ಮೈಸೂರು, ಜೂ.24- 2019-2020ನೇ ಸಾಲಿನ ಎಸ್‍ಎಸ್ ಎಲ್‍ಸಿ ಪರೀಕ್ಷೆಯು ಜೂ.25ರಿಂದ ಜು.3ವರೆಗೆ ಜಿಲ್ಲೆಯ 139 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಮುಂಜಾಗ್ರತಾ ಕ್ರಮವಾಗಿ ಕೋವಿಡ್-19 ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಪರೀಕ್ಷಾ ಕೇಂದ್ರದ ಬಳಿ ಯಾವುದೇ ವ್ಯಕ್ತಿ, ಸಂಘ ಸಂಸ್ಥೆ, ದಾನಿ ಹಾಗೂ ಇತರರು ಮಾಸ್ಕ್, ಸ್ಯಾನಿಟೈಸರ್, ವೈದ್ಯಕೀಯ ರಕ್ಷಣಾ ಪರಿಕರ ಅಥವಾ ಇನ್ನಿತರ ಯಾವುದೇ ವಸ್ತುಗಳನ್ನು ವಿದ್ಯಾರ್ಥಿಗಳಿಗೆ ಹಾಗೂ ಪರೀಕ್ಷೆ ಸಿಬ್ಬಂದಿಗಳಿಗೆ ವಿತರಣೆ ಮಾಡುವುದನ್ನು ನಿಷೇಧಿಸಲಾಗಿದೆ. ಒಂದು ವೇಳೆ ಮಾಸ್ಕ್, ಸ್ಯಾನಿಟೈಸರ್, ವೈದ್ಯಕೀಯ ರಕ್ಷಣಾ ಪರಿಕರ ಅಥವಾ ಇನ್ಯಾವುದೇ ವಸ್ತುಗಳನ್ನು ನೀಡಲು ಬಯಸಿದ್ದಲ್ಲಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಿಗೆ ಅಥವಾ ಸಂಬಂಧಿಸಿದ ಕ್ಷೇತ್ರಶಿಕ್ಷಣಾಧಿಕಾರಿಗಳನ್ನು ಭೇಟಿ ಮಾಡಿ ಅವರಿಗೆ ನೇರವಾಗಿ ತಲುಪಿಸಲು ಅವಕಾಶ ನೀಡಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೈಸೂರು