ಸಮಗ್ರ ಕರ್ನಾಟಕ ಉಳಿಸಲು ಡಾ. ಡಿ.ಎಂ.ನಂಜುಂಡಪ್ಪ ವರದಿ ಜಾರಿಗೆ ಆಗ್ರಹ
ಮೈಸೂರು

ಸಮಗ್ರ ಕರ್ನಾಟಕ ಉಳಿಸಲು ಡಾ. ಡಿ.ಎಂ.ನಂಜುಂಡಪ್ಪ ವರದಿ ಜಾರಿಗೆ ಆಗ್ರಹ

August 3, 2018

ಮೈಸೂರು:  ಸಮಗ್ರ ಕರ್ನಾಟಕದ ಅಭಿವೃದ್ಧಿಗಾಗಿ ಡಾ.ಡಿ.ಎಂ. ನಂಜುಂಡಪ್ಪ ವರದಿಯನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಂಟಿಯಾಗಿ ಜಾರಿಗೊಳಿಸಬೇಕು. ಅಖಂಡ ಕರ್ನಾಟಕ ಉಳಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಗುರುವಾರ ಮೈಸೂರು ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಿದರು.

ದೇಶದ ಒಕ್ಕೂಟ ವ್ಯವಸ್ಥೆಯಲ್ಲಿ ಕನ್ನಡ, ಕನ್ನಡಿಗ, ಕರ್ನಾಟಕದ ಸಾರ್ವ ಭೌಮತೆ ಯನ್ನು ಕಾಪಾಡಬೇಕು. ಭಾಷಾವಾರು ಪ್ರಾಂತ್ಯಗಳ ಆಧಾರದ ಮೇಲೆ ರಚನೆಯಾಗಿ ರುವ ರಾಜ್ಯಗಳ ಒಕ್ಕೂಟ ವ್ಯವಸ್ಥೆಯಡಿ ಭಾರತದಲ್ಲಿ ಕರ್ನಾಟಕ ಕೇಂದ್ರ ಸರ್ಕಾರಕ್ಕೆ ಹೆಚ್ಚಿನ ಆದಾಯ ನೀಡುವ ಬಹುದೊಡ್ಡ ರಾಜ್ಯವಾಗಿದೆ. ನಾಡಿನ ಎಲ್ಲಾ ಜನರ ತ್ಯಾಗ ಬಲಿದಾನಗಳಿಂದ ಅಖಂಡವಾಗಿರುವ ಕರ್ನಾಟಕದಲ್ಲಿ ಪ್ರಾದೇಶಿಕ ಅಸಮತೋಲನ ನಿವಾರಣೆ ಮಾಡಲು ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಸರ್ಕಾರದ ಅವಧಿಯಲ್ಲಿ ನೀಡಲಾದ ನಾಡಿನ ಹಿರಿಯ ಆರ್ಥಿಕ ತಜ್ಞ ಡಾ.ಡಿ.ಎಂ.ನಂಜುಂಡಪ್ಪ ವರದಿಯನ್ನು ಕರ್ನಾಟಕ ಸರ್ಕಾರ ಮತ್ತು ಕೇಂದ್ರ ಸರ್ಕಾರಗಳು ಜಂಟಿಯಾಗಿ ಸಮಗ್ರವಾಗಿ ಜಾರಿಗೊಳಿಸಬೇಕು. ಅಖಂಡ ಕರ್ನಾಟಕ ಉಳಿಯುವಂತೆ ನೋಡಿಕೊಳ್ಳುವ ಜವಾಬ್ದಾರಿ ಎಲ್ಲಾ ಕನ್ನಡಿಗರಿದ್ದಾಗಿದೆ. ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ನಾಡಿನಲ್ಲಿ ಪ್ರತ್ಯೇಕತೆಯ ಧ್ವನಿ ಮೊಳಗದಂತೆ ನೋಡಿಕೊಂಡು ಕನ್ನಡಿಗರ ಐಕ್ಯತೆ ಕಾಪಾಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ವೇದಿಕೆ ಜಿಲ್ಲಾಧ್ಯಕ್ಷ ಪ್ರವೀಣ್‍ಕುಮಾರ್, ಜಯಪ್ರಕಾಶ್, ಕುಮಾರ್, ದೊರೆ, ಕಾರ್ತಿಕ್, ಶ್ರೀನಿವಾಸ್, ರಫೀಕ್, ಗಣೇಶ್, ಬಾಬು, ಲೋಕೇಶ್, ಆನಂದ್, ಅಜರ್ ಇನ್ನಿತರರು ಪಾಲ್ಗೊಂಡಿದ್ದರು.

Translate »