ಬೆಂಗಳೂರು, ಜ.18- ಕೊರೊನಾ ವಿರುದ್ಧದ ಹೋರಾಟದ ಭಾಗವಾಗಿ `ವೈದ್ಯರ ನಡೆ ಹಳ್ಳಿ ಕಡೆ’ ಕಾರ್ಯಕ್ರಮ ಪ್ರಾರಂಭಿಸುವ ನಿಟ್ಟಿನಲ್ಲಿ ವಿಶೇಷ ಎಸ್‍ಓಪಿ ರೂಪಿಸಲು ಸರ್ಕಾರ ನಿರ್ಧರಿಸಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆ ಯಲ್ಲಿ ನಡೆದ ಕೋವಿಡ್-19 ಲಸಿಕಾ ಕಾರ್ಯಕ್ರಮದ ಪ್ರಗತಿ ಪರಿಶೀಲನಾ ಸಭೆಯಲ್ಲಿ `ವೈದ್ಯರ ನಡೆ ಹಳ್ಳಿ ಕಡೆ’ ಕಾರ್ಯಕ್ರಮದಡಿ ವೈದ್ಯರು ಹಾಗೂ ಎಎನ್‍ಓಗಳು ಮನೆ ಮನೆಗೆ ಭೇಟಿ ನೀಡಿ, ತಪಾಸಣೆ ನಡೆಸುವ ನಿಟ್ಟಿನಲ್ಲಿ ವಿಶೇಷ ಕಾರ್ಯಾಚರಣಾ ವಿಧಾನ ರೂಪಿಸುವುದು ಸೇರಿದಂತೆ ಹಲವು ನಿರ್ಣಯಗಳನ್ನು ಕೈಗೊಳ್ಳಲಾಯಿತು.
ಮೊದಲ ಹಾಗೂ 2ನೇ ಡೋಸ್ ಲಸಿಕೆ ಪ್ರಮಾಣ ದಲ್ಲಿ ಹಿಂದಿರುವ ಜಿಲ್ಲೆಗಳು ತಿಂಗಳಾಂತ್ಯದೊಳಗೆ ರಾಜ್ಯ ಸರಾಸರಿಯನ್ನು ತಲುಪಬೇಕು. ಪ್ರತಿ ಗ್ರಾಮದ ಕಟ್ಟಕಡೆಯ ಮನೆಗೂ ಔಷಧಿ ಕಿಟ್ ತಲುಪಿಸಿ, ಹೋಮ್ ಐಸೋ ಲೇಶನ್‍ನಲ್ಲಿರುವ ಸೋಂಕಿತರಿಗೆ ಸರಿಯಾದ ಚಿಕಿತ್ಸೆ ಕಲ್ಪಿಸಲು ಜಿಲ್ಲಾಡಳಿತ ದಕ್ಷತೆಯಿಂದ ಕಾರ್ಯನಿರ್ವ ಹಿಸಬೇಕು. ಜಿಲ್ಲಾಧಿಕಾರಿಗಳು, ಜಿಲ್ಲಾ ಆರೋಗ್ಯಾಧಿಕಾರಿ ಗಳು ತಾಲೂಕುಗಳಿಗೆ ಭೇಟಿ ನೀಡಿ, ಔಷಧಿ ವಿತರಣೆ ಬಗ್ಗೆ ಪರಿಶೀಲಿಸುವುದರೊಂದಿಗೆ ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿ, ಸೂಕ್ತ ಮೇಲ್ವಿಚಾರಣೆ ಕೈಗೊಳ್ಳ ಬೇಕು. ಪ್ರಯೋಗಾಲಯದ ವರದಿ ಬಂದ ತಕ್ಷಣವೇ ಟೆಲಿ ಟ್ರಯಾಜಿಂಗ್ ಮಾಡಬೇಕು. ಶೇ.94ರಷ್ಟು ಸೋಂಕಿ ತರು ಹೋಮ್ ಐಸೋಲೇಶನ್‍ನಲ್ಲಿ ಇರುವುದರಿಂದ ಆ ಮನೆಯ ಇತರೆ ಸದಸ್ಯರಿಗೆ ಸೋಂಕು ಹರಡದಂತೆ ಕ್ರಮ ಕೈಗೊಳ್ಳಬೇಕು. ಸೋಂಕಿತರ ಮನೆಯವರಿಗೆಲ್ಲ ರಿಗೂ ಪರೀಕ್ಷೆ ನಡೆಸಿ, ಅಗತ್ಯವಿದ್ದರೆ ಚಿಕಿತ್ಸೆ ನೀಡಲು ಸಭೆಯಲ್ಲಿ ಸೂಚಿಸಲಾಯಿತು.
ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಬೆಂಗಳೂರಿನಲ್ಲಿ ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳ ಹೊರ ರೋಗಿ ವಿಭಾಗ(ಓಪಿಡಿ)ಗಳನ್ನು ಬಲಪಡಿಸುವುದರ ಜೊತೆಗೆ ರೋಗಿಗಳ ಸಂಖ್ಯೆಗೆ ಅನುಗುಣವಾಗಿ ಹೊಸದಾಗಿ ಓಪಿಡಿ ತೆರೆಯಬೇಕು. ಹೊರ ರಾಜ್ಯಗಳಿಂದ ಕಾರ್ಮಿಕರನ್ನು ಕೆಲಸಕ್ಕಾಗಿ ಕರೆತರಲಾಗಿ ರುವ ಕೈಗಾರಿಕೆಗಳಲ್ಲಿ, ಲಸಿಕೆ ಹಾಗೂ ಚಿಕಿತ್ಸೆ ಸಂಬಂಧ ವಿಶೇಷ ಎಸ್‍ಓಪಿ ರೂಪಿಸ ಬೇಕು. ಎಲ್ಲ ಜಿಲ್ಲೆಗಳಲ್ಲಿ ಪಾಸಿಟಿವಿಟಿ ದರ ಹೆಚ್ಚಿರುವುದರಿಂದ ಕೋ-ಮಾರ್ಬಿಡಿಟಿ ಇರುವವರನ್ನು ಗುರುತಿಸಿ, ಹೋಮ್ ಐಸೋಲೇಶನ್‍ನಲ್ಲಿ ಇರುವವರಿಗೆ ಪರೀಕ್ಷೆ ಮಾಡಿ, ಸೂಕ್ತ ಚಿಕಿತ್ಸೆ ನೀಡಬೇಕು. ಕೋ-ಮಾರ್ಬಿಡಿಟಿ ಇರುವವರು ಹಾಗೂ 60 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ಪರೀಕ್ಷೆ ಪ್ರಮಾಣ ಹೆಚ್ಚಿಸಿ, ಅವರಿಗೆ ಸಮರ್ಪಕವಾಗಿ ಔಷಧಿ ಒದಗಿಸಬೇಕು. ಎಲ್ಲಾ ಜಿಲ್ಲೆಗಳಲ್ಲಿ ಮಕ್ಕಳ ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸೆಗೆ ಹೆಚ್ಚು ಆದ್ಯತೆ ನೀಡಬೇಕು. ಮುಂಚೂಣಿ ಕಾರ್ಯಕರ್ತರು ಹಾಗೂ ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ನೀಡಲು ಅಭಿಯಾನ ಕೈಗೊಳ್ಳಬೇಕು. ಲಸಿಕೆ ಪಡೆದು 90 ದಿನ ಪೂರೈಸಿರುವವರ ಪಟ್ಟಿ ತಯಾರಿಸಿ, ಅವರಿಗೆ ಲಸಿಕೆ ನೀಡುವ ಕಾರ್ಯಕ್ರಮದ ಮೇಲ್ವಿಚಾರಣೆಯನ್ನು ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ವಹಿಸುವಂತೆ ಜಿಲ್ಲಾಧಿಕಾರಿಗಳಿಗೆ ಸಭೆಯಲ್ಲಿ ನಿರ್ದೇಶನ ನೀಡಲಾಯಿತು. ಸಭೆಯಲ್ಲಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ರಾಜ್ಯದಲ್ಲಿ ಕೋವಿಡ್ ಪರೀಕ್ಷೆ ಹೆಚ್ಚಾಗಿರುವುದರಿಂದ ಪಾಸಿಟಿವ್ ಪ್ರಕರಣಗಳ ಸಂಖ್ಯೆಯೂ ಹೆಚ್ಚಾಗಿದೆ. ಆದರೂ ಸಮರ್ಪಕ ರೀತಿಯಲ್ಲಿ ಕೋವಿಡ್ ಪರಿಸ್ಥಿತಿ ನಿಭಾಯಿಸುವಲ್ಲಿ ನಾವು ಯಶಸ್ವಿಯಾಗಿದ್ದೇವೆ. ಮುನ್ನೆಚ್ಚರಿಕಾ ಕ್ರಮಗಳು ಉತ್ತಮವಾಗಿದ್ದರೆ ಕೊರೊನಾ 3Àನೇ ಅಲೆ ಏರುಗತಿ ತಲುಪಿದರೂ ಆತಂಕಕ್ಕೆ ಒಳಗಾಗದೆ ಯಶಸ್ವಿಯಾಗಿ ಪರಿಸ್ಥಿತಿ ನಿಭಾಯಿಸಬಹುದು ಎಂದು ಹೇಳಿದರು.