ನಿಖಿಲ್ ಪರ ಡಾ. ಯತೀಂದ್ರ, ಹರೀಶ್‍ಗೌಡ ಜಂಟಿ ಪ್ರಚಾರ
ಮಂಡ್ಯ

ನಿಖಿಲ್ ಪರ ಡಾ. ಯತೀಂದ್ರ, ಹರೀಶ್‍ಗೌಡ ಜಂಟಿ ಪ್ರಚಾರ

April 15, 2019

ಮಂಡ್ಯ: ಕಾಂಗ್ರೆಸ್ ಕಾರ್ಯಕರ್ತರು ಗೊಂದಲ ಮಾಡಿ ಕೊಳ್ಳದೇ ಮಾಜಿ ಮುಖ್ಯಮಂತ್ರಿ ಸಿದ್ದ ರಾಮಯ್ಯರವರ ಮಾತಿನಂತೆ ಕಾಂಗ್ರೆಸ್ ಜೆಡಿಎಸ್ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಯವರಿಗೆ ಮತ ನೀಡಿ ಗೆಲ್ಲಿಸಬೇಕೆಂದು ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಮನವಿ ಮಾಡಿದರು.

ಮಳವಳ್ಳಿ ತಾಲ್ಲೂಕಿನ ಚನ್ನಪಿಳ್ಳೇ ಕೊಪ್ಪಲು ಗ್ರಾಮದಲ್ಲಿ ಮೈತ್ರಿ ಅಭ್ಯರ್ಥಿ ನಿಖಿಲ್ ಪರ ಪ್ರಚಾರ ನಡೆಸಿದ ಸಂದರ್ಭ ದಲ್ಲಿ ಮಾತನಾಡಿದ ಅವರು, ಕೋಮು ವಾದಿ ಪಕ್ಷ ಬಿಜೆಪಿಯನ್ನು ಸೋಲಿಸಬೇ ಕೆಂದು ಮೈತ್ರಿಯನ್ನು ಮಾಡಿಕೊಂಡಿದ್ದು, ಕರ್ನಾಟಕದಲ್ಲಿ ಮೈತ್ರಿ ಅಭ್ಯರ್ಥಿಗಳು 20ಕ್ಕಿಂತಲ್ಲೂ ಹೆಚ್ಚು ಸ್ಥಾನವನ್ನು ಲೋಕ ಸಭಾ ಚುನಾವಣೆಯಲ್ಲಿ ಗೆಲುವು ಪಡೆದರೇ ಕಾಂಗ್ರೆಸ್ ವರಿಷ್ಠರಾದ ರಾಹುಲ್‍ಗಾಂಧಿ ಪ್ರಧಾನ ಮಂತ್ರಿಯಾಗಲಿದ್ದಾರೆಂದು ಹೇಳಿದರು.

ನಾವು ಕೊಟ್ಟ ಮಾತು ತಪ್ಪುವುದಿಲ್ಲ, ಒಳಗೊಂದು ಹೊರಗೊಂದು ಮಾಡುವು ದಿಲ್ಲ, ಸಿದ್ದರಾಮಯ್ಯರವರು ನೇರ ನುಡಿ, ನೇರ ನಡೆಯಿಂದ ಬದುಕುತ್ತಿದ್ದು, ಈಗಾಗಲೇ ಸಮಾವೇಶಗಳಲ್ಲಿ ಮೈತ್ರಿ ಅಭ್ಯರ್ಥಿಯ ಪರ ಪ್ರಚಾರ ನಡೆಸುತ್ತಿದ್ದು, ಕಾಂಗ್ರೆಸ್ ಕಾರ್ಯಕರ್ತರು ಯಾವುದೇ ಗೊಂದಲ ಮಾಡಿಕೊಳ್ಳದೇ ಮೈತ್ರಿ ಅಭ್ಯರ್ಥಿಗೆ ಮತ ನೀಡಬೇಕೆಂದು ಕೋರಿದರು.

ಮಂಡ್ಯದಲ್ಲಿ ಮೈತ್ರಿ ಅಭ್ಯರ್ಥಿಗೆ ಬೆಂಬಲ ಕೊಟ್ಟರೇ ಮೈಸೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿಪರ ನಮಗೂ ಪರಸ್ಪರ ಬೆಂಬಲ ಅವಶ್ಯಕವಾಗಿದೆ, ಈಗಾಗಲೇ ಸಿದ್ದ ರಾಮಯ್ಯ ಮತ್ತು ಸಚಿವ ಜಿ.ಟಿ. ದೇವೇಗೌಡ ಮೈಸೂರು ಭಾಗದಲ್ಲಿ ಪ್ರಚಾರ ನಡೆಸು ತ್ತಿದ್ದು, ತಾನು ಮತ್ತು ಹರೀಶ್‍ಗೌಡರು ಮಳವಳ್ಳಿ ಭಾಗದಲ್ಲಿ ಮೈತ್ರಿ ಅಭ್ಯರ್ಥಿ ಪರವಾಗಿ ಪ್ರಚಾರ ನಡೆಸುತ್ತಿದ್ದು, ಕಾಂಗ್ರೆಸ್ ಕಾರ್ಯ ಕರ್ತರು ಯಾವುದೇ ಗೊಂದಲ ಮಾಡಿ ಕೊಳ್ಳದೇ ಮೈತ್ರಿ ಅಭ್ಯರ್ಥಿಯನ್ನು ಗೆಲ್ಲಿಸಬೇಕೆಂದು ತಿಳಿಸಿದರು,ಎಲ್ಲಾ ಕಾರ್ಯಕರ್ತರು ಮೈತ್ರಿ ಅಭ್ಯರ್ಥಿ ಪರವಾಗಿ ಕೆಲಸಮಾಡಬೇಕೆಂದು ಆದೇಶ ನೀಡಲಾಗಿದೆ, ಈಗಾಗಲೇ ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದ್ದವರನ್ನು ಅಮಾನತು ಮಾಡಲಾಗಿದೆ, ಸಿದ್ದರಾಮಯ್ಯ ರವರು ಪ್ರಮಾಣಿಕವಾಗಿ ಸಂಪೂರ್ಣ ಬೆಂಬಲವನ್ನು ಮೈತ್ರಿ ಅಭ್ಯರ್ಥಿಗೆ ನೀಡಿದ್ದಾರೆ, ಮೈತ್ರಿ ಪಾಲನೆ ಮಾಡುತ್ತಿದ್ದಾರೆಂದರು.

ಸಚಿವ ಜಿ.ಟಿ. ದೇವೇಗೌಡರ ಪುತ್ರ ಹರೀಶ್‍ಗೌಡ ಮಾತನಾಡಿ, ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಮಂಡ್ಯ ಜಿಲ್ಲೆಯ ಅಭಿವೃದ್ದಿಗೆ ಸಾವಿರಾರು ಕೋಟಿ ರೂ ಅನುದಾನ ನೀಡಿದ್ದಾರೆ, ಮಂಡ್ಯ ಜಿಲ್ಲೆಯ ಅಭಿವೃದ್ದಿಗೆ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಯವರನ್ನು ಗೆಲ್ಲಿಸ ಬೇಕೆಂದು ಕೋರಿದರು.

ಮಂಡ್ಯ ಜಿಲ್ಲೆಯಲ್ಲಿ ನಿಖಿಲ್ ಕುಮಾರ ಸ್ವಾಮಿಯವರನ್ನು ಗೆಲ್ಲಿಸಿದರೇ ನಾವು ಮೈಸೂರಿನಲ್ಲಿ ಮೈತ್ರಿ ಅಭ್ಯರ್ಥಿಯನ್ನು ಗೆಲ್ಲಿಸುತ್ತೇವೆ. ಮಂಡ್ಯ ಜಿಲ್ಲೆಯ ಜವಾಬ್ದಾರಿ ಜಿ.ಟಿ ದೇವೇಗೌಡರದ್ದಾಗಿದ್ದು, ಮಂಡ್ಯ ಜಿಲ್ಲೆಯ ಮೈತ್ರಿ ಅಭ್ಯರ್ಥಿಯ ಗೆಲುವಿಗೆ ಸಿದ್ದರಾಮಯ್ಯರವರು ಜವಾಬ್ದಾರಿಯಾಗಿ ರುತ್ತಾರೆ, ನಿಖಿಲ್‍ಕುಮಾರಸ್ವಾಮಿಯ ವರನ್ನು ಗೆಲ್ಲಿಸುವುದರ ಮೂಲಕ ಕುಮಾರ ಸ್ವಾಮಿಯವರ ಕೈ ಬಲ ಪಡಿಸಬೇಕೆಂದು ಮನವಿ ಮಾಡಿದರು. ಇದೇ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯ ಮರಿತಿಬ್ಬೇಗೌಡ, ಜಿಪಂ ಸ್ಥಾಯಿ ಸಮಿತಿ ಅಧ್ಯಕ್ಷ ರವಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

Translate »