ಇಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರ ಜಿಲ್ಲಾ ಪ್ರವಾಸ
ಮೈಸೂರು

ಇಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರ ಜಿಲ್ಲಾ ಪ್ರವಾಸ

September 3, 2018

ಮಡಿಕೇರಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಕನ್ನಡ ಮತ್ತು ಸಂಸ್ಕøತಿ ಸಚಿವೆ ಡಾ.ಜಯಮಾಲಾ ಸೆಪ್ಟೆಂಬರ್ 3 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.

ಸಚಿವರು ಸೆಪ್ಟೆಂಬರ್ 3 ರಂದು ಬೆಳಗ್ಗೆ 10 ಗಂಟೆಗೆ ಕೊಡಗು ಜಿಲ್ಲೆಯ ನೆರೆ ಸಂತ್ರಸ್ತ ಪ್ರದೇಶಗಳಿಗೆ ಹಾಗೂ ನಿರಾಶ್ರಿತರ ಪರಿಹಾರ ಕೇಂದ್ರಗಳಿಗೆ ಭೇಟಿ ನೀಡಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಡಾ.ಬಿ.ಉದಯ ಕುಮಾರ್ ಶೆಟ್ಟಿ ತಿಳಿಸಿದ್ದಾರೆ.

Translate »