ಮೈಸೂರು: ಮೈಸೂರಿನ ಕೆಆರ್ ಆಸ್ಪತ್ರೆ ವೈದ್ಯಕೀಯ ಅಧೀಕ್ಷಕರನ್ನಾಗಿ ಮೈಸೂರು ಮೆಡಿಕಲ್ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ವೈದ್ಯಶಾಸ್ತ್ರ ವಿಭಾಗದ ಹಿರಿಯ ಪ್ರಾಧ್ಯಾಪಕ ಡಾ.ಎಂ.ಶ್ರೀನಿವಾಸ್ ಅವರನ್ನು ನೇಮಿಸಲಾಗಿದೆ.
ವೈದ್ಯಕೀಯ ಶಿಕ್ಷಣ ಇಲಾಖೆ ಅಧೀನ ಕಾರ್ಯದರ್ಶಿ ವೈ.ಎಸ್.ದಳವಾಯಿ ಅವರು ಶುಕ್ರವಾರ ಡಾ.ಎಂ.ಶ್ರೀನಿವಾಸ್ ಅವರ ನೇಮಕಾತಿ ಅಧಿಸೂಚನೆ ಹೊರಡಿಸಿದ್ದಾರೆ. ಪ್ರಭಾರ ವೈದ್ಯಕೀಯ ಅಧೀಕ್ಷಕರಾದ ಡಾ.ಎಸ್.ಚಂದ್ರಶೇಖರ ಅವರಿಂದ ಶುಕ್ರವಾರ ಡಾ.ಶ್ರೀನಿವಾಸ್ ಅಧಿಕಾರ ವಹಿಸಿಕೊಂಡರು. ತೀವ್ರ ಸ್ಪರ್ಧೆ ಏರ್ಪಟ್ಟಿದ್ದ ಕಾರಣ ಸರ್ಕಾರದ ಮಟ್ಟದಲ್ಲಿ ವೈದ್ಯಕೀಯ ಅಧೀಕ್ಷಕರ ನೇಮಕ ಪ್ರಕ್ರಿಯೆ ನೆನೆಗುದಿಗೆ ಬಿದ್ದ ಕಾರಣ ಡಾ.ಚಂದ್ರಶೇಖರ್ ಕಳೆದ ಮೂರು ವರ್ಷಗಳಿಂದ ಕೆಆರ್ ಆಸ್ಪತ್ರೆ ಪ್ರಭಾರ ಮುಖ್ಯಸ್ಥರಾಗಿ ಕರ್ತವ್ಯ ನಿರ್ವಹಿಸಿದ್ದನ್ನು ಇಲ್ಲಿ ಸ್ಮರಿಸಬಹುದು.