ಮಹಾರಾಣಿ ಕಲಾ ಕಾಲೇಜಿನಲ್ಲಿ ಡಿ.31ರಂದು ಜಿಲ್ಲಾಮಟ್ಟದ ಯುವಜನೋತ್ಸವ
ಮೈಸೂರು

ಮಹಾರಾಣಿ ಕಲಾ ಕಾಲೇಜಿನಲ್ಲಿ ಡಿ.31ರಂದು ಜಿಲ್ಲಾಮಟ್ಟದ ಯುವಜನೋತ್ಸವ

December 27, 2019

ಮೈಸೂರು, ಡಿ.26(ಎಂಟಿವೈ)- ಮೈಸೂರು ಮಹಾರಾಣಿ ಮಹಿಳಾ ಕಲಾ ಕಾಲೇಜು ಆವರಣ ದಲ್ಲಿ ಡಿ.31ರಂದು ಜಿಲ್ಲಾ ಮಟ್ಟದ ಯುವಜನೋತ್ಸವ ಸಾಂಸ್ಕøತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, 9 ಬಗೆಯ ಕಲಾಪ್ರಕಾರಗಳ ಸಾಂಸ್ಕøತಿಕ ಸ್ಪರ್ಧೆ ಜರುಗ ಲಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಕೆ.ಸುರೇಶ್ ತಿಳಿಸಿದ್ದಾರೆ.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀ ಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಯುವ ಕೇಂದ್ರ ಮತ್ತು ಮಹಾರಾಣಿ ಮಹಿಳಾ ಕಲಾ ಕಾಲೇಜಿನ ಸಂಯು ಕ್ತಾಶ್ರಯದಲ್ಲಿ ಡಿ.31ರÀಂದು ಬೆಳಿಗ್ಗೆ 10ಕ್ಕೆ ಮಹಾರಾಣಿ ಮಹಿಳಾ ಕಲಾ ಕಾಲೇಜು ಸಭಾಂಗಣದಲ್ಲಿ 2019-20ನೇ ಸಾಲಿನ ಮೈಸೂರು ಜಿಲ್ಲಾ ಮಟ್ಟದ ಯುವ ಜನೋತ್ಸವ ಕಾರ್ಯಕ್ರಮ ನಡೆಯಲಿದೆ.

ಈ ಸ್ಪರ್ಧೆಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಸಾಂಸ್ಕøತಿಕ ತಂಡಗಳನ್ನು 2020ರ ಜ.3 ಮತ್ತು 4ರಂದು ಶಿವಮೊಗ್ಗದಲ್ಲಿ ನಡೆಯುವ ರಾಜ್ಯಮಟ್ಟದ ಯುವ ಜನೋತ್ಸವ ಕಾರ್ಯಕ್ರಮಕ್ಕೆ ಆಯ್ಕೆ ಮಾಡಲಾಗುತ್ತದೆ. ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಆಯ್ಕೆಯಾದ ತಂಡ ವನ್ನು ಜ.12ರಿಂದ 16ರವರೆಗೆ ಲಕ್ನೋದಲ್ಲಿ ವೀರ ಸನ್ಯಾಸಿ ಸ್ವಾಮಿವಿವೇಕಾಂದ ಜನ್ಮ ದಿನದ ಹಿನ್ನೆಲೆಯಲ್ಲಿ ನಡೆ ಯುವ ರಾಷ್ಟ್ರಮಟ್ಟದ ಯುವಜನೋತ್ಸವ ಕಾರ್ಯಕ್ರಮಕ್ಕೆ ಕಳುಹಿಸಲಾಗುತ್ತದೆ ಎಂದು ವಿವರಿಸಿದ್ದಾರೆ.

ಯುವಜನೋತ್ಸವದ ಸ್ಪರ್ಧೆಗಳು
ಶಾಸ್ತ್ರೀಯ ನೃತ್ಯ, (ಭರತನಾಟ್ಯ, ಒಡಿಸ್ಸಿ, ಮಣಿಪುರಿ, ಕುಚುಪುಡಿ, ಕಥಕ್) 15 ನಿಮಿಷ, ಶಾಸ್ತ್ರೀಯ ವಾದ್ಯ (ಸಿತಾರ್, ಕೊಳಲು, ತಬಲ, ವೀಣೆ, ಮೃದಂಗ) 10 ನಿಮಿಷ, ಹಾರ್ಮೋನಿಯಂ ಸ್ಪರ್ಧೆ 10 ನಿಮಿಷ, ಗಿಟಾರ್ ವಾದನ ಸ್ಪರ್ಧೆ 10 ನಿಮಿಷ, ಶಾಸ್ತ್ರೀಯ ಗಾಯನ (ಕರ್ನಾಟಕ ಮತ್ತು ಹಿಂದೂಸ್ಥಾನಿ) 15 ನಿಮಿಷ, ಆಶುಭಾಷಣ (ಹಿಂದಿ ಮತ್ತು ಇಂಗ್ಲೀಷ್ ನಲ್ಲಿ ಮಾತ್ರ) 4 ನಿಮಿಷ, ಏಕಾಂಕ ನಾಟಕ (ಹಿಂದಿ ಅಥವಾ ಇಂಗ್ಲೀಷ್ ಭಾಷೆ ಮಾತ್ರ) 45 ನಿಮಿಷ, 12 ಜನರ ತಂಡ, ಜನಪದ ಗೀತೆ 7 ನಿಮಿಷ, 10 ಜನರ ತಂಡ, ಜನಪದ ನೃತ್ಯ (ಯುವಕ, ಯುವತಿ ಯರು ಸೇರಿ) 15 ನಿಮಿಷ, 20 ಜನರ ತಂಡ ಸ್ಪರ್ಧೆಯಲ್ಲಿ ಪಾಲ್ಗೊಳ್ಳಬಹುದಾಗಿದೆ ಎಂದರು.

ಸ್ಪರ್ಧೆಗಳಲ್ಲಿ 15ರಿಂದ 29 ವರ್ಷ ವಯೋಮಿತಿ ಯೊಳಗಿನ ಯುವಕ, ಯುವತಿಯರು, ವಿವಿಧ ಶಾಲಾ, ಕಾಲೇಜುಗಳ ವಿದ್ಯಾರ್ಥಿ-ವಿದ್ಯಾರ್ಥಿನಿಯರು, ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಗೆ ನೋಂದಾ ವಣೆಯಾದ ಯುವಕರ ಸಂಘ, ಯುವತಿ ಮಂಡಳಿ, ರಾಜೀವ್ ಗಾಂಧಿ ಯುವಶಕ್ತಿ ಸಂಘಗಳ ಪದಾಧಿಕಾರಿ ಗಳು ಪಾಲ್ಗೊಳ್ಳಬಹುದಾಗಿದೆ. ಆಧಾರ್ ಕಾರ್ಡ್, ಗುರು ತಿನ ಚೀಟಿ ಮತ್ತು ವಯಸ್ಸಿನ ದೃಢೀಕರಣ ಪತ್ರದೊಂ ದಿಗೆ ಡಿ.30ರ ಸಂಜೆ 5 ಗಂಟೆಯೊಳಗೆ ದೂ.ಸಂಖ್ಯೆ: 0821- 2564179ರ ಮೂಲಕ ಅಥವಾ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿರುವ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶ ಕರ ಕಚೇರಿಯಲ್ಲಿ ಹೆಸರು ನೋಂದಾಯಿಸಿಕೊಳ್ಳ ಬೇಕು. ಸ್ಪರ್ಧೆ ನಡೆಯುವ ಡಿ.31ರಂದು ಸ್ಥಳದಲ್ಲಿಯೇ ಹೆಸರು ನೋಂದಾಯಿಸಿಕೊಳ್ಳಲು ವ್ಯವಸ್ಥೆ ಮಾಡಲಾ ಗುತ್ತದೆ. ಜಿಲ್ಲಾಮಟ್ಟದ ಯುವಜನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ವಿಜೇತರಾದ ಸ್ಪರ್ಧಾಗಳು ಗಳಿಗೆ ಆಕರ್ಷಕ ಟ್ರೋಫಿ ಮತ್ತು ಪ್ರಮಾಣ ಪತ್ರ ನೀಡಲಾಗುವುದು ಎಂದು ವಿವರಿಸಿದ್ದಾರೆ.

Translate »