84ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ  ಡಾ. ಚಂದ್ರಶೇಖರ್ ಕಂಬಾರ ಆಯ್ಕೆ
ಮೈಸೂರು

84ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ  ಡಾ. ಚಂದ್ರಶೇಖರ್ ಕಂಬಾರ ಆಯ್ಕೆ

September 28, 2018

ಗದಗ:  ಧಾರವಾಡದಲ್ಲಿ ನಡೆಯಲಿರುವ 84ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಹಿರಿಯ ಸಾಹಿತಿ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ. ಚಂದ್ರಶೇಖರ್ ಕಂಬಾರ ಅವರನ್ನು ಆಯ್ಕೆ ಮಾಡಲಾಗಿದೆ. ಇಂದು ಗದಗದಲ್ಲಿ ನಡೆದ ರಾಜ್ಯ ಕನ್ನಡ ಸಾಹಿತ್ಯ ಪರಿಷತ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಚಂದ್ರಶೇಖರ್ ಕಂಬಾರ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮನು ಬಳಿಗಾರ್ ತಿಳಿಸಿದ್ದಾರೆ. ಕಾರ್ಯಕಾರಿ ಸಭೆಯ ನಂತರ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಮನು ಬಳಿಗಾರ್, 84ನೇ ಕನ್ನಡ ಸಾಹಿತ್ಯ ಸಮ್ಮೇಳನ ಡಿಸೆಂಬರ್ 7 ಮತ್ತು 8ರಂದು ಧಾರವಾಡದಲ್ಲಿ ನಡೆಯಲಿದೆ ಎಂದು ಹೇಳಿದರು. ಚಂದ್ರಶೇಖರ್ ಕಂಬಾರ ಅವರು ಕೇಂದ್ರ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರೂ ಆಗಿದ್ದಾರೆ.

Translate »