ವೈದ್ಯರ ನಡೆ ಹಳ್ಳಿ ಕಡೆ ಕಾರ್ಯಕ್ರಮ ಯಶಸ್ವಿಗೊಳಿಸಿ
ಮೈಸೂರು

ವೈದ್ಯರ ನಡೆ ಹಳ್ಳಿ ಕಡೆ ಕಾರ್ಯಕ್ರಮ ಯಶಸ್ವಿಗೊಳಿಸಿ

June 6, 2021

ಮೈಸೂರು, ಜೂ.5- ಮೈಸೂರು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಎಂ.ಎಸ್.ರಮೇಶ್ ಅವರು ದೂರ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಒಳಪಡುವ ದೊಡ್ಡಕಾಟೂರು ಹಾಗೂ ತಳೂರು ಗ್ರಾಮಕ್ಕೆ ಭೇಟಿ ನೀಡಿ ‘ವೈದ್ಯರ ನಡೆ ಹಳ್ಳಿ ಕಡೆ’ ಕಾರ್ಯಕ್ರಮವನ್ನು ಶನಿವಾರ ಪರಿಶೀಲಿಸಿದರು.

ಈ ವೇಳೆ ಮಾತನಾಡಿದ ಅವರು, ಕೋವಿಡ್-19 ತಪಾಸಣೆಗೆ ಅನುಕೂಲವಾಗಲು ಸರ್ಕಾರ ಪ್ರಾರಂಭಿಸಿರುವ ವೈದ್ಯರ ನಡೆ ಹಳ್ಳಿ ಕಡೆ ಕಾರ್ಯಕ್ರಮವನ್ನು ಯಶಸ್ವಿ ಗೊಳಿಸುವಂತೆ ಗ್ರಾಮ ಪಂಚಾಯತಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ತಿಳಿಸಿದರು.

ಗ್ರಾಮಗಳಲ್ಲಿ ಸೋಂಕಿನ ಲಕ್ಷಣ ಕಂಡುಬಂದವರನ್ನು ಗುರುತಿಸಿ ಪರೀಕ್ಷೆಗೆ ಒಳಪಡಿಸಿ, ಸೋಂಕು ದೃಢಪಟ್ಟವರಿಗೆ ಸ್ಥಳದಲ್ಲೇ ಮೆಡಿಕಲ್ ಕಿಟ್ ನೀಡಿ ಚಿಕಿತ್ಸೆ ಪ್ರಾರಂಭಿಸಲಾಗು ತ್ತದೆ. ವೈದ್ಯರ ಸಲಹೆ ಮೇರೆಗೆ ಕೋವಿಡ್ ಕೇರ್ ಸೆಂಟರ್‍ಗೆ ಕಳುಹಿಸಲಾಗುವುದು ಎಂದರು.

ಪಂಚಾಯತಿ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಈ ಕಾರ್ಯಕ್ರಮಕ್ಕೆ ಅಗತ್ಯವಿರುವ ವ್ಯವಸ್ಥೆ ಮಾಡಿಕೊಳ್ಳಬೇಕು. ಕಾರ್ಯಕ್ರಮದ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಿ ವೈದ್ಯರ ತಂಡವು ಗ್ರಾಮಕ್ಕೆ ಭೇಟಿ ನೀಡಿದಾಗ ತಪಾಸಣೆಗೆ ಒಳಪಡಿಸ ಬೇಕು ಎಂದರು. ಈ ಸಂದರ್ಭದಲ್ಲಿ ಗ್ರಾಪಂಅಧ್ಯಕ್ಷೆ ಮಂಗಳಗೌರಿ, ಉಪಾಧ್ಯಕ್ಷ ಡಿ.ಮಹ ದೇವಸ್ವಾಮಿ, ಸದಸ್ಯರಾದ ಕುಬೇರು, ರವಿಕುಮಾರ್, ಪಿಡಿಓ ಹೇಮಂತಕುಮಾರ್, ಸಂತೋಷ್‍ಕುಮಾರ್ ಸೇರಿದಂತೆ ಗ್ರಾಮ ಪಂಚಾಯತಿ ಸಿಬ್ಬಂದಿ ಹಾಜರಿದ್ದರು.

Translate »