ನವದೆಹಲಿ, ಸೆ.15-ನೋಟು ರದ್ದತಿ ವೇಳೆ ಅಕ್ರಣ ಹಣ ವರ್ಗಾವಣೆ ಪ್ರಕ ರಣದಲ್ಲಿ ಇಡಿ ವಶ ದಲ್ಲಿರುವ ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಡಿ.ಕೆ.ಶಿವ ಕುಮಾರ್ ಅವರನ್ನು ನೋಡಲು ಅಭಿ ಮಾನಿಗಳು, ಕಾರ್ಯಕರ್ತರು ದೆಹಲಿಗೆ ಆಗಮಿಸಿದಂತೆ ಸಂಸದ ಹಾಗೂ ಡಿ.ಕೆ. ಶಿವಕುಮಾರ್ ಅವರ ಸಹೋದರ ಡಿ.ಕೆ.ಸುರೇಶ್ ಮನವಿ ಮಾಡಿದ್ದಾರೆ. ಜ್ವರ ಹಾಗೂ ರಕ್ತದೊತ್ತಡದಿಂದ ಬಳಲುತ್ತಿರುವ ಡಿ.ಕೆಶಿವಕುಮಾರ್ ಅವ ರನ್ನು ಆಸ್ಪತ್ರೆಗೆ ದಾಖಲು ಮಾಡಲಾ ಗಿದ್ದು, ಅವರನ್ನು ನೋಡಲು ಪದೇ ಪದೆ ದೆಹಲಿಗೆ ಆಗಮಿಸದಂತೆ ಡಿಕೆಶಿ ಅಭಿಮಾನಿಗಳಿಗೆ ಡಿ.ಕೆ.ಸುರೇಶ್ ವಿನಂತಿ ಮಾಡಿದ್ದಾರೆ. ಅಭಿಮಾನಿಗಳು ಪದೇ ಪದೆ ದೆಹಲಿಗೆ ಶಿವಕುಮಾರ್ ಅವರನ್ನು ನೋಡಲು ಬರುತ್ತಿರುವುದರಿಂದ ಬೇರೆ ರೀತಿಯ ಸಮಸ್ಯೆಗಳು ಎದುರಾಗುತ್ತಿವೆ. ಜಾರಿ ನಿರ್ದೇಶನಾಲಯದ ವಿಶೇಷ ನ್ಯಾಯಾಲಯದಲ್ಲಿ ಮಂಗಳ ವಾರ ನಡೆಯಲಿರುವ ವಿಚಾರಣೆ ಸಂದರ್ಭದಲ್ಲಿಯೂ ಅಭಿಮಾನಿಗಳು ಹಾಗೂ ಕಾರ್ಯಕರ್ತರು ಆಗಮಿಸುವುದು ಬೇಡ ಎಂದಿದ್ದಾರೆ. ವಿಚಾರಣೆ ಸಂದರ್ಭದಲ್ಲಿ ಹೆಚ್ಚು ಜನರು ನ್ಯಾಯಾಲಯದ ಆವರಣದಲ್ಲಿ ಜಮಾಯಿಸುವುದರಿಂದ ನ್ಯಾಯಾಂಗ ಪ್ರಕ್ರಿಯೆ ಹಾಗೂ ಆಡಳಿತಾತ್ಮಕ ವ್ಯವಸ್ಥೆಗೆ ಸಮಸ್ಯೆ ಎದುರಾಗುತ್ತದೆ. ಈ ಕಾರಣದಿಂದಾಗಿ ಪಕ್ಷದ ಕಾರ್ಯಕರ್ತರು ಹಾಗೂ ಅಭಿಮಾನಿಗಳು ತಮ್ಮ ಊರುಗಳಲ್ಲೇ ಇರಬೇಕು ಎಂದು ಡಿ.ಕೆ.ಸುರೇಶ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.