ಕೆಪಿಸಿಸಿ ಅಧ್ಯಕ್ಷರಾಗಿ ಇಂದು ಡಿ.ಕೆ.ಶಿವಕುಮಾರ್ ಪ್ರತಿಜ್ಞಾ
ಮೈಸೂರು

ಕೆಪಿಸಿಸಿ ಅಧ್ಯಕ್ಷರಾಗಿ ಇಂದು ಡಿ.ಕೆ.ಶಿವಕುಮಾರ್ ಪ್ರತಿಜ್ಞಾ

July 2, 2020

ಬೆಂಗಳೂರು, ಜು. 1(ಕೆಎಂಶಿ)- ಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್ ನಾಳೆ (ಜುಲೈ 2) ಪದ ಗ್ರಹಣ ಮಾಡಲಿದ್ದಾರೆ. ಕೋವಿಡ್-19 ಹಿನ್ನೆಲೆಯಲ್ಲಿ ಅತ್ಯಂತ ಸರಳ ಮತ್ತು ವಿನೂತನವಾದ ಕಾರ್ಯಕ್ರಮ ಹಾಗೂ ಕೆಲವೇ ಮುಖಂಡರು ಭಾಗವಹಿಸುವ ವೇದಿಕೆಯಲ್ಲಿ ಪ್ರದೇಶ ಕಾಂಗ್ರೆಸ್‍ನ ಉನ್ನತ ಹುದ್ದೆ ಯನ್ನು ಅಲಂಕರಿಸುತ್ತಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ನಡೆಯುವ ಸಮಾರಂಭ ದಲ್ಲಿ ರಾಷ್ಟ್ರ ಹಾಗೂ ರಾಜ್ಯದ ಮುಖಂಡರು ಭಾಗವಹಿಸು ತ್ತಿದ್ದು, ತಾವು ಅಧಿಕಾರ ಸ್ವೀಕರಿಸುವ ಕಾರ್ಯಕ್ರಮವನ್ನು ತಾಲೂಕು, ಜಿಲ್ಲಾ ಮತ್ತು ಬ್ಲಾಕ್ ಕಾಂಗ್ರೆಸ್ ಕಚೇರಿಗಳಲ್ಲಿ ಕಾರ್ಯಕರ್ತರು ವೀಕ್ಷಣೆ ಮಾಡುವಂತೆ ಅವಕಾಶ ಮಾಡಿ ಕೊಟ್ಟಿದ್ದಾರೆ. ಲಾಕ್‍ಡೌನ್‍ಗೂ ಮುನ್ನವೇ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿ ನೇಮಕಗೊಂಡಿದ್ದರೂ, ಕೇಂದ್ರದ ನಿಯ ಮದ ಹಿನ್ನೆಲೆಯಲ್ಲಿ ಅವರು ಅಧಿಕಾರ ಸ್ವೀಕರಿಸಲು ಸಾಧ್ಯವಾಗಿರಲಿಲ್ಲ.

ನಾಳಿನ ಕಾರ್ಯಕ್ರಮದ ಬಗ್ಗೆ ಇಂದಿಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಿವಕುಮಾರ್, ಅಧ್ಯಕ್ಷ ರಾಗಿ ಪದಗ್ರಹಣ ಕಾರ್ಯಕ್ರಮ ಪ್ರತಿಜ್ಞಾಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅನುಮತಿ ನೀಡಿದ್ದು, ಪೊಲೀ ಸರು ಈ ಕಾರ್ಯಕ್ರಮಕ್ಕೆ ಅಡ್ಡಿ ಮಾಡುವಂತಿಲ್ಲ ಎಂದು ತಿಳಿಸಿದ್ದಾರೆ. ಪ್ರತಿಜ್ಞಾ ಕಾರ್ಯಕ್ರಮಕ್ಕೆ ಕೆಲವು ಕಡೆಗಳಲ್ಲಿ ಪೊಲೀ ಸರು ತೊಂದರೆ ನೀಡುತ್ತಿದ್ದಾರೆ ಎಂಬ ಕರೆಗಳು ಬಂದಿವೆ.

ಮುಖ್ಯಮಂತ್ರಿಗಳೇ ಕಾರ್ಯಕ್ರಮ ಮಾಡಿಕೊಳ್ಳಿ ಎಂದು ಅನುಮತಿ ಕೊಟ್ಟಿದ್ದಾರೆ. ನಾನು ಈ ಸಂಬಂಧ ಗೃಹ ಮಂತ್ರಿ ಗಳು, ಪೊಲೀಸ್ ಮಹಾನಿರ್ದೇಶಕರ ಜತೆ ಮಾತನಾಡಿ ದ್ದೇನೆ. ಯಾರೂ ಧೃತಿಗೆಡುವ ಅಗತ್ಯವಿಲ್ಲ. ಮುಖ್ಯಮಂತ್ರಿಗಳು ಮೌಖಿಕವಾಗಿ ಅನುಮತಿ ನೀಡಿದ್ದು, ಈ ಕಾರ್ಯಕ್ರಮಕ್ಕೆ ಲಿಖಿತ ಅನುಮತಿ ಬೇಕಿಲ್ಲ. ನಿಮ್ಮ ನಿಮ್ಮ ಪ್ರದೇಶಗಳಲ್ಲೇ ಇದ್ದು ಸುದ್ದಿ ವಾಹಿನಿಗಳಲ್ಲಿ ಬರುವ ಕಾರ್ಯಕ್ರಮ ನೇರ ಪ್ರಸಾರ ವೀಕ್ಷಿಸಿ. ನಾನು ಆಮಂತ್ರಣ ನೀಡಿರುವವರನ್ನು ಬಿಟ್ಟು ಇನ್ಯಾರು ಇಲ್ಲಿಗೆ ಬರಬೇಡಿ. ಕೆಪಿಸಿಸಿ ಕಚೇರಿ ಕಟ್ಟಡ ನಿರ್ವಹಣೆಯನ್ನು ಪೊಲೀಸರು ಹಾಗೂ ಸೇವಾದಳದವ ರಿಗೆ ವಹಿಸಿದ್ದು, ಅನಗತ್ಯವಾಗಿ ಬಂದು ತೊಂದರೆ ಅನುಭವಿಸು ವುದು ಬೇಡ. ನಮ್ಮ ಜತೆ ನೀವು ಟಿವಿ ಹಾಗೂ ಝೂಮ್ ಮೂಲಕ ನಿಮ್ಮ ಪ್ರದೇಶಗಳಿಂದ ಕಾರ್ಯ ಕ್ರಮದಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸ ಲಾಗಿದೆ. ಇದಕ್ಕೆ ತಾವೆಲ್ಲಾ ಸಹಕಾರ ನೀಡಬೇಕು. ಕಾರ್ಯ ಕರ್ತರು ಹಗಲು-ರಾತ್ರಿ ದುಡಿಯುತ್ತಿದ್ದಾರೆ ಎಂದು ಪ್ರಶಂಸಿಸಿದರು.

ಎಲ್ಲ ಮಠ ಹಾಗೂ ಸಮುದಾಯದ ಗುರು ಹಿರಿಯರು ಆಶೀರ್ವಾದ ಮಾಡಬೇಕು ಎಂದು ಈ ಮೂಲಕ ಕೇಳಿಕೊಳ್ಳು ತ್ತಿದ್ದೇನೆ. ಜನರು ಕೂಡ ನಾವು ನೀಡಿರುವ ಮೊಬೈಲ್ ಸಂಖ್ಯೆಗೆ ಮಿಸ್ ಕಾಲ್ ನೀಡಿ ಆ ಮೂಲಕ ಆಶೀರ್ವಾದ ಮಾಡಬಹುದು. ನಾವು ಇಲ್ಲಿಗೆ ಬರುವವರಿಗೆ ಪಾಸ್ ನೀಡಿದ್ದು, ನನ್ನ ಮನೆ ಯಿಂದ ಇಬ್ಬರು ಮಾತ್ರ ಬರುತ್ತಿದ್ದಾರೆ. ಕೆಲವು ನಾಯಕರು, ಹೊರ ರಾಜ್ಯದಿಂದ ನಾಲ್ಕೈದು ಜನ ಹಾಗೂ ಮಾಧ್ಯಮದವರಿಗೆ ಮಾತ್ರ ಈ ಪಾಸ್ ನೀಡಲಾಗಿದೆ. ಅವರು ಮಾತ್ರ ಇಲ್ಲಿಗೆ ಬರಲು ಅವಕಾಶವಿದೆ. ಹೀಗಾಗಿ ಹೆಚ್ಚಿನ ಜನ ಸೇರುವುದಿಲ್ಲ ಎಂದರು.

Translate »