ಡಾ. ಉಮೇಶ್ ಜಾಧವ್ ರಾಜೀನಾಮೆ ಅಂಗೀಕಾರ
ಮೈಸೂರು

ಡಾ. ಉಮೇಶ್ ಜಾಧವ್ ರಾಜೀನಾಮೆ ಅಂಗೀಕಾರ

April 2, 2019

ಬೆಂಗಳೂರು: ರಾಷ್ಟ್ರೀಯ ಕಾಂಗ್ರೆಸ್‍ನ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಸ್ಪರ್ಧಿ ಸಿರುವ ಬಿಜೆಪಿ ಹುರಿ ಯಾಳು ಉಮೇಶ್ ಜಾಧವ್ ವಿಧಾನಸಭಾ ಸದಸ್ಯತ್ವಕ್ಕೆ ನೀಡಿರುವ ರಾಜೀನಾಮೆಯನ್ನು ವಿಧಾನ ಸಭಾಧ್ಯಕ್ಷ ರಮೇಶ್ ಕುಮಾರ್ ಅಂಗೀ ಕರಿಸಿದ್ದಾರೆ. ಕಾಂಗ್ರೆಸ್ ಪಕ್ಷ ಹಾಗೂ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿಗೆ ಸೇರ್ಪಡೆಯಾಗಿದ್ದಲ್ಲದೆ, ಜಾಧವ್, ಖರ್ಗೆ ವಿರುದ್ಧವೇ ಕಣಕ್ಕಿಳಿದಿದ್ದರು.

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಮುನ್ನವೇ ಬಿಜೆಪಿಗೆ ಸೇರ್ಪಡೆಯಾದ ಅವರ ಕ್ರಮದ ಹಿನ್ನೆಲೆಯಲ್ಲಿ ಅವ ರನ್ನು ಶಾಸಕ ಸ್ಥಾನದಿಂದ ಅನರ್ಹ ಗೊಳಿಸಬೇಕು.ಆರು ವರ್ಷಗಳ ಕಾಲ ಯಾವ ಚುನಾವಣೆಯಲ್ಲೂ ಸ್ಪರ್ಧಿ ಸಲು ಅವಕಾಶ ನೀಡಬಾರದು ಎಂದು ಕೋರಿ ಕಾಂಗ್ರೆಸ್ ಪಕ್ಷ ವಿಧಾನಸಭಾ ಧ್ಯಕ್ಷರ ಮೊರೆ ಹೋಗಿತ್ತು. ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದ ರಾಮಯ್ಯ ಅವರೇ ಸಭಾಧ್ಯಕ್ಷರಿಗೆ ಪತ್ರ ಬರೆದು, ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿರುವ ಮತ್ತು ಸಾರ್ವಜನಿಕವಾಗಿ ಮತ್ತೊಂದು ಪಕ್ಷದ ಜೊತೆ ಗುರುತಿಸಿಕೊಂಡಿರುವ ಉಮೇಶ್ ಜಾಧವ್ ಅವರ ಸದಸ್ಯತ್ವವನ್ನು ಅನರ್ಹ ಗೊಳಿಸುವಂತೆ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಉಮೇಶ್ ಜಾಧವ್ ಅವರ ರಾಜೀನಾಮೆಯನ್ನು ಅಂಗೀಕರಿಸುವ ಮುನ್ನ ಸಭಾಧ್ಯಕ್ಷ ರಮೇಶ್ ಕುಮಾರ್ ಅವರು ವಿಚಾರಣೆಯನ್ನು ಕೈಗೆತ್ತಿಕೊಂಡಿದ್ದರು. ವಿಚಾರಣೆಯ ಸಂದರ್ಭದಲ್ಲಿ ಪತ್ರಕರ್ತರು,ಸಾರ್ವಜನಿಕರು ಹಾಜರಿರಲು ಅವಕಾಶ ಮಾಡಿಕೊಟ್ಟಿದ್ದ ಸಭಾಧ್ಯಕ್ಷ ರಮೇಶ್ ಕುಮಾರ್,ಯಾವ ಕಾರಣಕ್ಕಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೀರಿ ಎಂಬ ಪ್ರಶ್ನೆಯನ್ನು ಮುಂದಿಟ್ಟಿದ್ದರು. ಈ ಮಧ್ಯೆ ವಿಚಾರಣೆಯ ಸಂದರ್ಭದಲ್ಲಿ ಹಾಜರಿದ್ದವರು, ಯಾವ ಕಾರಣಕ್ಕೂ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡಬೇಡಿ. ನಿಮ್ಮನ್ನು ನಂಬಿ ಮತ ಹಾಕಿದ್ದೇವೆ.ಈಗ ನಮ್ಮ ನಂಬಿಕೆಯನ್ನು ಹುಸಿಗೊಳಿಸಿ ನೀವು ರಾಜೀನಾಮೆ ಕೊಡುವುದು ಸರಿಯಲ್ಲ ಎಂದು ವಾದಿಸಿದ್ದರು. ಹೀಗೆ ಪ್ರತಿರೋಧಗಳ ಮಧ್ಯೆ ವಿಚಾರಣೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದ ಸಭಾಧ್ಯಕ್ಷ ರಮೇಶ್ ಕುಮಾರ್ ಅವರು ತೀರ್ಪನ್ನು ಕಾಯ್ದಿರಿಸಿ ಆದೇಶ ಹೊರಡಿಸಿದ್ದರು. ಆದರೆ ಇದೀಗ ಉಮೇಶ್ ಜಾಧವ್ ಅವರು ಶಾಸಕ ಸ್ಥಾನಕ್ಕೆ ನೀಡಿದ ರಾಜೀನಾಮೆಯನ್ನು ಅಂಗೀಕರಿಸಿರುವುದಾಗಿ ರಮೇಶ್ ಕುಮಾರ್ ಹೇಳಿದ್ದು, ಆ ಮೂಲಕ ಮಲ್ಲಿಕಾರ್ಜುನ ಖರ್ಗೆ ಅವರೆದುರು ಸ್ಪರ್ಧಿಸಿರುವ ಉಮೇಶ್ ಜಾಧವ್ ನೆಮ್ಮದಿಯಾಗಿ ಉಸಿರಾಡುವಂತಾಗಿದೆ.

Translate »