ಜಿಲ್ಲೆಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ 128ನೇ ಜನ್ಮ ದಿನಾಚರಣೆ
ಕೊಡಗು

ಜಿಲ್ಲೆಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ 128ನೇ ಜನ್ಮ ದಿನಾಚರಣೆ

ಮಡಿಕೇರಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಸಂವಿ ಧಾನ ಶಿಲ್ಪಿ, ಭಾರತ ರತ್ನ, ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ 128 ನೇ ಜನ್ಮ ದಿನಾಚರಣೆಯನ್ನು ಭಾನುವಾರ ಆಚರಿಸಲಾಯಿತು.

ನಗರದ ಕೋಟೆ ಹಳೇ ವಿಧಾನ ಸಭಾಂ ಗಣದಲ್ಲಿ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಜಿ.ಪಂ.ಸಿಇಒ ಕೆ.ಲಕ್ಷ್ಮಿಪ್ರಿಯಾ, ಹೆಚ್ಚುವರಿ ಜಿಲ್ಲಾಧಿಕಾರಿ ಪಿ.ಶಿವರಾಜು, ಉಪ ವಿಭಾಗಾಧಿಕಾರಿ ಟಿ.ಜವರೇಗೌಡ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಭಾರತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ. ಮೋಹನ್, ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಮಹಂತೇಶಪ್ಪ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಕೆಂಚಪ್ಪ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ರಾದ ಮಚ್ಚಾಡೊ ಇತರರು ಬಾಬಾ ಸಾಹೇಬ್ ಡಾ.ಬಿ. ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ, ಗೌರವ ನಮನ ಸಲ್ಲಿಸಿದರು.

ಸ್ತ್ರೀಯರಿಗೆ ಮತ ದಾನ ಹಕ್ಕು ಮತ್ತು ಸಮಾನ ಅವಕಾಶ, ಕಾರ್ಮಿಕರಿಗಾಗಿ ಹಲವು ಕಲ್ಯಾಣ ಕಾರ್ಯ ಕ್ರಮಗಳು, ಭಾರತೀಯ ರಿಸರ್ವ್ ಬ್ಯಾಂಕ್ ಸ್ಥಾಪನೆ, 6 ರಿಂದ 14 ವರ್ಷದೊಳಗಿನ ಮಕ್ಕಳಿಗೆ ಉಚಿತ ಶಿಕ್ಷಣ, ಚುನಾವಣಾ ಆಯೋಗ ಸ್ಥಾಪನೆ, ಹೀಗೆ ಹಲವು ಕಾಯ್ದೆ ಹಾಗೂ ಕಾರ್ಯಕ್ರಮಗಳನ್ನು ಸಂವಿ ಧಾನದಲ್ಲಿ ಅಳವಡಿಸುವ ಮೂಲಕ ಸಮಾ ನತೆಯ ಸಮಾಜ ಹಾಗೂ ಆಧುನಿಕ ಬಲಿಷ್ಠ ರಾಷ್ಟ್ರ ನಿರ್ಮಾಣಕ್ಕೆ ಶ್ರಮಿಸಿದ್ದಾರೆ ಎಂದು ಗಣ್ಯರು ಸ್ಮರಿಸಿದರು.

ಹಿಂದೂ ಕೋಡ್ ಬಿಲ್ ಜಾರಿಗೊಳಿ ಸುವ ಮೂಲಕ ಮಹಿಳೆಯರಿಗೆ ಸಮಾನ ಹಕ್ಕು ಮತ್ತು ಅವಕಾಶ ನೀಡಿದ್ದಾರೆ. ಕೃಷಿ, ವಿದ್ಯುತ್ ಹಾಗೂ ನೀರಾವರಿಗೆ ಹೆಚ್ಚಿನ ಒತ್ತು, ಹೀಗೆ ಹಲವು ಕಾರ್ಯಕ್ರಮಗಳನ್ನು ಜಾರಿಗೊಳಿಸುವ ಮೂಲಕ ಸಮಾಜ ಸುಧಾರಣೆಗೆ ದುಡಿದಿದ್ದಾರೆ ಎಂದರು.

“ಡಾ.ಬಿ.ಆರ್.ಅಂಬೇಡ್ಕರ್ ಅವರ ವಿಚಾ ರಧಾರೆಗಳು, ಸಂದೇಶಗಳನ್ನು ಪ್ರತಿಯೊ ಬ್ಬರೂ ತಿಳಿದುಕೊಳ್ಳುವಂತಾಗಬೇಕು. ಸರ್ವರಿಗೂ ಸಮಪಾಲು ಮತ್ತು ಸರ್ವರಿಗೂ ಸಮಬಾಳು ಎಂಬುದನ್ನು ಪ್ರಬಲವಾಗಿ ಪ್ರತಿಪಾದಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್ ಅವರು, ಶಿಕ್ಷಣ ಪಡೆದಾಗ ಮಾತ್ರ ಸಮಾನ ಅವಕಾಶ ಮತ್ತು ಆರ್ಥಿಕ ಪ್ರಗತಿ ಸಾಧ್ಯ ಎಂಬುದನ್ನು ಪ್ರತಿಪಾದಿಸಿದ್ದರು ಎಂದು ಗಣ್ಯರು ಹೇಳಿದರು.

ಸಂವಿಧಾನದಲ್ಲಿ ಮೂಲಭೂತ ಹಕ್ಕುಗಳು, ಕರ್ತವ್ಯಗಳು ಮತ್ತು ರಾಜ್ಯ ನಿರ್ದೇಶಕ ತತ್ವಗಳು ಜತೆಗೆ ಸಾಮಾಜಿಕ ಭದ್ರತೆ ಮತ್ತಿತರ ಅಂಶಗಳನ್ನು ಸೇರ್ಪಡೆ ಮಾಡಿ ಪ್ರಜಾಪ್ರಭುತ್ವ ಯಶಸ್ಸಿಗೆ ಶ್ರಮಿಸಿದ ಕೀರ್ತಿ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಸಲ್ಲುತ್ತದೆ ಎಂದು ಹೇಳಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಅರುಂಧತಿ, ಜಿಲ್ಲಾ ಉದ್ಯೋಗ ವಿನಿ ಮಯ ಅಧಿಕಾರಿ ಸಿ.ಜಗನ್ನಾಥ್, ಸಮಾಜ ಕಲ್ಯಾಣ ಇಲಾಖೆಯ ತಾಲೂಕು ಅಧಿಕಾರಿ ಚಿಕ್ಕಬಸವಯ್ಯ, ನಾನಾ ಇಲಾಖೆ ಅಧಿಕಾ ರಿಗಳು ಮತ್ತು ಸಿಬ್ಬಂದಿಗಳು ಇದ್ದರು.

April 15, 2019

Leave a Reply

Your email address will not be published. Required fields are marked *