ನಾಳೆ ಮೈಸೂರಿಗೆ ಜಿಲ್ಲಾ ಉಸ್ತುವಾರಿ ಸಚಿವ ಜಿಟಿಡಿ ಆಷಾಢ ನಂತರ ಜಲದರ್ಶಿನಿಯಲ್ಲಿ ಕಚೇರಿ ಉದ್ಘಾಟನೆ ಸಾಧ್ಯತೆ
ಮೈಸೂರು

ನಾಳೆ ಮೈಸೂರಿಗೆ ಜಿಲ್ಲಾ ಉಸ್ತುವಾರಿ ಸಚಿವ ಜಿಟಿಡಿ ಆಷಾಢ ನಂತರ ಜಲದರ್ಶಿನಿಯಲ್ಲಿ ಕಚೇರಿ ಉದ್ಘಾಟನೆ ಸಾಧ್ಯತೆ

August 2, 2018

ಮೈಸೂರು: ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾಗಿ ನೇಮಕಗೊಂಡಿರುವ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡರು ಶುಕ್ರವಾರ ರಾತ್ರಿ (ಆಗಸ್ಟ್ 3) ಮೈಸೂರಿಗೆ ಆಗಮಿಸುವರು.

ಗುರುವಾರ ಮತ್ತು ಶುಕ್ರವಾರ ಬೆಂಗಳೂರಲ್ಲಿ ಉನ್ನತ ಶಿಕ್ಷಣ ಇಲಾಖೆಗೆ ಸಂಬಂಧಿಸಿದಂತೆ ಉನ್ನತ ಮಟ್ಟದ ಅಧಿಕಾರಗಳ ಸಭೆ ನಿಗದಿಯಾಗಿರುವುದ ರಿಂದ ಶುಕ್ರವಾರ ರಾತ್ರಿ ಸಚಿವ ಜಿ.ಟಿ.ದೇವೇಗೌಡರು ಜಿಲ್ಲಾ ಉಸ್ತುವಾರಿ ಸಚಿವರಾದ ನಂತರ ಮೊದಲ ಬಾರಿಗೆ ಮೈಸೂರಿಗೆ ಆಗಮಿಸುವರು ಎಂದು ಆಪ್ತ ಮೂಲಗಳು ತಿಳಿಸಿವೆ.

ಸಚಿವರನ್ನು ಆತ್ಮೀಯವಾಗಿ ಬರಮಾಡಿಕೊಳ್ಳಲು ಮೈಸೂರು ನಗರ ಮತ್ತು ಜಿಲ್ಲಾ ಜೆಡಿಎಸ್ ಪದಾಧಿಕಾರಿಗಳು, ಕಾರ್ಯಕರ್ತರು, ಚಾಮುಂಡೇಶ್ವರಿ ಕ್ಷೇತ್ರದ ಪ್ರಮುಖರು ಹಾಗೂ ಅಭಿಮಾನಿಗಳು ಸಕಲ ಸಿದ್ಧತೆ ನಡೆಸುತ್ತಿದ್ದಾರೆ. ಹುಣಸೂರು ರಸ್ತೆಯಲ್ಲಿರುವ ಜಲದರ್ಶಿನಿ ಅತಿಥಿಗೃಹದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಅಧಿಕೃತ ಕಚೇರಿಗೆ ಸ್ಥಳ ನಿಗದಿ ಮಾಡಲಾಗಿದ್ದು, ಆಷಾಢ ಮಾಸ ಮುಗಿದ ನಂತರ ಕಚೇರಿ ಉದ್ಘಾಟನೆ ಮಾಡಲಾಗುವುದು ಎಂದೂ ಮೂಲಗಳು ತಿಳಿಸಿವೆ.

Translate »