ದೋಸ್ತಿ ಜಂಟಿ ಪ್ರಚಾರಕ್ಕೆ ಇಂದು ಚಾಲನೆ
ಮೈಸೂರು

ದೋಸ್ತಿ ಜಂಟಿ ಪ್ರಚಾರಕ್ಕೆ ಇಂದು ಚಾಲನೆ

March 31, 2019

ಬೆಂಗಳೂರು: ದೋಸ್ತಿ ಪಕ್ಷ ಗಳು ಅಧಿಕೃತವಾಗಿ ಜಂಟಿ ಚುನಾವಣಾ ಪ್ರಚಾರಕ್ಕೆ ನಾಳೆಯಿಂದ ಚಾಲನೆ ನೀಡಲಿದ್ದು, ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡರು ಬೃಹತ್ ಸಮಾವೇಶದ ಮೂಲಕ ದೋಸ್ತಿ ಪ್ರಚಾರಕ್ಕೆ ನಾಂದಿ ಹಾಡಲಿದ್ದಾರೆ.

ನಾಳೆ ತುಮಕೂರು ರಸ್ತೆಯ ಅಂತಾರಾಷ್ಟ್ರೀಯ ವಸ್ತು ಪ್ರದರ್ಶನದ ಆವರಣದಲ್ಲಿ ನಡೆಯುವ ಜಂಟಿ ಸಭೆಯಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್‍ನ ಎಲ್ಲಾ ನಾಯಕರು ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡು ಶಕ್ತಿ ಪ್ರದರ್ಶನ ಮಾಡಲಿದ್ದಾರೆ. ರಾಜ್ಯದಲ್ಲಿ ಮೈತ್ರಿ ಸರ್ಕಾರ ಅಸ್ಥಿತ್ವಕ್ಕೆ ಬಂದ ಸಂದರ್ಭದಲ್ಲಿ ಮೇ 23ರಂದು ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ, ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ.ದೇವೇಗೌಡ ಸೇರಿದಂತೆ ದೇಶಾದ್ಯಂತ 27ಕ್ಕೂ ಹೆಚ್ಚು ಜಾತ್ಯತೀತ ಪಕ್ಷಗಳು ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡು ಐಕ್ಯತೆ ಮೆರೆದಿದ್ದವು. ಇದು ರಾಷ್ಟ್ರ ರಾಜಕಾರಣದಲ್ಲಿ ಸಂಚಲನ ವನ್ನೇ ಮೂಡಿಸಿತ್ತು. ಅನಂತರ ದೇವೇಗೌಡರು ಮತ್ತು ರಾಹುಲ್ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡಿರಲಿಲ್ಲ. ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ದೋಸ್ತಿ ಪಕ್ಷಗಳ ಮಹತ್ವದ ಸಭೆಯಲ್ಲಿ ಜಂಟಿ ಸಮಾವೇಶ ನಡೆಸುವ ತೀರ್ಮಾನ ತೆಗೆದುಕೊಳ್ಳಲಾಗಿತ್ತು. ನಾಳೆ ಸಂಜೆ 4 ಗಂಟೆಗೆ ತುಮಕೂರು ರಸ್ತೆಯಲ್ಲಿ ಬೃಹತ್ ಸಮಾವೇಶ ನಡೆಯಲಿದ್ದು, ಸುಮಾರು 5 ಲಕ್ಷ ಜನ ಭಾಗವಹಿಸುವ ನಿರೀಕ್ಷೆ ಇದೆ.

Translate »