ಅನಾಮಧೇಯ ಕಂಪನಿಯ ರಸಗೊಬ್ಬರ, ಬಿತ್ತನೆ ಬೀಜ ಖರೀದಿಸಬೇಡಿ
ಮೈಸೂರು

ಅನಾಮಧೇಯ ಕಂಪನಿಯ ರಸಗೊಬ್ಬರ, ಬಿತ್ತನೆ ಬೀಜ ಖರೀದಿಸಬೇಡಿ

August 28, 2020

ಬೆಂಗಳೂರು, ಆ.27(ಕೆಎಂಶಿ)- ಅನಾಮಧೇಯ ಕಂಪ ನಿಯ ಹೆಸರಿನಲ್ಲಿ ರಸಗೊಬ್ಬರ ಇಲ್ಲವೆ ಬಿತ್ತನೆ ಬೀಜ ಮನೆ ಬಾಗಿಲಿಗೆ ಬಂದರೆ ಅಥವಾ ಯಾರಾದರೂ ನೀಡಿ ದರೆ, ರೈತರು ಅದನ್ನು ಖರೀದಿಸಬಾರದೆಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಸ್ಪಷ್ಟಪಡಿಸಿದ್ದಾರೆ.

ಕಳಪೆ ಕಂಪನಿಗಳು ರೈತರ ಮನೆ ಬಾಗಿಲಿಗೆ ಕಡಿಮೆ ಬೆಲೆಯಲ್ಲಿ ಬಿತ್ತನೆ ಬೀಜ, ರಸಗೊಬ್ಬರ ಸರಬರಾಜು ಮಾಡು ವುದು ಗಮನಕ್ಕೆ ಬಂದಿದೆ. ಈಗಾಗಲೇ ಇಲಾಖೆ ಅಗತ್ಯ ಕ್ರಮ ಕೈಗೊಂಡಿದ್ದು, ರೈತರಿಗೆ ಅನ್ಯಾಯ ಇಲ್ಲವೆ ಮೋಸವಾಗುವುದಕ್ಕೆ ಬಿಡುವುದಿಲ್ಲ. ಈ ಬಗ್ಗೆ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ರಾಜ್ಯಕ್ಕೆ ಅಗತ್ಯವಾದ ರಾಸಾಯನಿಕ ಗೊಬ್ಬರವನ್ನು ಕೇಂದ್ರ ಸರ್ಕಾರ ನೀಡುತ್ತಿದೆ. ಸರ್ಕಾರದ ಕೋರಿಕೆ ಮೇರೆಗೆ ಕೇಂದ್ರ ರಾಸಾಯನಿಕ, ರಸಗೊಬ್ಬರ ಸಚಿವ ಸದಾನಂದಗೌಡರು ರಾಜ್ಯಕ್ಕೆ ಅಗತ್ಯವಾದ ಗೊಬ್ಬರ ಪೂರೈಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಕೇಂದ್ರ ಸರ್ಕಾರ ರಾಜ್ಯದ ಅವಶ್ಯಕತೆಗಿಂತಲೂ ಹೆಚ್ಚಿನ ರಸಗೊಬ್ಬರಗಳನ್ನು ಪೂರೈಸಿದ್ದು, ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ರಸಗೊಬ್ಬರ ವನ್ನು ನೀಡಲು ಸಮ್ಮತಿಸಿದ್ದಾರೆ. ಇದರಿಂದ ರಾಜ್ಯಕ್ಕೆ ಯಾವುದೇ ಕೊರತೆಯುಂಟಾಗುವುದಿಲ್ಲ. ಈ ಬಾರಿ ಉತ್ತಮ ಮಳೆಯಾಗಿ ರುವುದಲ್ಲದೇ ಕೋವಿಡ್‍ನಿಂದಾಗಿ ಗ್ರಾಮೀಣ ಭಾಗದಲ್ಲಿ ಕೃಷಿಯೆಡೆಗೆ ರೈತಾಪಿ ವರ್ಗದ ಜೊತೆಗೆ ಯುವಜನತೆ ಹೆಚ್ಚು ಒತ್ತು ನೀಡಿರುವು ದರಿಂದ ಈ ಬಾರಿ ಬಿತ್ತನೆಯೂ ಹೆಚ್ಚಾಗಿದೆ. ಕೃಷಿಗೆ ರಸಗೊಬ್ಬರ ಹೆಚ್ಚಾಗಿ ಬಳಕೆಯಾಗುತ್ತಿದೆ. ಈ ನಿಟ್ಟಿನಲ್ಲಿ ರಾಜ್ಯದಲ್ಲಿ ರೈತರಿಗೆ ಯಾವುದೇ ಕಾರಣಕ್ಕೂ ರಸಗೊಬ್ಬರದ ಕೊರತೆಯಾಗಲೀ, ಯೂರಿಯಾದ ಕೊರತೆಯಾಗಲೀ ಆಗದಂತೆ ಕೈಗೊಂಡಿರುವ ಕ್ರಮದ ಬಗ್ಗೆ ಕೇಂದ್ರ ಸಚಿವರೊಂದಿಗೆ ಚರ್ಚಿಸಿರುವುದಾಗಿ ತಿಳಿಸಿದ್ದಾರೆ. ಇದೇ ಮೊದಲ ಬಾರಿಗೆ ರಾಜ್ಯದಲ್ಲಿ ನಕಲಿ ಬೀಜ, ರಾಸಾಯನಿಕ ಗೊಬ್ಬರ ಹಾಗೂ ಕೃತಕ ಅಭಾವ ಸೃಷ್ಟಿಸುವವರ ಪರವಾನಗಿ ರದ್ದುಗೊಳಿಸುವುದಾಗಿ ಹೇಳಿದ್ದಾರೆ.

Translate »