ಡಿಕೆಶಿ ನ್ಯಾಯಾಂಗ ಬಂಧನ ಅ.15ರವರೆಗೆ ವಿಸ್ತರಣೆ
ಮೈಸೂರು

ಡಿಕೆಶಿ ನ್ಯಾಯಾಂಗ ಬಂಧನ ಅ.15ರವರೆಗೆ ವಿಸ್ತರಣೆ

October 2, 2019

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಕರ್ನಾಟಕ ಕಾಂಗ್ರೆಸ್ ಮುಖಂಡ ಡಿ.ಕೆ.ಶಿವಕುಮಾರ್ ಅವರ ನ್ಯಾಯಾಂಗ ಬಂಧನ ಅವಧಿಯನ್ನು ದೆಹಲಿ ನ್ಯಾಯಾಲಯವು ಅಕ್ಟೋಬರ್ 15 ರವರೆಗೆ ವಿಸ್ತರಿಸಿದೆ. ಅಲ್ಲದೆ ಅಕ್ಟೋಬರ್ 4 ಮತ್ತು 5 ರಂದು ತಿಹಾರ್ ಜೈಲಿನಲ್ಲಿರುವ ಶಿವ ಕುಮಾರ್ ಅವರನ್ನು ವಿಚಾರಣೆಗೆ ಒಳ ಪಡಿಸಲು ನ್ಯಾಯಾಲಯ ಜಾರಿ ನಿರ್ದೇ ಶನಾಲಯಕ್ಕೆ ಅನುಮತಿ ನೀಡಿದೆ.

ಶಿವಕುಮಾರ್ ಅವರ ನ್ಯಾಯಾಂಗ ಬಂಧನ ಅವಧಿ ಮಂಗಳವಾರ ಕೊನೆಗೊಂಡ ನಂತರ ಅವರನ್ನು ದೆಹಲಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಯಿತು. ಈ ವೇಳೆ ಶಿವಕುಮಾರ್ ಅವರ ನ್ಯಾಯಾಂಗ ಬಂಧನವನ್ನು ವಿಸ್ತರಿ ಸಲು ಮತ್ತು ತಿಹಾರ್ ಜೈಲಿನಲ್ಲಿ ಅವರನ್ನು ಪ್ರಶ್ನಿಸಲು ಇಡಿ ಅನುಮತಿ ಕೋರಿತು. ಈ ಮುನ್ನ ವಿಶೇಷ ನ್ಯಾಯಾಧೀಶ ಅಜಯ್ ಕುಮಾರ್ ಕುಹರ್ ಅವರ ಮುಂದೆ ಹಾಜ ರಾಗಿದ್ದ ಶಿವಕುಮಾರ್ ಅವರಿಗೆ ನ್ಯಾಯಾಲಯ ಜಾಮೀನು ನೀಡಲು ನಿರಾಕರಿಸಿತು. ಶಿವಕುಮಾರ್ ಪ್ರಭಾವಿ ವ್ಯಕ್ತಿ, ಅವರೊಮ್ಮೆ ಜಾಮೀನು ಪಡೆದು ಹೊರಬಂದರೆ ಸಾಕ್ಷಿಗಳ ಮೇಲೆ ಪ್ರಭಾವ ಬೀರಬಹುದು ಅಥವಾ ದಾಖಲೆಗಳನ್ನು ನಾಶಪಡಿಸಬಹುದೆಂದು ಹೇಳಿದೆ. ಶಿವಕುಮಾರ್, ನವದೆಹಲಿಯ ಕರ್ನಾಟಕ ಭವನದ ಉದ್ಯೋಗಿ ಹನುಮಂತಯ್ಯ ಮತ್ತು ಇತರರ ವಿರುದ್ಧ ಕಳೆದ ವರ್ಷ ಸೆಪ್ಟೆಂಬರ್‍ನಲ್ಲಿ ಇಡಿ ಹಣ ವರ್ಗಾವಣೆ ಪ್ರಕರಣ ದಾಖಲಿಸಿತ್ತು. ಈ ಮಧ್ಯೆ ದೆಹಲಿ ಹೈಕೋರ್ಟ್ ಡಿ.ಕೆ. ಶಿವಕುಮಾರ್ ಜಾಮೀನು ಅರ್ಜಿ ವಿಚಾರಣೆಯನ್ನು ಅ. 14ಕ್ಕೆ ಮುಂದೂಡಿದ್ದು, ಇವರ ಸಹೋದರ ಸಂಸದ ಡಿ.ಕೆ. ಸುರೇಶ್‍ಗೆ ಇಡಿ ನೋಟಿಸ್ ನೀಡಿದೆ.

Translate »