ಚಾಮರಾಜನಗರ: ಮಾದಿಗ ಸಮುದಾಯಕ್ಕೆ ಒಳಮೀಸಲಾತಿ ಕಲ್ಪಿಸುವುದಾಗಿ ಭರವಸೆ ನೀಡಿ ಅದನ್ನು ಈಡೇರಿಸದೆ ಇರುವ ಕಾಂಗ್ರೆಸ್‍ಗೆ ಈ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸು ವುದಾಗಿ ಜಿಲ್ಲಾ ಮಾದಿಗ ಮೀಸಲಾತಿ ಹೋರಾಟ ಸಮಿತಿ ಅಧ್ಯಕ್ಷ ಬಸವನಪುರ ರಾಜಶೇಖರ ಹೇಳಿದರು.
ನಗರದ ಜಿಲ್ಲಾ ಕಾರ್ಯನಿರತ ಪತ್ರ ಕರ್ತರ ಭವನದಲ್ಲಿ ಗುರುವಾರ ಸುದ್ದಿ ಗೋಷ್ಠಿಯಲ್ಲಿ ಅವರು ಮಾತನಾಡಿದರು.
ರಾಜ್ಯದಲ್ಲಿ ಕಳೆದ 5 ವರ್ಷಗಳಿಂದ ಅಧಿಕಾರ ನಡೆಸಿದ ಮುಖ್ಯಮಂತ್ರಿ ಸಿದ್ದ ರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ತೀರ ಹಿಂದುಳಿದಿರುವ ಮಾದಿಗ ಸಮು ದಾಯಕ್ಕೆ ಒಳಮೀಸಲಾತಿ ಜಾರಿಗೊಳಿಸು ವುದಾಗಿ ಭರವಸೆ ನೀಡಿತ್ತು. ಆದರೆ, ಅದನ್ನು ಜಾರಿಗೊಳಿಸದೆ ಸಮುದಾಯದ ಜನರನ್ನು ನಿರಾಶೆಗೊಳಿಸಿದೆ ಎಂದು ದೂರಿದರು.
ಸಮುದಾಯಕ್ಕೆ ನೀಡಿದ ಭರವಸೆ ಈಡೇರಿಸದೆ ಮುಖ್ಯಮಂತ್ರಿ ಸಿದ್ದ ರಾಮಯ್ಯ ಅವರು ವಚನ ಭ್ರಷ್ಟರಾಗಿ ದ್ದಾರೆ. ಹೀಗಾಗಿ ಮೇ 12ರಂದು ನಡೆಯುವ ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾ ವಣೆಯಲ್ಲಿ ಕಾಂಗ್ರೆಸ್ ವಿರುದ್ಧ ಮತ ಚಲಾ ಯಿಸುವಂತೆ ಸಮುದಾಯದ ಜನರಿಗೆ ತಿಳಿಸಲಾಗಿದೆ ಎಂದರು.
ಪ್ರಸ್ತುತ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ 224 ಕ್ಷೇತ್ರದಲ್ಲಿ ಮಾದಿಗ ಸಮುದಾಯಕ್ಕೆ ಬಿಜೆಪಿ 12, ಕಾಂಗ್ರೆಸ್ 8 ಹಾಗೂ ಜೆಡಿಎಸ್ 2 ಸೀಟುಗಳನ್ನು ನೀಡಿದೆ. ಅತಿಹೆಚ್ಚು ಸೀಟುಗಳನ್ನು ಬಿಜೆಪಿ ನೀಡಿರುವುದರಿಂದ ಮಾದಿಗ ಸಮು ದಾಯ ಬಿಜೆಪಿಯನ್ನು ಬೆಂಬಲಿಸಲು ತೀರ್ಮಾನಿಸಿದೆ ಎಂದು ರಾಜಶೇಖರ್ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ. ಶಿವಕುಮಾರ, ಸಂಘಟನಾ ಕಾರ್ಯ ದರ್ಶಿ ಎಂ.ರಾಜು, ತಾಲೂಕು ಉಪಾಧ್ಯಕ್ಷ ರಂಗಸ್ವಾಮಿ, ಮುಖಂಡ ಸುರೇಶ್ ಹಾಜರಿದ್ದರು.