ಬಿಜೆಪಿ ಸರ್ಕಾರ ವಿರುದ್ಧ ಜಿಲ್ಲಾ ಮಹಿಳಾ ಕಾಂಗ್ರೆಸ್ ಪ್ರತಿಭಟನೆ
ಚಾಮರಾಜನಗರ

ಬಿಜೆಪಿ ಸರ್ಕಾರ ವಿರುದ್ಧ ಜಿಲ್ಲಾ ಮಹಿಳಾ ಕಾಂಗ್ರೆಸ್ ಪ್ರತಿಭಟನೆ

September 7, 2021

ಚಾಮರಾಜನಗರ, ಸೆ.6- ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ನಗರದಲ್ಲಿ ಸೋಮ ವಾರ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿ ಯಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರ ವಿರುದ್ಧ ಪ್ರತಿಭಟನೆ ನಡೆಯಿತು.

ನಗರದ ಶ್ರೀಚಾಮರಾಜೇಶ್ವರ ದೇವಸ್ಥಾ ನದ ಆವರಣದಲ್ಲಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಲತಾ ರಾಜಶೇಖರ ಜತ್ತಿ ಅವರ ನೇತೃತ್ವದಲ್ಲಿ ಸಮಾವೇಶಗೊಂಡ ಪ್ರತಿಭಟನಾ ಕಾರರು ಅಲ್ಲಿಂದ ಮೆರವಣಿಗೆ ಹೊರಟು ಭುವನೇಶ್ವರಿ ವೃತ್ತಕ್ಕೆ ತೆರಳಿ ಕೆಲಕಾಲ ರಸ್ತೆ ತಡೆ ನಡೆಸಿ, ಕೇಂದ್ರ, ರಾಜ್ಯ ಸರ್ಕಾ ರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಲತಾ ರಾಜಶೇಖರ ಜತ್ತಿ ಮಾತನಾಡಿ, ಕೇಂದ್ರ, ರಾಜ್ಯ ಸರ್ಕಾರ ಕೋವಿಡ್ ಸಂದರ್ಭದಲ್ಲೂ ಗ್ಯಾಸ್, ಪೆಟ್ರೋಲ್, ಡೀಸೆಲ್ ಸೇರಿದಂತೆ ದಿನ ಬಳ ಕೆಯ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿದ್ದು, ಜನತೆಯನ್ನು ಮತ್ತಷ್ಟು ಸಂಕಷ್ಟಕ್ಕೆ ಸಿಲುಕು ವಂತೆ ಮಾಡಿದೆ ಎಂದು ದೂರಿದರು.

ಕಾಂಗ್ರೆಸ್ ಸರ್ಕಾರವಿದ್ದ ಸಂದರ್ಭದಲ್ಲಿ ಪೆಟ್ರೋಲ್ ಬೆಲೆಯನ್ನು ಕೇವಲ 6ರೂ. ಹೆಚ್ಚಳ ಮಾಡಿದ್ದಕ್ಕೆ ಬಿಜೆಪಿಯ ಸ್ಮøತಿ ಇರಾನಿ, ಶೋಭಾ ಕರಂದ್ಲಾಜೆ, ಬೀದಿಯಲ್ಲಿ ಬೊಬ್ಬೆ ಹೊಡೆದುಕೊಳ್ಳುತ್ತಿದ್ದರು. ಗೆದ್ದ ಮೇಲೆ ಬದ್ಧತೆ ಇಲ್ಲವೆ? ಎಂದು ಪ್ರಶ್ನಿಸಿದ ಅವರು, ಬಿಜೆಪಿ ಸರ್ಕಾರದ ಬೆಲೆ ಏರಿಕೆ ಪ್ರಶ್ನಿಸದೆ ನಗ್ತಾ, ನಗ್ತಾ ಮಾಧ್ಯಮಗಳಲ್ಲಿ ಕೌಂಟರ್ ಕೊಡು ತ್ತಾರೆ. ಇವರಿಗೆ ನಾಚಿಕೆ ಆಗಬೇಕು ಎಂದರು.

ಹೊರ ದೇಶಗಳಲ್ಲಿಟ್ಟಿರುವ ಕಪ್ಪುಹಣ ತಂದು ಬಡವರ ಜನ್‍ಧನ್ ಖಾತೆಗೆ 15 ಲಕ್ಷ ರೂ. ಹಾಕುವುದಾಗಿ ಹೇಳಿದ ನರೇಂದ್ರ ಮೋದಿ ನಯಾಪೈಸೆ ನೀಡಿಲ್ಲ. ದೇಶದಲ್ಲಿ 2 ಕೋಟಿ ಉದ್ಯೋಗ ನೀಡಿ ನಿರು ದ್ಯೋಗ ಸಮಸ್ಯೆ ನಿವಾರಿಸುವುದಾಗಿ ತಮ್ಮ ಪ್ರಣಾಳಿಕೆಯಲ್ಲಿ ಘೋಷಿಸಿದರು. ಆದರೆ ಇರುವ ಉದ್ಯೋಗವನ್ನೇ ಕಿತ್ತುಕೊಂಡು ಸರ್ಕಾರಿ ಸಂಸ್ಥೆಗಳ ಖಾಸಗೀಕರಣ ಮಾಡಲು ಕೇಂದ್ರ ಸರ್ಕಾರ ಹೊರಟಿದೆ ಎಂದು ದೂರಿದರು.
ಪ್ರತಿಭಟನೆಯಲ್ಲಿ ಡಿಸಿಸಿ ಕಾರ್ಯದರ್ಶಿ ಪದ್ಮಾಪುರುಷೋತ್ತಮ್, ಜಿಲ್ಲಾ ಮಹಿಳಾ ಕಾಂಗ್ರೆಸ್ ಕಾರ್ಯದರ್ಶಿ ನಾಗರತ್ನ, ಶಿವಣ್ಣ, ಗ್ರಾಮಾಂತರ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಕುಂತಲಾ, ನಗರಸಭಾ ಸದಸ್ಯರಾದ ಕಲಾ ವತಿ ರವಿಕುಮಾರ್, ಭಾಗ್ಯಮ್ಮ, ಮಾಜಿ ಅಧ್ಯಕ್ಷೆ  ರೇಣುಕಾ ಮಲ್ಲಿಕಾರ್ಜನ ಇತರರಿದ್ದರು.

Translate »