ಬೆಂಗಳೂರು, ಆ. 25- ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಗಲಭೆ ಪ್ರಕರಣದಲ್ಲಿ 21ಕ್ಕೂ ಹೆಚ್ಚು ಅಪ್ರಾಪ್ತ ಬಾಲಕರು ಬಂಧಿತರಲ್ಲಿ ಸೇರಿದ್ದಾರೆ. ಪ್ರಕರಣದಲ್ಲಿ ಸುಮಾರು 390ಕ್ಕೂ ಹೆಚ್ಚು ಆರೋಪಿಗಳನ್ನು ಬಂಧಿಸಲಾಗಿದ್ದು, ಅವರಲ್ಲಿ 21ಕ್ಕೂ ಹೆಚ್ಚು ಮಂದಿಗೆ ಇನ್ನೂ 18 ವರ್ಷ ಪೂರ್ಣಗೊಂಡಿಲ್ಲ. ಗಲಭೆಯ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ವೀಡಿಯೋ, ಸಿಸಿಟಿವಿ ವೀಕ್ಷಣೆಗೆ ಪ್ರತ್ಯೇಕ ತಂಡ ರಚನೆ ಮಾಡಲಾಗಿದ್ದು ಘಟನೆ ನಡೆದಾಗ ಬಹುತೇಕ ಅಪ್ರಾಪ್ತರು ಕಲ್ಲು ತೂರಾಟದಲ್ಲಿ ಭಾಗಿಯಾಗಿರುವ ವಿಚಾರ ಬಯಲಾಗಿದೆ.
ಈ ಮಧ್ಯೆ, ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆಗಳಲ್ಲಿ ಭಾಗಿಯಾಗಿರುವ ಆರೋಪಿಗಳ ವಿರುದ್ಧ ಕರ್ನಾಟಕ ಸಂಘಟಿತ ಅಪರಾಧಗಳ ಕಾಯ್ದೆ ಮತ್ತು ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯ ನಿಬಂಧನೆಗಳನ್ನು ಹೇರಲು ನಿರ್ದೇ ಶನಗಳನ್ನು ಕೋರಿ ಹೈಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದು, ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ಈ ಸಂಬಂಧ ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಿದೆ.