ಪೌರತ್ವ ತಿದ್ದುಪಡಿ ಕಾಯ್ದೆಯಿಂದ ಮುಸ್ಲಿಮರಿಗಿಲ್ಲ ತೊಂದರೆ ತಪ್ಪು ಸಂದೇಶಗಳಿಗೆ ಕಿವಿಗೊಡಬೇಡಿ: ಮಾಜಿ ಸಚಿವ ವಿಜಯಶಂಕರ್
ಮಂಡ್ಯ

ಪೌರತ್ವ ತಿದ್ದುಪಡಿ ಕಾಯ್ದೆಯಿಂದ ಮುಸ್ಲಿಮರಿಗಿಲ್ಲ ತೊಂದರೆ ತಪ್ಪು ಸಂದೇಶಗಳಿಗೆ ಕಿವಿಗೊಡಬೇಡಿ: ಮಾಜಿ ಸಚಿವ ವಿಜಯಶಂಕರ್

December 25, 2019

ಮಂಡ್ಯ, ಡಿ.24(ನಾಗಯ್ಯ)- ಪ್ರಸ್ತುತ ಜಾರಿಗೊಳಿಸುತ್ತಿರುವ ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ತಪ್ಪು ತಿಳುವಳಿಕೆಯಿಂದಾಗಿ ವದಂತಿ ಹಬ್ಬಿಸಲಾಗುತ್ತಿದೆ. ಇದಕ್ಕೆ ಭಾರತೀ ಯರು ಆತಂಕ ಪಡುವ ಅವಶ್ಯಕತೆ ಇಲ್ಲ. ಅಲ್ಲದೇ ಮುಸ್ಲಿಂ ಸಮುದಾಯಕ್ಕೆ ಈ ಕಾಯಿದೆ ತಿದ್ದುಪಡಿಯಿಂದ ಯಾವುದೇ ಸಮಸ್ಯೆ ಇಲ್ಲ ಎಂದು ಮಾಜಿ ಸಚಿವ ವಿಜಯಶಂಕರ್ ತಿಳಿಸಿದರು.

ನಗರದ ಕರ್ನಾಟಕ ಸಂಘದಲ್ಲಿ ಮಂಗಳ ವಾರ ಜನಜಾಗೃತಿ ವೇದಿಕೆ ಆಯೋಜಿ ಸಿದ್ದ ಪೌರತ್ವ ತಿದ್ದುಪಡಿ ಕಾಯ್ದೆ-2019 ಕುರಿತ ಸಂವಾದ ಕಾರ್ಯಕ್ರಮ ಉದ್ಘಾ ಟಿಸಿ ಅವರು ಮಾತನಾಡಿದರು.

ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ತಪ್ಪು ಸಂದೇಶಗಳನ್ನು ಹರಡುವ ಮೂಲಕ ಮುಸ್ಲಿಂ ಸಮುದಾಯವನ್ನು ಕೇಂದ್ರದ ವಿರುದ್ಧ ಎತ್ತಿ ಕಟ್ಟುವ ಹುನ್ನಾರ ನಡೆಯುತ್ತಿದೆ. ಇದರ ಬಗ್ಗೆ ಜನಜಾಗೃತಿ ಮೂಡಿಸುವುದು ಅತ್ಯ ವಶ್ಯಕ ಎಂದು ಅಭಿಪ್ರಾಯಪಟ್ಟರು.

ಸ್ವಾತಂತ್ರ್ಯ ಪೂರ್ವದಲ್ಲಿಯೇ ಅಖಂಡ ಭಾರತವನ್ನು ಧರ್ಮದ ಆಧಾರದ ಮೇಲೆ ವಿಭಜಿಸಲಾಯಿತು. ಪೂರ್ವ ಮತ್ತು ಪಶ್ಚಿಮ ಪಾಕಿಸ್ತಾನದಲ್ಲಿ ಉಳಿದಿರುವ ಧಾರ್ಮಿಕ ಅಲ್ಪಸಂಖ್ಯಾತರು ಮೊದಲಿಂ ದಲೂ ಧರ್ಮದ ಆಧಾರದ ಮೇಲೆ ನಿರಂ ತರ ಕಿರುಕುಳ ಎದುರಿಸುತ್ತಲೇ ಇದ್ದರು. ಆ ರಾಷ್ಟ್ರ ಧಾರ್ಮಿಕ ಅಲ್ಪಸಂಖ್ಯಾತರಿಗೆ ಸುರಕ್ಷತೆ ನೀಡಲು ವಿಫಲವಾದಾಗಲೆಲ್ಲಾ ಭಾರತ ಅವರಿಗೆ ರಕ್ಷಣೆ ನೀಡಿ ಸ್ವಾತಂತ್ರ್ಯ ಕಾಪಾಡುತ್ತಾ ಬಂದಿದೆ ಎಂದರು.

ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಆಫ್ಘಾ ನಿಸ್ತಾನಗಳಲ್ಲಿ ಕಿರುಕುಳಕ್ಕೊಳಗಾದ ಅಲ್ಪ ಸಂಖ್ಯಾತರಿಗೆ ಮಾನವ ಹಕ್ಕುಗಳನ್ನು ರಕ್ಷಿಸಲು ಮತ್ತು ದಶಕಗಳಿಂದ ಅಕ್ರಮ ವಲಸಿಗ ರಾಗಿ ಭಾರತದಲ್ಲಿ ವಾಸಿಸುತ್ತಿರುವ ಸಂತ್ರಸ್ತ ರಿಗೆ ಪೌರತ್ವ ಹಕ್ಕುಗಳನ್ನು ನೀಡಲು ಈ ಮಸೂದೆ ಅಗತ್ಯವಾಗಿದೆ ಎಂದು ವಿವರಿಸಿದರು.

ಪೌರತ್ವ ತಿದ್ದುಪಡಿ ಕಾಯ್ದೆಯಿಂದ ಭಾರತದ ಜಾತ್ಯಾತೀತತೆಗೆ ಯಾವುದೇ ಧಕ್ಕೆಯಾಗು ವುದಿಲ್ಲ. ಪ್ರತಿಯೊಬ್ಬರ ಧರ್ಮ ಲೆಕ್ಕಿಸದೆ ಅವರ ಹಕ್ಕುಗಳನ್ನು ರಕ್ಷಿಸಲು ಮತ್ತು ಉತ್ತೇ ಜಿಸಲು ಈ ಮಸೂದೆ ಸಹಕಾರಿಯಾಗಿದೆ ಎಂದು ತಿಳಿಸಿದರು.

ಬಿಜೆಪಿ ಸ್ಲಂ ಮೋರ್ಚಾದ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ. ಅಶೋಕ್‍ಕುಮಾರ್ ಮಾತನಾಡಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ನೂತನವಾಗಿ ಜಾರಿಗೆ ತಂದ ಪೌರತ್ವ ತಿದ್ದುಪಡಿ ಮಸೂದೆಯಿಂದ ಭಾರತದ ಮುಸ್ಲಿಂ ಸಮುದಾಯಕ್ಕೆ ಯಾವುದೇ ತೊಂದರೆಯಿಲ್ಲ. ಅವರ ಹಕ್ಕು-ಸ್ವಾತಂತ್ರ್ಯಕ್ಕೆ ಧಕ್ಕೆಯಾಗುವುದಿಲ್ಲ. ಭಾರತ ದೇಶದಲ್ಲಿರುವ ಅಕ್ರಮ ವಲಸಿಗ ಮುಸ್ಲಿಮರಿಗೂ ತೊಂದರೆಯಾಗದು. ಅವರು ಪೌರತ್ವ ಪಡೆದು ಭಾರತೀಯರಾಗೋದು ಇದರ ಉದ್ದೇಶವಾಗಿದೆ. ಮುಂದಿನ ದಿನಗಳಲ್ಲಿ ವಲಸೆ ಬರುವವರಿಗೆ ಅಡ್ಡಿಯಾಗಬಹುದು ಅಷ್ಟೇ ಎಂದರು.

ಪೌರತ್ವ ತಿದ್ದುಪಡಿ ಮಸೂದೆ ತನ್ನ ನಾಗರಿಕ ರಾದ ಭಾರತೀಯ ಮುಸ್ಲಿಮರ ವಿರುದ್ಧ ತಾರತಮ್ಯ ಮಾಡುವುದಿಲ್ಲ ಎಂಬುದನ್ನು ಮುಖ್ಯವಾಗಿ ಗಮನಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ಸುಪ್ರೀಂಕೋರ್ಟ್ ನ್ಯಾಯವಾದಿ ಚಂದ್ರಶೇಖರ್, ವಕೀಲ ಎಂ.ಜೆ.ಜೈನ್, ಬಿಜೆಪಿ ನಗರಾಧ್ಯಕ್ಷ ಎಚ್.ಆರ್. ಅರವಿಂದ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ, ಡಾ. ಸಿದ್ದರಾಮಯ್ಯ, ವಿವೇಕ್ ಮತ್ತಿತರರಿದ್ದರು.

Translate »