ಆದಿಚುಂಚನಗಿರಿ ಶಾಖಾ ಮಠಕ್ಕೆ ಡಿಕೆಶಿ ಭೇಟಿ
ಮೈಸೂರು

ಆದಿಚುಂಚನಗಿರಿ ಶಾಖಾ ಮಠಕ್ಕೆ ಡಿಕೆಶಿ ಭೇಟಿ

November 9, 2019

ಮೈಸೂರು, ನ.8(ಆರ್‍ಕೆಬಿ)- ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಶುಕ್ರವಾರ ಮೈಸೂರಿನ ಬೋಗಾದಿಯಲ್ಲಿರುವ ಆದಿಚುಂಚನಗಿರಿ ಶಾಖಾ ಮಠಕ್ಕೆ ಭೇಟಿ ನೀಡಿ ಸೋಮನಾಥ ಸ್ವಾಮೀಜಿ ಅವರ ಆಶೀರ್ವಾದ ಪಡೆದುಕೊಂಡರು. ಮಠಕ್ಕೆ ಆಗಮಿ ಸಿದ ಡಿ.ಕೆ.ಶಿವಕುಮಾರ್ ಅವರಿಗೆ ಮಾಜಿ ಸಚಿವ, ಕೆ.ಆರ್.ನಗರ ಶಾಸಕ ಸಾ.ರಾ. ಮಹೇಶ್ ಅವರು ಶಾಲು ಹೊದಿಸಿ ಹಾರ ಹಾಕಿ ಸ್ವಾಗತಿಸಿದರು. ನಂತರ ಡಿಕೆಶಿ ಮಠದಲ್ಲಿ ದಿವಂಗತ ಶ್ರೀಗಳಾದ ಬಾಲಗಂಗಾಧರನಾಥ ಶ್ರೀಗಳ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಚಾಮರಾಜ ಕ್ಷೇತ್ರದ ಮಾಜಿ ಶಾಸಕ ವಾಸು, ಮಾಜಿ ಸಂಸದ ಆರ್.ಧ್ರುವನಾರಾಯಣ್ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

 

Translate »