ಮೈಸೂರು, ಜೂ.22- ಮೈಸೂರು ಪದವಿ ಪೂರ್ವ ಶಿಕ್ಷಣ ಇಲಾಖೆಯ ಮೈಸೂರು ಜಿಲ್ಲಾ ನೂತನ ಉಪ ನಿರ್ದೇಶಕರಾಗಿ ಡಿ.ಕೆ.ಶ್ರೀನಿವಾಸ ಮೂರ್ತಿ ಮಂಗಳ ವಾರ ಅಧಿಕಾರ ಸ್ವೀಕರಿಸಿದರು.
ಈ ವೇಳೆ ಮಾತ ನಾಡಿದ ಅವರು, ಮೈಸೂರು ಕಲೆಗಳ ತವರೂರು, ಸಾಂಸ್ಕøತಿಕ ನಗರಿ. ಕಲೆ, ಸಾಹಿತ್ಯ, ಸಂಗೀತ, ಶಿಕ್ಷಣ ಕ್ಷೇತ್ರಕ್ಕೆ ಹೆಸರುವಾಸಿಯಾಗಿದೆ. ಇಂತಹ ಪಾರಂಪರಿಕ ಇತಿಹಾಸವಿರುವ ಮೈಸೂರು ಜಿಲ್ಲೆಯಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದ ಪದವಿ ಪೂರ್ವ ಶಿಕ್ಷಣ ಹಂತದಲ್ಲಿ ಸರ್ಕಾರಿ ಹಾಗೂ ಖಾಸಗಿ ಕಾಲೇಜುಗಳಲ್ಲಿ ಗಣನೀಯ ಫಲಿತಾಂಶವನ್ನು ಹೆಚ್ಚಿಸುವಲ್ಲಿ ಶ್ರಮ ವಹಿಸುತ್ತೇನೆ. ಕ್ರೀಡೆ ಮತ್ತು ಸಾಂಸ್ಕøತಿಕ ಕ್ಷೇತ್ರದಲ್ಲಿ ವಿದ್ಯಾರ್ಥಿಗಳ ಪ್ರತಿಭೆಯನ್ನು ಗುರುತಿಸಿ, ಅವರನ್ನು ಸಮಾಜದ ಮುಖ್ಯವಾಹಿನಿಗೆ ತರುವಲ್ಲಿ ಎಲ್ಲ ಉಪನ್ಯಾಸಕ ವರ್ಗದೊಂದಿಗೆ ಕಾರ್ಯ ನಿರ್ವಹಿಸುತ್ತೇನೆ ಎಂದು ಅಭಿಪ್ರಾಯಪಟ್ಟರು. ಶಿಕ್ಷಣದ ಗುಣಮಟ್ಟ ಹೆಚ್ಚಿಸುವಲ್ಲಿ ಕಾರ್ಯಾ ಗಾರಗಳನ್ನು ವಿವಿಧ ವಿಷಯಗಳಲ್ಲಿ ಪರಿಣತಿ ಹೊಂದಿದ ವಿಷಯ ತಜ್ಞರನ್ನು ಕರೆಸಿ, ತರಬೇತಿ ಹಾಗೂ ಮಾಹಿತಿಯನ್ನು ಒದಗಿಸುವ ಚಟುವಟಿಕೆಗಳನ್ನು ಕೊರೊನಾ ಕಳೆದ ನಂತರ ಹಮ್ಮಿಕೊಳ್ಳಲಾಗುವುದೆಂದು ತಿಳಿಸಿದರು. ಕೆ.ಆರ್.ಪೇಟೆ ಸರ್ಕಾರಿ ಪಪೂರ್ವ ಕಾಲೇಜಿನ ಪ್ರಾಂಶುಪಾಲ ಹಾಗೂ ಲಯನ್ ದಿನೇಶ್, ಮೈಸೂರು ಜಿಲ್ಲಾ ಪ.ಪೂರ್ವ ಉಪನ್ಯಾಸಕರ ಸಂಘದ ಅಧ್ಯಕ್ಷ ಯೋಗಾನಂದ, ಪ್ರಾಂಶುಪಾಲ ರಾಮೇಗೌಡ, ಉಪನ್ಯಾಸಕ ರಾಜೇಂದ್ರಪ್ರಸಾದ್ ಹೊನ್ನಲಗೆರೆ, ಎಂ.ಎಸ್.ಬಾಲಸುಬ್ರಹ್ಮಣ್ಯಂ ಉಪಸ್ಥಿತರಿದ್ದರು.