ತುರ್ತು ಪರಿಹಾರಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಜಿಟಿಡಿ ಸೂಚನೆ
ಮೈಸೂರು

ತುರ್ತು ಪರಿಹಾರಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಜಿಟಿಡಿ ಸೂಚನೆ

April 29, 2019

ಮೈಸೂರು: ಮೈಸೂರು ನಗರದ ಕೆಲ ಬಡಾವಣೆಗಳು ಹಾಗೂ ಹೊರ ವಲಯದಲ್ಲಿ ಕುಡಿಯುವ ನೀರಿನ ಹಾಹಾಕಾರ ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ ಸಭೆ ನಡೆಸಿ, ಸ್ಥಳ ಪರಿಶೀಲನೆ ಮಾಡಿ, ಅಗತ್ಯ ತುರ್ತು ಕ್ರಮ ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡರು, ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಈ ಗಂಭೀರ ಕುಡಿಯುವ ನೀರಿನ ಸಮಸ್ಯೆ ನಿವಾರಣೆ ಸಂಬಂಧ ಚರ್ಚೆ ನಡೆಸಲು ವಾಸ್ತವವಾಗಿ ನಾಳೆ(ಏ.29) ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಟಿಡಿ ತುರ್ತು ಸಭೆ ಕರೆದಿದ್ದರು. ಆದರೆ ಇನ್ನೂ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿ ರುವ ಕಾರಣ ಪರಿಶೀಲನಾ, ಅಭಿವೃದ್ಧಿ ಸಂಬಂಧ ಸಭೆ, ಸಮಾರಂಭ ನಡೆಸು ವುದು ಸೂಕ್ತವಲ್ಲ ಎಂದು ಚುನಾವಣಾ ಆಯೋಗ ಸೂಚಿಸಿದ ಹಿನ್ನೆಲೆಯಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆಯಬೇಕಿದ್ದ ಸಭೆಯನ್ನು ರದ್ದುಗೊಳಿಸಿ, ಕುಡಿಯುವ ನೀರಿನ ಸಮಸ್ಯೆಗೆ ಶೀಘ್ರ ಪರಿಹಾರ ಕಲ್ಪಿ ಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಹಾಗಾಗಿ ಮೈಸೂರು ಜಿಲ್ಲಾ ಪ್ರಭಾರ ಉಸ್ತುವಾರಿ ಕಾರ್ಯದರ್ಶಿ ಕಲ್ಪನಾ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಯಲ್ಲಿ ನಾಳೆ(ಏ.29) ಅಧಿಕಾರಿಗಳ ಸಭೆ ನಡೆಯಲಿದ್ದು, ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್, ಪಾಲಿಕೆ ಆಯುಕ್ತೆ ಶಿಲ್ಪಾನಾಗ್, ಜಿ.ಪಂ ಸಿಇಒ ಕೆ.ಜ್ಯೋತಿ, ವಾಣಿವಿಲಾಸ ನೀರು ಸರಬರಾಜು ಮಂಡಳಿ, ಮುಡಾ, ತಾ.ಪಂ ಹಿರಿಯ ಅಧಿಕಾರಿಗಳು ಪಾಲ್ಗೊಳ್ಳ ಲಿದ್ದಾರೆ. ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಸಭೆಯಲ್ಲಿ ಚರ್ಚಿಸುವುದರ ಜೊತೆಗೆ ಸಮಸ್ಯೆ ಉಲ್ಬಣಿಸಿರುವ ಕೆಲ ಪ್ರದೇಶಗಳಿಗೆ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸುವ ಸಾಧ್ಯತೆಯೂ ಇದೆ.

ಚಾಮುಂಡಿಬೆಟ್ಟದ ತಾವರೆಕಟ್ಟೆ, ಮೈಸೂ ರಿನ ರೈಲ್ವೆ ಬಡಾವಣೆ, ಹಿನಕಲ್, ಹೂಟ ಗಳ್ಳಿ, ಹೌಸಿಂಗ್ ಬೋರ್ಡ್ ಕಾಲೋನಿ, ವಿಜಯನಗರ 2 ಮತ್ತು 3 ಹಂತ ಇನ್ನಿತರ ಕಡೆಗಳಲ್ಲಿ ಕುಡಿಯುವ ನೀರು ಸಮರ್ಪಕ ವಾಗಿ ಪೂರೈಕೆಯಾಗದೆ ತೀವ್ರ ಸಮಸ್ಯೆ ಸೃಷ್ಟಿಯಾಗಿದೆ. ಇದರಿಂದ ರೋಸಿರುವ ಸಾರ್ವಜನಿಕರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಸಮಸ್ಯೆಯನ್ನು ಗಂಭೀರ ವಾಗಿ ಪರಿಗಣಿಸಿರುವ ಜಿಲ್ಲಾಡಳಿತ ಜಿಲ್ಲಾ ಉಸ್ತುವಾರಿ ಸಚಿವರ ಸೂಚನೆ ಮೇರೆಗೆ ಅಧಿಕಾರಿಗಳ ತುರ್ತು ಸಭೆ ಕರೆದಿದೆ.

Translate »