ಮೈಸೂರು: ಮೈಸೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ (ಕಸಾಪ) ಅಧ್ಯಕ್ಷ ಡಾ. ವೈ.ಡಿ.ರಾಜಣ್ಣ ಅವರ 50ನೇ ಹುಟ್ಟುಹಬ್ಬದ ಅಂಗ ವಾಗಿ ಡಾ.ವೈ.ಡಿ.ರಾಜಣ್ಣರವರ ಅಭಿನಂದನಾ ಸಮಿತಿ ವತಿಯಿಂದ ಅ.24ರಂದು ಅಭಿನಂದನೆ ಹಾಗೂ ಅಭಿ ನಂದನಾ ಗ್ರಂಥ ಬಿಡುಗಡೆ ಸಮಾರಂಭ ಏರ್ಪಡಿಸ ಲಾಗಿದೆ ಎಂದು ಅಭಿನಂದನಾ ಗ್ರಂಥದ ಪ್ರಧಾನ ಸಂಪಾದಕ ಹಾಗೂ ರಂಗಕರ್ಮಿ ರಾಜಶೇಖರ ಕದಂಬ ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸೋಮ ವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾನಸ ಗಂಗೋತ್ರಿಯ ರಾಣಿ ಬಹದ್ದೂರ್ ಸಭಾಂಗಣದಲ್ಲಿ ಅಂದು ಸಂಜೆ 4.30ಕ್ಕೆ ಉನ್ನತ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ಸಮಾರಂಭ ಉದ್ಘಾಟಿಸಲಿದ್ದಾರೆ. ಮಾಜಿ ಶಾಸಕರೂ ಆದ ಅಭಿನಂದನಾ ಸಮಿತಿ ಅಧ್ಯಕ್ಷ ವಾಸು ಅವರು ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಹೇಳಿದರು.
`ವಿರಾಜಮಾನ’ ಅಭಿನಂದನಾ ಗ್ರಂಥವನ್ನು ಕಸಾಪ ಅಧ್ಯಕ್ಷ ಡಾ.ಮನು ಬಳಿಗಾರ್ ಬಿಡುಗಡೆ ಮಾಡಲಿದ್ದು, ಡಾ.ವೈ.ಡಿ.ರಾಜಣ್ಣ ಅವರನ್ನು ಹಿರಿಯ ಸಾಹಿತಿ ಡಾ.ಸಿ.ಪಿ .ಕೃಷ್ಣಕುಮಾರ್ (ಡಾ.ಸಿಪಿಕೆ) ಅಭಿನಂದಿಸಲಿದ್ದಾರೆ. ಶಾಸಕ ಎಲ್.ನಾಗೇಂದ್ರ ಅತಿಥಿಯಾಗಿ ಪಾಲ್ಗೊಳ್ಳಲಿದ್ದು, ಕವಯತ್ರಿ ಡಾ.ಟಿ.ಸಿ.ಪೂರ್ಣಿಮಾ ಅಭಿನಂದನಾ ಗ್ರಂಥ ಕುರಿತು ಮಾತನಾಡಲಿದ್ದಾರೆ. ಸಂಸ್ಕøತಿ ಚಿಂತಕ ಡಾ.ಗುಬ್ಬಿಗೂಡು ರಮೇಶ್ ಅಭಿನಂದನಾ ನುಡಿಗಳನ್ನಾಡಲಿದ್ದಾರೆ. ಜಿಲ್ಲಾ ಕಸಾಪ ಮಾಜಿ ಅಧ್ಯಕ್ಷ ಮಡ್ಡೀಕೆರೆ ಗೋಪಾಲ್, ಕಾರ್ಯದರ್ಶಿ ಕೆ.ಎಸ್.ನಾಗರಾಜು, ಸಂಚಾಲಕ ಮೂಗೂರು ನಂಜುಂಡಸ್ವಾಮಿ ಗೋಷ್ಠಿಯಲ್ಲಿದ್ದರು.