆ ಗಮನ ವಹಿಸಬೇಕು ಎಂದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿ ಕಾರದ ಸದಸ್ಯ ಕಾರ್ಯದರ್ಶಿ ಸಿ.ಜಿ.ವಿಶಾ ಲಾಕ್ಷಿ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಉಮ್ಮತ್ತೂರು ಇಂದುಶೇಖರ್, ಪ್ರಧಾನ ಕಾರ್ಯದರ್ಶಿ ಅರುಣ್ ಕುಮಾರ್, ಡಿವೈ ಎಸ್‍ಪಿ ಟಿ.ಜಯಕುಮಾರ್, ಭಾರ ತೀಯ ರೆಡ್ ಕ್ರಾಸ್ ಸೊಸೈಟಿಯ ಕಾರ್ಯದರ್ಶಿ ಡಾ.ಮಹೇಶ್, ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Translate »