ಏ.10ರಂದು ಡಾ.ವಿ.ರಂಗನಾಥ್  ಅವರ ಅಭಿನಂದನಾ ಗ್ರಂಥ ಬಿಡುಗಡೆ
ಮೈಸೂರು

ಏ.10ರಂದು ಡಾ.ವಿ.ರಂಗನಾಥ್ ಅವರ ಅಭಿನಂದನಾ ಗ್ರಂಥ ಬಿಡುಗಡೆ

April 8, 2021

ಮೈಸೂರು,ಏ.7-ಮೈಸೂರಿನ ಸಂಸ್ಕøತಿ ಪ್ರಕಾಶನ, ವಿಜಯ್ ಫೌಂಡೇಷನ್ ಹಾಗೂ ಅಖಿಲ ಭಾರತೀಯ ಸಾಹಿತ್ಯ ಪರಿಷತ್, ಮೈಸೂರು ಸಂಯುಕ್ತ ಆಶ್ರಯದಲ್ಲಿ ಡಾ.ವಿ. ರಂಗನಾಥ್ ಅವರ ಅಭಿನಂದನಾ ಗ್ರಂಥ ಹಾಗೂ ಪುಸ್ತಕಗಳ ಬಿಡುಗಡೆ ಸಮಾರಂಭವನ್ನು ಏ.10ರಂದು ಬೆಳಿಗ್ಗೆ 10.30 ಗಂಟೆಗೆ ಕೃಷ್ಣಮೂರ್ತಿಪುರಂನಲ್ಲಿರುವ ಶಾರದಾ ವಿಲಾಸ ಕಾಲೇಜು ಶತಮಾನೋತ್ಸವ ಭವನದಲ್ಲಿ ಏರ್ಪಡಿಸಲಾಗಿದೆ.
ಅಂದು ಬೆಳಿಗ್ಗೆ 10.30ಕ್ಕೆ ನಡೆಯುವ ಕಾರ್ಯಕ್ರಮದ ಅಧ್ಯಕ್ಷತೆ ಯನ್ನು ಹಿರಿಯ ವಿದ್ವಾಂಸರಾದ ಡಾ.ಎನ್.ಎಸ್. ತಾರಾನಾಥ್ ವಹಿಸುವರು. ಮುಖ್ಯ ಅತಿಥಿಗಳಾಗಿ ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಎಸ್.ಟಿ.ರವಿಕುಮಾರ್ ಭಾಗವಹಿಸುವರು. ಮಾನಸಗಂಗೋತ್ರಿ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಡಾ.ನಿರಂಜನ ವಾನಳ್ಳಿ ಕೃತಿಗಳನ್ನು ಲೋಕಾ ರ್ಪಣೆ ಮಾಡಲಿದ್ದಾರೆ. ಮಧ್ಯಾಹ್ನ 12.15ಕ್ಕೆ ನಡೆಯುವ `ರಂಗಾಭಿನಂದನ’ ಅಭಿ ನಂದನಾ ಗ್ರಂಥದ ಬಿಡುಗಡೆ ಸಮಾರಂಭದ ಅಧ್ಯಕ್ಷತೆಯನ್ನು ಖ್ಯಾತ ಉದ್ದಿಮೆ ದಾರರಾದ ಡಾ.ಬಿ.ಆರ್. ಪೈ ವಹಿಸುವರು. ರಾಷ್ಟ್ರೀಯ ಸ್ವಯಂ ಸಂಘದ ಹಿರಿಯ ಪ್ರಚಾರಕ ಸು.ರಾಮಣ್ಣ ಕೃತಿ ಲೋಕಾರ್ಪಣೆ ಮಾಡುವರು. ಲೇಖಕ ಸಂಸ್ಕøತಿ ಸುಬ್ರಹ್ಮಣ್ಯ ಅಭಿನಂದನಾ ಗ್ರಂಥ ಕುರಿತು ಮಾತನಾಡುವರು. ಮುಖ್ಯ ಅತಿಥಿಗಳಾಗಿ ಮಾಜಿ ವಿಧಾನ ಪರಿಷತ್ ಸದಸ್ಯ ಗೋ.ಮಧುಸೂದನ, ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ, ಸಂಸ್ಕಾರ ಭಾರತಿ ಪ.ರ.ಕೃಷ್ಣಮೂರ್ತಿ ಭಾಗವಹಿಸುವರು.

Translate »