ಡಾ. ವೆಂಕಟೇಶ್ ನೂತನ ಜಿಲ್ಲಾ ಆರೋಗ್ಯಾಧಿಕಾರಿ
ಮೈಸೂರು

ಡಾ. ವೆಂಕಟೇಶ್ ನೂತನ ಜಿಲ್ಲಾ ಆರೋಗ್ಯಾಧಿಕಾರಿ

March 14, 2019

ಮೈಸೂರು: ಮೈಸೂರು ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ವೆಂಕಟೇಶ್ ಅಧಿಕಾರ ವಹಿಸಿಕೊಂಡರು. ಡಾ. ಬಿ.ಬಸವರಾಜು ವರ್ಗಾವಣೆಯಿಂದ ತೆರವಾದ ಸ್ಥಾನಕ್ಕೆ ಹಾಸನದಲ್ಲಿ ಆರೋಗ್ಯಾಧಿಕಾರಿಯಾಗಿದ್ದ ಡಾ. ವೆಂಕಟೇಶ್ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಅವರು ಸೋಮವಾರ ಮೈಸೂರಿನ ನಜರ್ ಬಾದಿನಲ್ಲಿರುವ ಡಿಹೆಚ್‍ಓ ಕಚೇರಿಯಲ್ಲಿ ಅಧಿಕಾರ ವಹಿಸಿಕೊಂಡರು.

ನಂತರ ಮಾತನಾಡಿದ ಅವರು, ಮೈಸೂರು ಜಿಲ್ಲೆ ವೈದ್ಯಕೀಯ ಸೇವೆಯಲ್ಲಿ ಮುಂಚೂಣಿ ಯಲ್ಲಿದೆ. ಸರ್ಕಾರಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಮೂಲಕ ಗ್ರಾಮೀಣ ಪ್ರದೇಶದ ಪ್ರಾಥಮಿಕ ಹಾಗೂ ಸಮುದಾಯ ಆರೋಗ್ಯ ಕೇಂದ್ರ ಗಳಲ್ಲಿ ಉತ್ತಮ ವೈದ್ಯಕೀಯ ಸೇವೆ ಒದಗಿಸಲು ಪ್ರಯತ್ನಿಸುತ್ತೇನೆ ಎಂದರು. ಮೈಸೂರು ಫಾರ್ಮಸಿಸ್ಟ್‍ಗಳ ಸಂಘದ ಅಧ್ಯಕ್ಷ ಸೋಮಶೇಖರ್, ಪದಾಧಿಕಾರಿಗಳಾದ ಎಸ್. ಮಂಜುನಾಥ್, ಇತರರು ಡಾ.ವೆಂಕಟೇಶ್‍ರನ್ನು ಪುಷ್ಪಗುಚ್ಛ ನೀಡಿ ಅಭಿನಂದಿಸಿದರು.

Translate »