ಜಿಲ್ಲಾಮಟ್ಟದ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆ ಜಿಲ್ಲೆಯ ಎಲ್ಲಾ ಕೆರೆಗಳ ಭರ್ತಿಗೆ ಸಿಎಂ ಸೂಚನೆ
ಮಂಡ್ಯ

ಜಿಲ್ಲಾಮಟ್ಟದ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆ ಜಿಲ್ಲೆಯ ಎಲ್ಲಾ ಕೆರೆಗಳ ಭರ್ತಿಗೆ ಸಿಎಂ ಸೂಚನೆ

September 27, 2018

ಮಂಡ್ಯ:  ‘ಕುಡಿಯುವ ನೀರನ್ನು ಒದಗಿಸಲು ಹಾಗೂ ಜಿಲ್ಲೆಯ ಎಲ್ಲಾ ಕೆರೆಗಳಿಗೆ ನೀರು ತುಂಬಿಸಲು ಅಧಿಕಾರಿಗಳು ತತ್‍ಕ್ಷಣ ಕ್ರಮವಹಿಸಬೇಕು. ಈ ನಿಟ್ಟಿನಲ್ಲಿ ನಿರ್ಲಕ್ಷ್ಯ ತೋರಿದರೆ ಸಂಬಂಧ ಪಟ್ಟ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು’ ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಎಚ್ಚರಿಕೆ ನೀಡಿದರು.

ನಗರದ ಜಿಲ್ಲಾ ಪಂಚಾಯಿತಿ ಕಾವೇರಿ ಸಭಾಂಗಣದಲ್ಲಿ ಬುಧವಾರ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯ ಎಲ್ಲಾ ಗ್ರಾಮಗಳಿಗೆ ಕುಡಿ ಯುವ ನೀರನ್ನು ಪೂರೈಸಲು 1,700 ಕೋಟಿ ರೂ.ಗಳ ಸಮಗ್ರ ಕುಡಿಯುವ ನೀರಿನ ಯೋಜನೆಯನ್ನು ಜಿಲ್ಲಾಡಳಿತ ಸಿದ್ಧಪಡಿಸಬೇಕು. ಮಂಡ್ಯ ನಗರದ ಸಮಗ್ರ ಅಭಿವೃದ್ಧಿಯ ಅನುದಾನಕ್ಕೆ ಕ್ರಿಯಾ ಯೋಜನೆ ಜಿಲ್ಲಾಡಳಿತ ಸಿದ್ದಪಡಿಸಿದ್ದು, ಅನುಮೋದನೆಗೆ ಅಗತ್ಯ ಕ್ರಮವಹಿಸ ಲಾಗುವುದು ಎಂದು ತಿಳಿಸಿದರು.

ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ರೈತರು ಯಾವ ಬೆಳೆಯನ್ನು ಬೆಳೆದರೆ ಆರ್ಥಿಕ ವಾಗಿ ಸಬಲರಾಗುತ್ತಾರೆ ಎಂಬ ವಿಷಯದ ಸಂಪೂರ್ಣ ಮಾಹಿತಿಯನ್ನು ಅಧಿಕಾರಿ ಗಳು ಸಿದ್ಧಪಡಿಸಿ ಶೀಘ್ರ ಸರ್ಕಾರಕ್ಕೆ ವರದಿ ಯನ್ನು ಸಲ್ಲಿಸಬೇಕು. ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ರೈತರು ಆರ್ಥಿಕವಾಗಿ ಅಭಿವೃದ್ಧಿಯಾಗಲು ಹೆಚ್ಚಿನ ಅವಕಾಶ ವಿದ್ದು, ಇದರ ಸದ್ಬಳಕೆ ರೈತರು ಮಾಡಿ ಕೊಳ್ಳಬೇಕು. ಈ ನಿಟ್ಟಿನಲ್ಲಿ ಯೋಜನೆಯ ಸಮರ್ಪಕ ಅನುಷ್ಟಾನಕ್ಕೆ ಹೆಚ್ಚು ಒತ್ತು ನೀಡಬೇಕು. ಮುಖ್ಯಮಂತ್ರಿಗಳು ನರೇಗಾ ಯೋಜನೆಯಡಿ ಅನೇಕ ಕೆಲಸಗಳನ್ನು ಕೈಗೆತ್ತಿಕೊಳ್ಳಲು ಅವಕಾಶಗಳಿದ್ದು ಜಿಲ್ಲಾ ಪಂಚಾಯಿತಿ ಅಧಿಕಾರಿಗಳು ಕಾರ್ಯೋ ನ್ಮುಖರಾಗಬೇಕು ಎಂದು ತಿಳಿಸಿದರು.

ರಾತ್ರಿ ವೇಳೆ ವೈದ್ಯರ ಸೇವೆಗೆ ಸೂಚನೆ: ಆಸ್ಪತ್ರೆಗಳಲ್ಲಿ ರಾತ್ರಿ ವೇಳೆ ವೈದ್ಯರ ಸೇವೆಯ ಕೊರತೆಯ ಬಗ್ಗೆ ಸಾರ್ವಜನಿಕ ರಿಂದ ಸಾಕಷ್ಟು ದೂರುಗಳು ಕೇಳಿ ಬಂದಿದ್ದು, ಆರೋಗ್ಯ ಇಲಾಖೆಯು ರಾತ್ರಿ ವೇಳೆ ವೈದ್ಯರ ಸೇವೆ ಸಿಗುವ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಸೂಚನೆ ಸಂಬಂಧಿಸಿದ ವೈದ್ಯರಿಗೆ ನೀಡಬೇಕು. ಮುಖ್ಯ ಮಂತ್ರಿಗಳು ಆರೋಗ್ಯ ಕರ್ನಾಟಕ ಯೋಜನೆಯ ಕಾರ್ಡ್ ಸಿಗದಿರುವವರು ಬಿಪಿಎಲ್ ಹಾಗೂ ಆಧಾರ್ ಕಾರ್ಡ್‍ನ್ನು ನೀಡಿ ಈ ಯೋಜನೆಯ ಸೌಲಭ್ಯ ಪಡೆಯಲು ಸಹ ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದರು.

ವಸತಿ ರಹಿತರಿಗೆ ಕೂಡಲೇ ಸರ್ಕಾರಿ ಜಮೀನನ್ನು ಗುರುತಿಸಿ ನಿವೇಶನವನ್ನು ನೀಡಲು ಕ್ರಮವಹಿಸಬೇಕು. ಜಿಲ್ಲೆಯಲ್ಲಿ ದುರಸ್ತಿಯಲ್ಲಿರುವ ಶಾಲಾ ಕೊಠಡಿಗಳ ಮಾಹಿತಿ ಹಾಗೂ ಅಗತ್ಯವಾಗಿ ಬೇಕಾಗಿರುವ ಶಾಲಾ ಕಟ್ಟಡಗಳು ಹಾಗೂ ಶಾಲೆಗಳ ಅಭಿವೃದ್ಧಿಯ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ಸಿದ್ಧಪಡಿಸಿ ನೀಡುವಂತೆ ಸೂಚಿಸಿದರು.

ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ 550 ಹಾಸಿಗೆಯ ಸಾಮಥ್ರ್ಯ ವಿರುವ ಸೌಲಭ್ಯವಿದ್ದು, ಇದನ್ನು 700 ಹಾಸಿಗೆಯ ಸಾಮಥ್ರ್ಯವಿರುವ ಸೌಲಭ್ಯಕ್ಕೆ ಮೇಲ್ದರ್ಜೆಗೇರಿಸಲು 30 ಕೋಟಿ ಅನುದಾನ ಕಾಯ್ದಿರಿಸಲಾಗಿದ್ದು, ಈ ನಿಟ್ಟಿನಲ್ಲಿ ಶೀಘ್ರವೇ ಕ್ರಿಯಾ ಯೋಜನೆಯನ್ನು ಸಿದ್ಧಪಡಿಸಬೇಕು ಎಂದು ತಿಳಿಸಿದರು.

ಸಭೆಯಲ್ಲಿ ಲೋಕೋಪಯೋಗಿ ಇಲಾಖೆಯ ಸಚಿವ ಹೆಚ್.ಡಿ.ರೇವಣ್ಣ, ಪ್ರವಾಸೋದ್ಯಮ ಸಚಿವ ಸಾರಾ ಮಹೇಶ್, ಸಾರಿಗೆ ಸಚಿವ ತಮ್ಮಣ್ಣ, ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಣ್ಣ ನೀರಾವರಿ ಸಚಿವ ಸಿ.ಎಸ್.ಪುಟ್ಟರಾಜು ಹಾಗೂ ಎಲ್ಲಾ ತಾಲೂಕಿನ ವಿಧಾನಸಭಾ ಕ್ಷೇತ್ರದ ಶಾಸಕರು ಉಪಸ್ಥಿತರಿದ್ದರು.

ಯುವ ಜನರಿಗಾಗಿ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದು ಜಿಲ್ಲಾ ಕ್ರೀಡಾಂಗಣ ಹಾಗೂ ತಾಲೂಕು ಕ್ರೀಡಾಂಗಣವನ್ನು ಅಭಿವೃದ್ಧಿಪಡಿಸಲು ಅಧಿಕಾರಿಗಳು ಕ್ರಮವಹಿಸಬೇಕು. ರಾಷ್ಟ್ರೀಯ ಹೆದ್ದಾರಿಯ ಅಭಿವೃದ್ಧಿಗಾಗಿ ಭೂಮಿಯನ್ನು ನೀಡಿರುವ ರೈತರಿಗೆ ಸಮರ್ಪಕವಾದ ಪರಿಹಾರವನ್ನು ನೀಡಬೇಕು. -ಎಚ್.ಡಿ.ಕುಮಾರಸ್ವಾಮಿಮುಖ್ಯಮಂತ್ರಿ

20 ಬಸ್‍ಗಳಿಗೆ ಸಿಎಂ ಚಾಲನೆ

ನಗರದ ಬಾಲಕರ ಸರ್ಕಾರಿ ಕಾಲೇಜು ಆವರಣದಲ್ಲಿ ಬುಧವಾರ ಮುಖ್ಯಮಂತ್ರಿ ಕುಮಾರಸ್ವಾಮಿ ಜಿಲ್ಲೆಯ ವಿವಿಧೆಡೆಗೆ 20 ಕೆಎಸ್‍ಆರ್‍ಟಿಸಿ ನೂತನ ಬಸ್‍ಗಳ ಸೌಲಭ್ಯಕ್ಕೆ ಚಾಲನೆ ನೀಡಿದರು.

ಕಿರುಗಾವಲು/ ಸಂತೇಮಾಳದಿಂದ ಬೆಂಗಳೂರು, ಮದ್ದೂರಿನಿಂದ ಮಂಡ್ಯಕ್ಕೆ 2 ಬಸ್, ಮಂಡ್ಯದಿಂದ ಕೆ.ಎಂ.ದೊಡ್ಡಿ, ಮಳವಳ್ಳಿಯಿಂದ ಮಂಡ್ಯ, ಮಳವಳ್ಳಿಯಿಂದ ಗಗನಚುಕ್ಕಿ ಜಲಪಾತ, ಬೆಂಗಳೂರಿನಿಂದ ಹುಸ್ಮೂರು, ಹಲಗೂರಿನಿಂದ ಬಿರೋಟ, ಮಂಡ್ಯದಿಂದ ಮೇಲುಕೋಟೆ, ಮಳವಳ್ಳಿ ಗ್ರಾಮಾಂತರ 3 ಬಸ್, ಹಲಗೂರಿನಿಂದ ಮಳವಳ್ಳಿ, ಪಾಂಡವಪುರದಿಂದ ಸುಂಕಾತೊಣ್ಣೂರು, ಮೈಸೂರುನಿಂದ ಹೊಸದುರ್ಗ, ಕೆ.ಆರ್.ಪೇಟೆಯಿಂದ ರಾಗಿಮುದ್ದನಹಳ್ಳಿ, ಮದ್ದೂರಿನಿಂದ ಕೊಪ್ಪಗೆ 2 ಬಸ್, ಮದ್ದೂರಿ ನಿಂದ ಮಾರದೇವನಹಳ್ಳಿ ಹಾಗೂ ಮದ್ದೂರಿನಿಂದ ಕೆ.ಹೊನ್ನಲಗೆರೆ ಮಾರ್ಗಗಳಿಗೆ ನಿಯೋಜಿಸಲಾಗಿರುವ ನೂತನ ಬಸ್‍ಗಳಿಗೆ ಚಾಲನೆ ನೀಡಲಾಯಿತು.

ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಸಿ.ಎಸ್.ಪುಟ್ಟರಾಜು ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ, ಶಾಸಕರಾದ ಎಂ.ಶ್ರೀನಿವಾಸ್, ಡಾ.ಕೆ.ಅನ್ನದಾನಿ, ಸುರೇಶ್‍ಗೌಡ, ನಾರಾಯಣಗೌಡ, ರವೀಂದ್ರ ಶ್ರೀಕಂಠಯ್ಯ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Translate »